ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಬಿ.ಎಸ್. ಯಡಿಯೂರಪ್ಪ (Photo: PTI)
ಹೊಸದಿಲ್ಲಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕರ್ನಾಟಕ ಹೈಕೋರ್ಟ್ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ನವೆಂಬರ್ 13ರ ಆದೇಶದ ವಿರುದ್ಧ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ.
ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ಸಿದ್ಧಾರ್ಥ್ ದವೆ ವಾದ ಮಂಡಿಸಿದರು.
ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೋರ್ವರು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.
Next Story





