Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಮ್ಮ ಹೋರಾಟವನ್ನು ಮತದಾರರ ಮುಂದೆ...

ನಿಮ್ಮ ಹೋರಾಟವನ್ನು ಮತದಾರರ ಮುಂದೆ ನಡೆಸಿ: ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು

ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್ ಪ್ರಕರಣ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ21 July 2025 2:19 PM IST
share
ನಿಮ್ಮ ಹೋರಾಟವನ್ನು ಮತದಾರರ ಮುಂದೆ ನಡೆಸಿ: ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು

ಹೊಸದಿಲ್ಲಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಎಫ್‌ಐಆರ್‌ ರದ್ದುಗೊಳಿದ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ, ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿತು. ಈ ವೇಳೆ ನ್ಯಾಯಮೂರ್ತಿಗಳು ರಾಜ್ಯ ಸರ್ಕಾರದ ವಕೀಲರಿಗೆ, "ವಿಷಯವನ್ನು ರಾಜಕೀಯಗೊಳಿಸಬೇಡಿ. ಮತದಾರರ ಮುಂದೆ ನಿಮ್ಮ ಹೋರಾಟಗಳನ್ನು ಮಾಡಿ" ಎಂಬ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

2024ರ ನವೆಂಬರ್ 7ರಂದು ತೇಜಸ್ವಿ ಸೂರ್ಯ ಅವರು ತಮ್ಮ X ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಇದರಲ್ಲಿ ಹಾವೇರಿ ಜಿಲ್ಲೆಯ ರೈತರೊಬ್ಬರು ತನ್ನ ಭೂಮಿಯನ್ನು ವಕ್ಫ್ ಮಂಡಳಿ ವಶಪಡಿಸಿಕೊಂಡಿದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದರು

ತನಿಖೆಯಲ್ಲಿ ಈ ಮಾಹಿತಿ ಸುಳ್ಳು ಎಂದು ಸ್ಪಷ್ಟವಾಯಿತು. ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೀಡಿದ ಮಾಹಿತಿ ಪ್ರಕಾರ, ರೈತನು ಬೆಳೆ ನಷ್ಟ ಹಾಗೂ 7 ಲಕ್ಷ ರೂ. ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿದ್ದನು ಎಂಬುದಾಗಿ ಮೃತರ ತಂದೆಯು ಕೂಡ ವಿವರಿಸಿದ್ದರು. ಈ ಹಿನ್ನೆಲೆಯಲ್ಲಿ ತೇಜಸ್ವಿ ತಮ್ಮ ಪೋಸ್ಟ್ ಅನ್ನು ಅಳಿಸಿ ಹಾಕಿದ್ದರು.

ಈ ಪೋಸ್ಟ್ ಆಧಾರರಹಿತ ಎಂದು ಗೊತ್ತಾದ ನಂತರ, ಪೊಲೀಸರು ಭಾರತೀಯ ನ್ಯಾಯ ಸಂಹಿತೆ, 2023 (ಬಿಎನ್‌ಎಸ್) ಸೆಕ್ಷನ್ 353(2) ಅಡಿಯಲ್ಲಿ ಸ್ವಯಂಪ್ರೇರಿತ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಈ ಎಫ್‌ಐಆರ್ ಕುರಿತು ತೇಜಸ್ವಿ ಸಲ್ಲಿಸಿದ್ದ ಅರ್ಜಿಯಲ್ಲಿ, ಹೈಕೋರ್ಟ್ ಪೀಠವು, "ಟ್ವೀಟ್‌ ಮಾಡಲಾಗಿದೆ, ನಂತರ ಸ್ಪಷ್ಟಪಡಿಸಲಾಗಿದೆ ಮತ್ತು ಅಳಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ತನಿಖೆ ನಡೆಸಲು ಸಾಕಷ್ಟು ಆಧಾರವಿಲ್ಲ. ಇದನ್ನು ಮುಂದುವರಿಸಿದರೆ ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ," ಎಂಬುದಾಗಿ ಅಭಿಪ್ರಾಯಪಟ್ಟು ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು.

ಕರ್ನಾಟಕ ಸರ್ಕಾರ ಈ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್‌ನ ತೀರ್ಪು ಸರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ರಾಜ್ಯದ ಮೇಲ್ಮನವಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X