ರಾಜ್ಯದಲ್ಲಿ 5.4 ಕೋಟಿ ಜನರ ʼಸಮೀಕ್ಷೆʼ ಪೂರ್ಣ

ಬೆಂಗಳೂರು : ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇದುವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ 5,48,61,073 ಜನರ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ.
ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ. ದಯಾನಂದ್ ಪ್ರಕಟನೆ ಹೊರಡಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯಲ್ಲಿ ಒಟ್ಟು 19,17,690 ಕುಟುಂಬಗಳ 58,85,650 ಜನರ ಸಮೀಕ್ಷೆ ಮುಗಿದಿದೆ. ಇನ್ನು ರಾಜ್ಯದಲ್ಲಿ ಒಟ್ಟು 1,45,31,094 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.
Next Story





