Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣೆ ಸಿದ್ಧತೆಗಾಗಿ ಸುರ್ಜೆವಾಲಾ ಆಗಮನ...

ಚುನಾವಣೆ ಸಿದ್ಧತೆಗಾಗಿ ಸುರ್ಜೆವಾಲಾ ಆಗಮನ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ8 Jan 2024 6:42 PM IST
share
ಚುನಾವಣೆ ಸಿದ್ಧತೆಗಾಗಿ ಸುರ್ಜೆವಾಲಾ ಆಗಮನ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ‘ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಎಲ್ಲ ಜಿಲ್ಲೆಗಳ ಅಧ್ಯಕ್ಷರು ಹಾಗೂ ಪ್ರಮುಖ ನಾಯಕರ ಜೊತೆ ಸುರ್ಜೆವಾಲಾ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯದ ಎಲ್ಲ ನಾಯಕರ ಮೇಲೆ ಜವಾಬ್ದಾರಿ ಹೆಚ್ಚಿದೆ. ಕಳೆದ ಚುನಾವಣೆಗಿಂತ ಈ ಬಾರಿ ನಮ್ಮ ಪಕ್ಷ ಉತ್ತಮ ಸ್ಥಿತಿಯಲ್ಲಿದೆ. ಬಡಜನರ ಹಾಗೂ ಮಹಿಳೆಯರ ಆರ್ಥಿಕ ಮಟ್ಟ ಹೆಚ್ಚಿಸುವ ಉದ್ದೇಶದಿಂದ ನಮ್ಮ ಸರಕಾರ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳು ಹೆಚ್ಚು ಪರಿಣಾಮ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುವ ಬಗ್ಗೆ ಈವರೆಗೂ ಚರ್ಚೆಯಾಗಿಲ್ಲ. ಕಳೆದ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿಬಂದಿತ್ತು. ಈ ಸಲ ಕೋಲಾರ ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಆದರೆ, ಈ ಬಗ್ಗೆ ಎಲ್ಲಿಯು ಚರ್ಚೆ ನಡೆದಿಲ್ಲ. ಹೀಗಾಗಿ ಚುಮಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವ ಪ್ರಶ್ನೆ ಉದ್ಭವಿಸುವುದಿಲ್ಲ. ಸಚಿವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಕೆಪಿಸಿಸಿ ಅಧ್ಯಕ್ಷರು ಹೇಳಿದರೆ ಅಧಿಕೃತ ಎಂದು ಪರಮೇಶ್ವರ್ ತಿಳಿಸಿದರು.

ಕುಮಾರಸ್ವಾಮಿ ಅವರು ದೊಡ್ಡವರು. ಅವರು ಸರಕಾರದ ಅಭಿವೃದ್ಧಿ, ಜವಾಬ್ಧಾರಿ ಕುರಿತು ಹೇಳಿಕೆ ನೀಡಿದರೆ ಪ್ರತಿಕ್ರಿಯಿಸಬಹುದು. ಅವರು ಬಳಸುವ ಅನಗತ್ಯ ಪದಗಳ ಬಗ್ಗೆ ಹೇಗೆ ಪ್ರತಿಕ್ರಿಯಿಸಬೇಕು. ನಾನು ಅವರೊಂದಿಗೆ 14 ತಿಂಗಳು ಕೆಲಸ ಮಾಡಿದ್ದೇನೆ. ಈ ರೀತಿ ಏಕೆ ಮಾತನಾಡುತ್ತಿದ್ದಾರೋ ನನಗೆ ಗೊತ್ತಿಲ್ಲ. ಅವರ ರೀತಿ ನನಗೆ ಮಾತನಾಡಲು ಬರುವುದಿಲ್ಲ ಎಂದು ಪರಮೇಶ್ವರ್ ನುಡಿದರು.

ಕರವೇ ನಾರಾಯಣಗೌಡ ಬಿಡುಗಡೆ ನಂತರ ಮತ್ತೆ ಪ್ರತಿಭಟನೆ ನಡೆಸುತ್ತಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ನಡೆಸುವುದು ಅವರ ಹಕ್ಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು, ಸಾರ್ವಜನಿಕ ಆಸ್ತಿ ಹಾನಿ ಮಾಡುವುದು ತಪ್ಪು. ಕಾನೂನು ಕೈಗೆತ್ತಿಗೊಳ್ಳದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ ಎಂದು ಪರಮೇಶ್ವರ್ ಹೇಳಿದರು.

ನಾನು ದೇಣಿಗೆ ಕೊಟ್ಟಿದ್ದೇನೆ:

‘ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು. ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ದ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದೂಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದೂಗಳಿಲ್ಲವೇ? ಅದರಲ್ಲೇನು ತಪ್ಪಿದೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X