ಎಡಿಜಿಪಿಗೆ ಬೆದರಿಕೆ ಪ್ರಕರಣ: ಎಚ್ಡಿಕೆ ಜಾಮೀನು ರದ್ದು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಹೊಸದಿಲ್ಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿದ್ದ ನ್ಯಾಯಪೀಠ, ರಾಜಕೀಯ ಹೋರಾಟಗಳಿಗೆ ನ್ಯಾಯಪೀಠವನ್ನು ವೇದಿಕೆ ಮಾಡಿಕೊಳ್ಳಬೇಡಿ ಎಂದು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿತು.
Next Story





