Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯ 18 ಮಂದಿ ಶಾಸಕರ ಅಮಾನತು ಆದೇಶ...

ಬಿಜೆಪಿಯ 18 ಮಂದಿ ಶಾಸಕರ ಅಮಾನತು ಆದೇಶ ವಾಪಸ್

ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಭೆ

ವಾರ್ತಾಭಾರತಿವಾರ್ತಾಭಾರತಿ25 May 2025 6:31 PM IST
share
ಬಿಜೆಪಿಯ 18 ಮಂದಿ ಶಾಸಕರ ಅಮಾನತು ಆದೇಶ ವಾಪಸ್

ಬೆಂಗಳೂರು : ಹನಿಟ್ರ್ಯಾಪ್ ಹಾಗೂ ಸರಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ವಿಧೇಯಕದ ವಿರುದ್ಧ ಬಜೆಟ್ ಅಧಿವೇಶನದ ಕೊನೆಯ ದಿನ(ಮಾ.21) ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸುವ ವೇಳೆ ಸ್ಪೀಕರ್ ಮುಖಕ್ಕೆ ಕಾಗದ ಪತ್ರಗಳನ್ನು ತೂರಿ, ಪೀಠಕ್ಕೆ ಅಗೌರವ ತೋರಿದ ದುವರ್ತನೆಗಾಗಿ 18 ಮಂದಿ ಬಿಜೆಪಿ ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿ ಹೊರಡಿಸಿದ್ದ ಆದೇಶವನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಹಿಂಪಡೆದಿದ್ದಾರೆ.

ರವಿವಾರ ಈ ಸಂಬಂಧ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಭಾ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್ ಭಾಗವಹಿಸಿದ್ದರು. ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿ ಅಂತಿಮವಾಗಿ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಯಿತು.

ಸಂಧಾನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ‘ಮಾ.21ರಂದು ಕಳೆದ ಅಧಿವೇಶನದ ಕೊನೆಯ ದಿನ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಾಂವಿಧಾನಿಕ ಮಹತ್ವದ ಹೊಂದಿರುವ ಸ್ಪೀಕರ್ ಪೀಠದ ಗೌರವ ಉಳಿಸಲು ಶಾಸಕರನ್ನು ಅಮಾನತು ಮಾಡುವ ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಿದರು.

ಈಗಾಗಲೇ ಎರಡು ತಿಂಗಳು ಆಗಿದೆ. ಉದ್ದೇಶಪೂರ್ವಕವಾಗಿ ಪೀಠಕ್ಕೆ ಅಗೌರವ ತೋರಿಲ್ಲ ಎಂದು ಶಾಸಕರು ಹೇಳಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಕೂಡ ಈ ಬಗ್ಗೆ ನನ್ನನ್ನು ಹಲವು ಬಾರಿ ಸಂಪರ್ಕಿಸಿ, ಪತ್ರ ನೀಡಿ, ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಇನ್ನು ಮುಂದೆ ಇಂತಹ ಘಟನೆ ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಶಾಸಕರಿಗೆ ತಮ್ಮ ಕರ್ತವ್ಯ ನಿರ್ವಹಿಸಲು ಅವಕಾಶ ಕೊಡುವಂತೆ ಕೋರಿದ್ದರು ಎಂದು ಖಾದರ್ ತಿಳಿಸಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ರಾಜ್ಯಪಾಲ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸೇರಿದಂತೆ ಹಲವರು ನನ್ನ ಜೊತೆ ಮಾತನಾಡಿದ್ದಾರೆ. ನಾನು ಆಗ ಪ್ರಸ್ತಾವನೆ ಸಲ್ಲಿಸಿದರೂ ಸದನ ಆ ನಿರ್ಣಯ ಅಂಗೀಕರಿಸಿದೆ. ಆದುದರಿಂದ, ಇಂದಿನ ಸಭೆಯಲ್ಲಿ ಸದನದ ಮುಖ್ಯಸ್ಥರು, ಸಭಾ ನಾಯಕರು, ಕಾನೂನು ಸಚಿವರು, ಉಪ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರು ಎಲ್ಲರೂ ಕೂತು ಚರ್ಚೆ ಮಾಡಿ ನಾವು ಕೈಗೊಂಡಿದ್ದ ಅಮಾನತು ಆದೇಶವನ್ನು ಹಿಂಪಡೆದಿದ್ದೇವೆ ಎಂದು ಅವರು ಹೇಳಿದರು.

ಶಾಸಕರು ನನ್ನ ವೈರಿಗಳಲ್ಲ: ಅಮಾನತು ಆಗಿದ್ದ ಶಾಸಕರು ನನ್ನ ಮಿತ್ರರು, ವೈರಿಗಳಲ್ಲ. ಆ ಗಳಿಗೆಯಲ್ಲಿ ಉದ್ವೇಗದಲ್ಲಿ ಅವರು ಆ ರೀತಿ ವರ್ತಿಸಿದ್ದರು. ಇಂತಹ ಘಟನೆ ಆಗಬಾರದು ಎಂದು ಶಿಸ್ತಿನ ಕ್ರಮ ಕೈಗೊಂಡಿದ್ದೆ. ಈಗ ಅವರಿಗೆ ಅರ್ಥ ಆಗಿದೆ. ಮುಂದಿನ ದಿನಗಳಲ್ಲಿ ಇಂತಹ ದುರ್ವತನೆ ಮಾಡುವುದಿಲ್ಲ ಎಂದು ನನಗೆ ವಿಶ್ವಾಸವಿದೆ. ನಾನೇ ಅವರ ಪರವಾಗಿ ಗ್ಯಾರಂಟಿ ನೀಡುತ್ತಿದ್ದೇನೆ. ಶಾಸಕರ ಗೌರವ ಉಳಿಸುವುದು ಸಭಾಧ್ಯಕ್ಷನಾಗಿ ನನ್ನ ಕರ್ತವ್ಯ. ಮುಂದಿನ ಅಧಿವೇಶನದಲ್ಲಿ ಅವರು ಭಾಗವಹಿಸಬಹುದು ಎಂದು ಖಾದರ್ ಹೇಳಿದರು.

ಈ ವಿಚಾರದಲ್ಲಿ ರಾಜ್ಯಪಾಲರ ಮಧ್ಯಪ್ರವೇಶ ಹಾಗೂ ಅಮಾನತುಗೊಂಡಿರುವ ಬಿಜೆಪಿ ಶಾಸಕರು ಕಾನೂನು ಸಮರಕ್ಕೆ ಮುಂದಾಗಿದ್ದರಿಂದ ಈ ನಿರ್ಧಾರ ಕೈಗೊಂಡಿದ್ದೀರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, ಇಂತಹ ಘಟನೆಗಳು ನಡೆದಾಗ ಸ್ಪೀಕರ್‌ಗೆ ತನ್ನದೇ ಆದ ಅಧಿಕಾರವಿರುತ್ತದೆ. ಆ ವಿಚಾರದ ಬಗ್ಗೆ ಈಗೆ ಚರ್ಚೆ ಮಾಡಲು ಹೋಗುವುದಿಲ್ಲ. ಎರಡು ತಿಂಗಳು ಆಗಿದೆ ಅವರು ಯಾರು ಎಲ್ಲಿಯೂ ಹೋಗಿಲ್ಲವಲ್ಲ ಎಂದರು.

ಸ್ಪೀಕರ್ ಕೈಗೊಳ್ಳುವ ತೀರ್ಮಾನದಲ್ಲಿ ಯಾರಿಗೂ ನೇರವಾಗಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ. ಸಲಹೆ, ಸೂಚನೆಗಳು, ಮನವಿಗಳನ್ನು ಮಾಡಬಹುದು. ಅವುಗಳೆಲ್ಲವನ್ನೂ ನಾವು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದೇವೆ. ಸದನ ಸಮಿತಿಗಳು ಪ್ರವಾಸ ಕೈಗೊಳ್ಳುತ್ತಿವೆ. ಪ್ರಮುಖ ಸಭೆಗಳು ನಡೆಯುತ್ತಿವೆ. ಅದರಲ್ಲಿ ಭಾಗವಹಿಸಲು ಈ ಶಾಸಕರಿಗೆ ಅವಕಾಶ ಇಲ್ಲದಂತಾಗಿತ್ತು. ಈ ಆದೇಶದಿಂದ ಅವರು ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಬಹುದು ಎಂದು ಸ್ಪೀಕರ್ ಹೇಳಿದರು.

‘ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯುವ ಸಂಬಂಧ ಸ್ಪೀಕರ್, ಮುಖ್ಯಮಂತ್ರಿ, ಕಾನೂನು ಸಚಿವರ ಜೊತೆ ನಿರಂತರವಾಗಿ ಚರ್ಚೆ ನಡೆದಿತ್ತು. ಆಡಳಿತ ಹಾಗೂ ವಿರೋಧ ಪಕ್ಷ ಇದ್ದರೆ ಮಾತ್ರ ಸದನದ ಹಿರಿಮೆ ಹೆಚ್ಚುತ್ತದೆ. ಕೇವಲ ಆಡಳಿತ ಪಕ್ಷ ಇದ್ದರೆ ಅದು ಸದನ ಆಗುವುದಿಲ್ಲ. ಸ್ಪೀಕರ್ ಪೀಠದ ಬಳಿ ಹೋಗಿದ್ದಕ್ಕಾಗಿ ಈಗಾಗಲೇ ನಮ್ಮ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ಆರು ತಿಂಗಳು ಅಮಾನತು ಮಾಡಿದ್ದು ಒಳ್ಳೆಯ ಕ್ರಮವಲ್ಲ. ಮುಂದೆ ಬರುವ ಸ್ಪೀಕರ್‌ಗಳು ಇದೇ ಹಾದಿ ಹಿಡಿದರೆ ಅಧಿವೇಶನ ನಡೆಯುವುದು ಕಷ್ಟವಾಗುತ್ತದೆ. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭಾನಾಯಕರಾದ ಮುಖ್ಯಮಂತ್ರಿ, ಸ್ಪೀಕರ್, ಉಪ ಮುಖ್ಯಮಂತ್ರಿ ಕಾನೂನು ಸಚಿವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’

-ಆರ್.ಅಶೋಕ್, ವಿಪಕ್ಷ ನಾಯಕ

12 ದಿನಗಳ ಹಜ್ ಪ್ರವಾಸ: ‘ಕುಟುಂಬ ಸದಸ್ಯರ ಜೊತೆ ಮೇ 26ರಂದು ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿದ್ದೇನೆ. 12 ದಿನಗಳ ಪ್ರವಾಸ ಇರಲಿದೆ. ನನ್ನಿಂದ ಯಾರಿಗಾದರೂ ತೊಂದರೆ, ನೋವಾಗಿದ್ದರೆ ಅದಕ್ಕೆ ಕ್ಷಮೆಯಾಚಿಸುತ್ತೇನೆ. ನನ್ನ ಹಜ್ ಯಾತ್ರೆಗೆ ಪ್ರಾರ್ಥನೆ ಮಾಡಿ, ನಾನು ಅಲ್ಲಿಗೆ ಹೋಗಿ ನಮ್ಮ ರಾಜ್ಯ, ದೇಶ ಹಾಗೂ ಎಲ್ಲ ಜನರ ಪರವಾಗಿ ಪ್ರಾರ್ಥನೆ ಮಾಡುತ್ತೇನೆ’

-ಯು.ಟಿ.ಖಾದರ್, ವಿಧಾನಸಭೆ ಸ್ಪೀಕರ್

‘ಘಟನೆ ಬಗ್ಗೆ ನಾವು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದೇವೆ. ನಮ್ಮ ಅಮಾನತು ಆದೇಶ ಯಾವಾಗ ಹಿಂಪಡೆಯುತ್ತಾರೋ ಎಂದು ಕಾತರದಿಂದ ಎದುರು ನೋಡುತ್ತಿದ್ದೇವು. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಾಗೂ ನಮ್ಮ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ ವಿಪಕ್ಷ ನಾಯಕ ಆರ್.ಅಶೋಕ್‍ರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ನಾವು ಹೋರಾಟ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಹೋರಾಟ ಮಾಡುತ್ತೇವೆ’

-ಸಿ.ಕೆ.ರಾಮಮೂರ್ತಿ, ಅಮಾನತುಗೊಂಡಿದ್ದ ಶಾಸಕ

ಅಮಾನತುಗೊಂಡಿದ್ದ ಶಾಸಕರು: ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್(ಕುಷ್ಟಗಿ), ಡಾ.ಸಿ.ಎನ್.ಅಶ್ವತ್ಥ ನಾರಾಯಣ(ಮಲ್ಲೇಶ್ವರಂ), ಎಸ್.ಆರ್.ವಿಶ್ವನಾಥ್ (ಯಲಹಂಕ), ಬಿ.ಎ.ಬಸವರಾಜ (ಕೆ.ಆರ್.ಪುರ), ಎಂ.ಆರ್.ಪಾಟೀಲ್(ಕುಂದಗೋಳ), ಎಸ್.ಎಸ್.ಚನ್ನಬಸಪ್ಪ(ಚನ್ನಿ-ಶಿವಮೊಗ್ಗ), ಉಮಾನಾಥ್ ಕೋಟ್ಯಾನ್(ಮೂಡಬಿದ್ರಿ), ಬಿ.ಸುರೇಶ್ ಗೌಡ(ತುಮಕೂರು ಗ್ರಾಮಾಂತರ), ಡಾ.ಶೈಲೇಂದ್ರ ಬೆಲ್ದಾಳೆ(ಬೀದರ್ ದಕ್ಷಿಣ).

ಶರಣು ಸಲಗರ(ಬಸವಕಲ್ಯಾಣ), ಸಿ.ಕೆ.ರಾಮಮೂರ್ತಿ(ಜಯನಗರ), ಯಶ್‍ಪಾಲ್ ಸುವರ್ಣ(ಉಡುಪಿ), ಬಿ.ಪಿ.ಹರೀಶ್(ಹರಿಹರ), ಮುನಿರತ್ನ(ರಾಜರಾಜೇಶ್ವರಿ ನಗರ), ಡಾ.ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್(ಕಲಬುರಗಿ ಗ್ರಾಮಾಂತರ), ಡಾ.ಚಂದ್ರು ಲಮಾಣಿ(ಶಿರಹಟ್ಟಿ) ಹಾಗೂ ಧೀರಜ್ ಮುನಿರಾಜು(ದೊಡ್ಡಬಳ್ಳಾಪುರ).

ಅಮಾನತು ಅವಧಿಯಲ್ಲಿ ಈ ಶಾಸಕರು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸಲು, ಅವರು ಸದಸ್ಯರಾಗಿರುವ ವಿಧಾನಮಂಡಲದ, ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿರಲಿಲ್ಲ. ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡುವಂತಿರಲಿಲ್ಲ. ಅಮಾನತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರು ಮತದಾನ ಮಾಡುವಂತಿರಲಿಲ್ಲ. ಅಲ್ಲದೇ, ಈ ಅವಧಿಯಲ್ಲಿ ಅವರು ಯಾವುದೆ ದಿನಭತ್ತೆಯನ್ನು ಪಡೆಯಲು ಅರ್ಹರಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X