Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಕಠಿಣ...

ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿ: ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 Feb 2024 10:15 PM IST
share
ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ರವಿಕುಮಾರ್ ಗೌಡ ಗಣಿಗ, ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ನಿಷೇಧಿಸುವ ಕುರಿತು ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು.

ಬೆಟ್ಟಿಂಗ್ ದಂಧೆ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದಲ್ಲಿ ಹರಡಿಕೊಂಡಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಚರ್ಚಿಸಿ ಕಠಿಣ ಕಾಯ್ದೆ ರೂಪಿಸಬೇಕಾದ ಅಗತ್ಯತೆ ಇದೆ. ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಾವು ರಾಜ್ಯಕ್ಕೆ ಸೀಮಿತವಾಗಿ ಕಠಿಣ ಕಾನೂನು ರೂಪಿಸುತ್ತೇವೆ ಎಂದು ಅವರು ಹೇಳಿದರು.

ಕ್ರಿಕೆಟ್ ಬೆಟ್ಟಿಂಗ್‍ನಿಂದಾಗಿ ರೌಡಿಸಂ ಹೆಚ್ಚಾಗುತ್ತಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕಅರಸಿನ ಕೆರೆ ಗ್ರಾಮದಲ್ಲಿ ಕೇವಲ 11 ಸಾವಿರ ರೂ.ಬೆಟ್ಟಿಂಗ್ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೊಲೆಯಾಗಿದೆ. ಬೆಟ್ಟಿಂಗ್ ನಡೆಸುವವರು ಮೂರು ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡಿರುತ್ತಾರೆ. ಪೊಲೀಸರೊಂದಿಗೆ ಹೊಂದಾಣಿಕೆ ಮಾಡಿಕೊಂಡು ರಾಜಾರೋಷವಾಗಿ ತಮ್ಮ ಕೆಲಸ ಮಾಡುತ್ತಿರುತ್ತಾರೆ. ಇವರಿಗೆ ಕಡಿವಾಣ ಹಾಕಲೇಬೇಕು.

ರವಿಕುಮಾರ್ ಗೌಡ ಗಣಿಗ, ಕಾಂಗ್ರೆಸ್ ಸದಸ್ಯ

ಬೆಟ್ಟಿಂಗ್ ಅನ್ನೋದು ಸಾವಿರಾರು ಕೋಟಿ ರೂ.ಗಳ ದಂಧೆಯಾಗಿದೆ. ಫುಟ್‍ಪಾತ್ ಮೇಲೆ ಇದ್ದವರು ಇವತ್ತು 50-60 ಕೋಟಿ ರೂ.ಗಳ ವಿಲಾಸಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಪೊಲೀಸರು, ಪ್ರಕರಣಗಳಿಗೆಲ್ಲ ಇವರು ಬಗ್ಗುವವರಲ್ಲ. ಜಯನಗರದಲ್ಲಿ ನನ್ನ ಪರಿಚಯಸ್ಥ ಡೆವಲಪರ್ ಒಬ್ಬ ಬೆಟ್ಟಿಂಗ್ ಗೀಳಿಗೆ ಬಿದ್ದು ತಮ್ಮ ಮನೆ, ಮಠ ಎಲ್ಲವನ್ನೂ ಕಳೆದುಕೊಂಡು ಬೀದಿಪಾಲಾಗಿದ್ದಾನೆ. ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ವಿಶೇಷ ಪಡೆಯನ್ನು ರಚಿಸಬೇಕು. ಇಲ್ಲವೇ ಕಠಿಣವಾದ ಕಾನೂನು ಜಾರಿಗೆ ತರಬೇಕು.

ಆರ್.ಅಶೋಕ್, ವಿರೋಧ ಪಕ್ಷದ ನಾಯಕ

ಕೇಂದ್ರ ಹಾಗೂ ರಾಜ್ಯ ಸರಕಾರ ಸೇರಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಕಾನೂನು ರೂಪಿಸಬೇಕು. ಕೇಂದ್ರ ಸರಕಾರವು ಆನ್‍ಲೈನ್ ಗೇಮಿಂಗ್ ಗಳ ಮೇಲೆ ಶೇ.28ರಷ್ಟು ಜಿಎಸ್ಟಿ ವಿಧಿಸಿದೆ. 2024 ರಿಂದ 28ರ ವರೆಗೆ 7 ಸಾವಿರ ಕೋಟಿ ರೂ. ಟಿಡಿಎಸ್ ಆದಾಯ ಹಾಗೂ 74ಸಾವಿರ ಕೋಟಿ ರೂ.ಗಳಷ್ಟು ಜಿಎಸ್ಟಿ ನಿರೀಕ್ಷೆ ಮಾಡಲಾಗಿದೆ. ಮೊದಲು ಭಾರತದ ಕಂಪೆನಿಗಳ ಸರ್ವರ್ ಗಳಲ್ಲಿ ಆನ್‍ಲೈನ್ ಗೇಮ್‍ಗಳನ್ನು ಆಡುತ್ತಿದ್ದವರು ಜಿಎಸ್ಟಿ ಹಾಕಿದ ಬಳಿಕ ಚೀನಾ ಹಾಗೂ ಐರೋಪ್ಯ ರಾಷ್ಟ್ರಗಳ ಸರ್ವರ್ ನಲ್ಲಿ ಆಡುತ್ತಿದ್ದಾರೆ. ಇದೊಂದು ಪರ್ಯಾಯ ಆರ್ಥಿಕತೆಯಾಗಿದೆ. ಇಲ್ಲಿ ಕಪ್ಪು ಮತ್ತು ಬಿಳಿ ವಹಿವಾಟು ನಡೆಯುತ್ತಿದೆ.

ಪ್ರಿಯಾಂಕ್ ಖರ್ಗೆ, ಐಟಿ-ಬಿಟಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X