Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 5,8,9 ಮತ್ತು 11ನೇ ತರಗತಿ...

5,8,9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗೆ ಅನುಮತಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ8 April 2024 12:41 PM IST
share
5,8,9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗೆ ಅನುಮತಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಹೊಸದಿಲ್ಲಿ: ಕರ್ನಾಟಕ ಸ್ಟೇಟ್‌ ಬೋರ್ಡ್‌ಗೆ ಸಂಯೋಜಿತವಾಗಿರುವ 5,8,9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲು ಅನುಮತಿಸಿ ಕರ್ನಾಟಕ ಹೈಕೋರ್ಟಿನ ವಿಭಾಗೀಯ ಪೀಠ ಹೊರಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಇಂದು ತಡೆಯಾಜ್ಞೆ ವಿಧಿಸಿದೆ.

ಯಾವುದೇ ಶಾಲೆ ಘೋಷಿಸಿರುವ ಬೋರ್ಡ್‌ ಪರೀಕ್ಷೆಗಳ ಫಲಿತಾಂಶಗಳನ್ನು ತಡೆಹಿಡಿಯಬೇಕು ಮತ್ತು ಯಾವುದೇ ಉದ್ದೇಶಕ್ಕೆ ಪರಿಗಣಿಸಬಾರದು ಹಾಗೂ ಇಲ್ಲಿಯ ತನಕ ಈ ಬೋರ್ಡ್‌ ಪರೀಕ್ಷೆಯ ಫಲಿತಾಂಶಗಳನ್ನು ವಿದ್ಯಾರ್ಥಿಗಳ ಹೆತ್ತವರಿಗೆ ತಿಳಿಸದೇ ಇದ್ದರೆ ಮುಂದಕ್ಕೆ ತಿಳಿಸಬಾರದು ಎಂದೂ ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪಂಕಜ್‌ ಮಿತ್ತಲ್‌ ಅವರ ಪೀಠ ಆದೇಶಿಸಿದೆ.

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್​ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಬಿಲಾ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಲ್ ಅವರಿದ್ದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ‌‌. ಅಲ್ಲದೆ ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದ ವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಅವರ ಹೆತ್ತವರಿಗೆ, ಶಾಲೆಗಳಿಗೆ ಮತ್ತು ಶಾಲಾಡಳಿತಗಳಿಗೆ ಅನಗತ್ಯ ಒತ್ತಡವನ್ನು ಈ ಬೋರ್ಡ್‌ ಪರೀಕ್ಷೆಗಳ ಮೂಲಕ ರಾಜ್ಯ ಸರ್ಕಾರ ಸೃಷ್ಟಿಸಿದ ಜ್ವಲಂತ ಉದಾಹರಣೆ ಇದಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಮಕ್ಕಳ ಹಕ್ಕುಗಳ ಕಾಯಿದೆ ಮತ್ತು ಶಿಕ್ಷಣ ಹಕ್ಕು ಕಾಯಿದೆ 2009ಗೆ ಅನುಗುಣವಾಗಿ ಹೈಕೋರ್ಟ್‌ ಆದೇಶ ಇರಲಿಲ್ಲ ಎಂದು ಹೊರನೋಟಕ್ಕೆ ತಿಳಿಯುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ, ಕರ್ನಾಟ ಮತ್ತು ಇತರರು ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿದೆ.

ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.​ 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದರು. ಬಳಿಕ ಮೇಲ್ಮನವಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಹೀಗಾಗಿ ಮತ್ತೆ ಖಾಸಗಿ ಶಾಲೆಗಳು ಸುಪ್ರೀಂಕೋರ್ಟ್ ಮೊರೆಹೋಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X