Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಫ್‍ಎಸ್‍ಎಲ್‍ನಲ್ಲಿ ಖಾಲಿ ಇರುವ...

ಎಫ್‍ಎಸ್‍ಎಲ್‍ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ23 Jun 2026 8:44 PM IST
share
ಎಫ್‍ಎಸ್‍ಎಲ್‍ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ವಿಧಿ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯದಲ್ಲಿ (ಎಫ್‍ಎಸ್‍ಎಲ್)ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಆದ್ಯತೆ ನೀಡಲಿದ್ದು, ವೈಜ್ಞಾನಿಕ ಅಧಿಕಾರಿಗಳು ಸೇರಿದಂತೆ ಅಗತ್ಯ ಸಿಬ್ಬಂದಿ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.

ಮಂಗಳವಾರ ಇಲ್ಲಿನ ಮಡಿವಾಳದಲ್ಲಿರುವ ಎಫ್‍ಎಸ್‍ಎಲ್ ಕಚೇರಿಯಲ್ಲಿ ಆಯೋಜಿಸಿದ್ದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿಯೇ ಅತ್ಯಾಧುನಿಕ ಹಾಗೂ ಪರಿಣಾಮಕಾರಿ ಫೋರೆನ್ಸಿಕ್ ತನಿಖಾ ವ್ಯವಸ್ಥೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಎಫ್‍ಎಸ್‍ಎಲ್ ರಾಷ್ಟ್ರವೇ ಹೆಮ್ಮೆಪಡುವಂತಹ ಸಾಧನೆ ಮಾಡಿದ್ದು, ನಿರ್ದೇಶನಾಲಯಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಎಫ್‍ಎಸ್‍ಎಲ್ ಅಪರಾಧ ತನಿಖೆಯಲ್ಲಿ ವೈಜ್ಞಾನಿಕ ನಿಖರತೆ, ತಾಂತ್ರಿಕ ಸಾಮಥ್ರ್ಯ ಮತ್ತು ವೇಗದ ವರದಿ ವ್ಯವಸ್ಥೆಯಲ್ಲಿ ದೇಶದ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ. ದೇಶದಲ್ಲಿಯೇ ಅತ್ಯಾಧುನಿಕ ಹಾಗೂ ಪರಿಣಾಮಕಾರಿ ಫೋರೆನ್ಸಿಕ್ ತನಿಖಾ ವ್ಯವಸ್ಥೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಎಫ್‍ಎಸ್‍ಎಲ್ ರಾಷ್ಟ್ರವೇ ಹೆಮ್ಮೆಪಡುವಂತಹ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು.

ರಾಜ್ಯದ ಡಿಜಿಟಲ್ ಮತ್ತು ಮೊಬೈಲ್ ಫೋರೆನ್ಸಿಕ್ ವಿಭಾಗಗಳಿಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಲೆಕ್ಟ್ರಾನಿಕ್ಸ್ ಎವಿಡೆನ್ಸ್ ಎಕ್ಸಾಮಿನರ್ ಸ್ಥಾನಮಾನ ದೊರೆತಿರುವುದು ಗಮನಾರ್ಹ ಸಾಧನೆಯಾಗಿದೆ. ಇತ್ತೀಚೆಗೆ ಸರಕಾರದ ಸಂಸ್ಥೆಗಳಿಗೆ ನೀಡಲಾಗುವ ಪ್ರತಿಷ್ಠಿತ ಡಿ.ಎಸ್.ಸಿ.ಐ ಪ್ರಶಸ್ತಿಯನ್ನೂ ಕರ್ನಾಟಕ ಎಫ್‍ಎಸ್‍ಎಲ್ ತನ್ನ ಅತ್ಯುತ್ತಮ ಡಿಜಿಟಲ್ ಫೋರೆನ್ಸಿಕ್ ಸಾಮಥ್ರ್ಯಕ್ಕಾಗಿ ಪಡೆದಿದೆ. ಇದು ರಾಜ್ಯದ ತನಿಖಾ ವ್ಯವಸ್ಥೆಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ‘ವೈಲ್ಡ್ ಲೈಫ್ ಫೋರೆನ್ಸಿಕ್ ಘಟಕ’ ಆರಂಭಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಇದು ವನ್ಯಜೀವಿ ಅಪರಾಧಗಳು ಹಾಗೂ ಅಕ್ರಮ ಸಾಗಾಟ ಪ್ರಕರಣಗಳ ತನಿಖೆಗೆ ನೆರವಾಗಲಿದೆ ಎಂದು ಅವರು ವಿವರಿಸಿದರು.

ಸಭೆಯಲ್ಲಿ ಡಿಜಿಪಿ ಡಾ.ಎಂ.ಎ.ಸಲೀಂ, ಎಡಿಜಿಪಿ ಪಿ.ಹರಿಶೇಖರ್, ಸಂಸ್ಥೆಯ ನಿರ್ದೇಶಕಿ ದಿವ್ಯಾ ಗೋಪಿನಾಥ್ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

‘ಪತ್ರಕರ್ತೆ ಗೌರಿ ಲಂಕೇಶ್, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ, ವಿಚಾರವಾದಿಗಳಾದ ನರೇಂದ್ರ ದಭೋಲ್ಕರ್ ಹಾಗೂ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣಗಳ ನಡುವಿನ ವೈಜ್ಞಾನಿಕ ಸಂಪರ್ಕವನ್ನು ಫೋರೆನ್ಸಿಕ್ ವಿಶ್ಲೇಷಣೆಯ ಮೂಲಕ ಪತ್ತೆಹಚ್ಚಿದ ಎಫ್‍ಎಸ್‍ಎಲ್‍ನ ಕಾರ್ಯ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಅಲ್ಲದೆ ಪ್ರಕರಣಗಳ ಸಂಖ್ಯೆ ಹೆಚ್ಚಾದರೂ, ತಂತ್ರಜ್ಞಾನ ಬಳಕೆ ಹಾಗೂ ಕಾರ್ಯಕ್ಷಮತೆಯಿಂದ ಹಲವು ವಿಭಾಗಗಳಲ್ಲಿ ವರದಿ ನೀಡುವ ಅವಧಿಯನ್ನು 40 ತಿಂಗಳಿಂದ ಕೇವಲ 1 ರಿಂದ 4 ತಿಂಗಳಿಗೆ ಇಳಿಸಿರುವುದು ಮತ್ತೊಂದು ಗಮನಾರ್ಹ ಸಾಧನೆಯಾಗಿದೆ’

-ಪ್ರಿಯಾಂಕ್ ಖರ್ಗೆ, ಗೃಹ ಸಚಿವ

Tags

Priyank KhargeFSL
share
ವಾರ್ತಾಭಾರತಿ
ವಾರ್ತಾಭಾರತಿ
Next Story
X