Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮರ್ಯಾದೆಗೇಡು ಹತ್ಯೆ ಪ್ರಕರಣಗಳ...

ಮರ್ಯಾದೆಗೇಡು ಹತ್ಯೆ ಪ್ರಕರಣಗಳ ವಿಚಾರದಲ್ಲಿ ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 Aug 2023 5:03 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮರ್ಯಾದೆಗೇಡು ಹತ್ಯೆ ಪ್ರಕರಣಗಳ ವಿಚಾರದಲ್ಲಿ ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.29: ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ X' (ಈ ಹಿಂದಿನ ಟ್ವಿಟರ್)ನಲ್ಲಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಟೀಕಿಸಿದ್ದಾರೆ.

ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. "ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ". ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X