ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ನಿಧನ: ರಾಹುಲ್ ಗಾಂಧಿ ಸಹಿತ ಕಾಂಗ್ರೆಸ್ ನಾಯಕರಿಂದ ಅಂತಿಮ ನಮನ

Photo:X/@INCIndia
ಬೆಂಗಳೂರು, ಜೂನ್ 9: ರವಿವಾರ ರಾತ್ರಿ ನಿಧನರಾದ ಎಐಸಿಸಿ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಹಿತ ಕಾಂಗ್ರೆಸ್ ನಾಯಕರು ಮಂಗಳವಾರ ಅಂತಿಮ ನಮನ ಸಲ್ಲಿಸಿದರು.
ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆ ಸಮೀಪದ ಬಿಇಎಲ್ ರಸ್ತೆಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ನಂತರ ಸೂರಜ್ ಹೆಗ್ಡೆ ಅವರ ಪತ್ನಿ ಶಿಲ್ಪಾ, ಪುತ್ರರಾದ ಸಮೃದ್ಧ್ ಮತ್ತು ವಿಶೃತ್ ಸೇರಿದಂತೆ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
Next Story






