Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುವರ್ಣ ವಿಧಾನಸೌಧ | ‘ಸ್ಪೀಕರ್ ನೂತನ...

ಸುವರ್ಣ ವಿಧಾನಸೌಧ | ‘ಸ್ಪೀಕರ್ ನೂತನ ಪೀಠ’ದ ವಿಶೇಷತೆ ವಿವರಿಸಿದ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ9 Dec 2024 4:16 PM IST
share
ಸುವರ್ಣ ವಿಧಾನಸೌಧ | ‘ಸ್ಪೀಕರ್ ನೂತನ ಪೀಠ’ದ ವಿಶೇಷತೆ ವಿವರಿಸಿದ ಯು.ಟಿ.ಖಾದರ್

ಬೆಳಗಾವಿ : ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸ್ಪೀಕರ್ ಹುದ್ದೆಯೂ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸ್ಪೀಕರ್ ಆಸೀನರಾಗುವ ಪೀಠವು ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿರುವ ಸ್ಪೀಕರ್ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಸೋಮವಾರ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಅವರು, ವಿಧಾನಸೌಧವನ್ನು ಕಟ್ಟಿಸಿದ ಕೆಂಗಲ್ ಹನುಮಂತಯ್ಯನವರು ಸಭಾಧ್ಯಕ್ಷ ಪೀಠದ ಬಗ್ಗೆ ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು ಎಂದು ಹೇಳಿದರು.

ಅದರಂತೆ ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟ್ರಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿ, ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ, ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು ಎಂದು ಸ್ಪೀಕರ್ ತಿಳಿಸಿದರು.

ರಾಷ್ಟ್ರಕೂಟರು ಹೊಂದಿದ್ದ ಗಂಡಭೇರುಂಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು. ಗಂಡಭೇರುಂಡ ಚಿಹ್ನೆಯನ್ನು ರಾಷ್ಟ್ರಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ ಎಂದು ಖಾದರ್ ಹೇಳಿದರು.

ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ. ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದ್ದು, ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾರ್ಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ ಎಂದು ಖಾದರ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X