Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೀಟ್ ಪರೀಕ್ಷಾ ವ್ಯವಸ್ಥೆ ರದ್ದಾಗಲಿ :...

ನೀಟ್ ಪರೀಕ್ಷಾ ವ್ಯವಸ್ಥೆ ರದ್ದಾಗಲಿ : ಟಿ.ಎ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ24 July 2026 7:53 PM IST
share
ನೀಟ್ ಪರೀಕ್ಷಾ ವ್ಯವಸ್ಥೆ ರದ್ದಾಗಲಿ : ಟಿ.ಎ.ನಾರಾಯಣಗೌಡ

ಬೆಂಗಳೂರು, : ನೀಟ್ ಪರೀಕ್ಷಾ ವ್ಯವಸ್ಥೆ ರದ್ದಾಗಲಿ, ನಮಗೆ ಸಿಇಟಿ ಸಾಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಶುಕ್ರವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯ ವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ ಯುವಜನರು ಕೇಳುತ್ತಿರುವುದಾದರೂ ಏನನ್ನು? 21 ಮಕ್ಕಳನ್ನು ಬಲಿ ತೆಗೆದುಕೊಂಡ ಈ ಹಗರಣಕ್ಕೆ ಕಾರಣಕರ್ತರು ಯಾರು? ಅವರಿಗೆ ಶಿಕ್ಷೆಯಾಗಲಿ. ಮುಂದೆಂದೂ ಇಂಥ ಹಗರಣಗಳು ನಡೆಯದಿರಲಿ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂಬುದು ವಿದ್ಯಾರ್ಥಿಗಳ ಮುಖ್ಯ ಬೇಡಿಕೆ. ಆದರೆ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರಕ್ಕೆ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಒಬ್ಬ ಮಂತ್ರಿಯ ರಾಜೀನಾಮೆ ಪಡೆಯಲು ಸರಕಾರಕ್ಕೆ ಸಾಧ್ಯವಿಲ್ಲವೇ? ಧರ್ಮೇಂದ್ರ ಪ್ರಧಾನ್ ಅಷ್ಟು ದೊಡ್ಡ ವ್ಯಕ್ತಿಯೇ? ಪ್ರಭಾವಶಾಲಿಯೇ? ಒಬ್ಬನ ರಾಜಕೀಯ ಭವಿಷ್ಯಕ್ಕಾಗಿ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಾಶಪಡಿಸಬೇಕಾ? ಸಣ್ಣ ಮಕ್ಕಳೂ ಈಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಸರಕಾರ ಮಾಡಬೇಕಿದ್ದ ಮೊದಲ ಕೆಲಸ ಶಿಕ್ಷಣ ಸಚಿವರ ಬದಲಾವಣೆ. ಅದನ್ನು ಯಾರೋ ಹೇಳಿ ಕೇಳಿ ಮಾಡಬೇಕಾಗಿರಲಿಲ್ಲ. ಸರಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕಾಳಜಿ ಇದ್ದಿದ್ದರೆ ಮೊದಲ ದಿನವೇ ಅದನ್ನು ಮಾಡಬೇಕಿತ್ತು. 21 ವಿದ್ಯಾರ್ಥಿಗಳ ಹೆಣ ಬಿದ್ದರೂ ಶಿಕ್ಷಣ ಸಚಿವನನ್ನು ಸಂಪುಟದಲ್ಲಿ ಇಟ್ಟುಕೊಳ್ಳುವುದು ಸರಕಾರಕ್ಕೆ ನಾಚಿಕೆಗೇಡಿನ ವಿಷಯ ಎಂದು ಸ್ವತಃ ಮೋದಿಯವರಿಗೇ ಅನ್ನಿಸಬೇಕಿತ್ತು ಎಂದು ತಿಳಿಸಿದ್ದಾರೆ.

ನಮ್ಮ ಪ್ರಧಾನಿ ಮೋದಿಯವರನ್ನು ಅವರ ಬೆಂಬಲಿಗರು ವಿಶ್ವಗುರು ಎಂದು ಹೇಳುತ್ತಾರೆ. ಅವರನ್ನು ವಿಶ್ವನಾಯಕ ಎಂದು ಬಿಂಬಿಸುತ್ತಾರೆ. ನಮ್ಮ ದೇಶದ ಪ್ರಧಾನಿ ವಿಶ್ವನಾಯಕರಾಗುವುದು ನಮಗೆ ಹೆಮ್ಮೆಯ ವಿಷಯವೇ. ಆದರೆ ತನ್ನದೇ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಯಲ್ಲಿ ನಿಂತು ನ್ಯಾಯಕ್ಕಾಗಿ ಬೇಡುತ್ತ ಲಾಠಿ, ಬೂಟಿನೇಟು ತಿನ್ನುತ್ತಿರುವಾಗ ಪ್ರಧಾನಿ ಮೋದಿಯವರು ವಿಶ್ವನಾಯಕ ಎಂದು ಹೇಳಿಕೊಳ್ಳುವ ನೈತಿಕತೆ ಉಳಿಸಿಕೊಳ್ಳುತ್ತಾರೆಯೇ? ಇಷ್ಟು ಸಣ್ಣ ವಿಷಯ ಇವರಿಗೆ ಅರ್ಥವಾಗುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳ ಬೆನ್ನಿಗೆ ಇಡೀ ದೇಶದ ಜನತೆ ಇದೆ. ಕನ್ನಡದ ಜನತೆಯೂ ಇದೆ. ಈ ಆಂದೋಲನ ಯಶಸ್ವಿಯಾಗಲಿ, ಶಿಕ್ಷಣ ವ್ಯವಸ್ಥೆ ಸರಿಯಾದ ದಾರಿಗೆ ಬರಲಿ. ಎಲ್ಲದಕ್ಕಿಂತ ಮುಖ್ಯವಾಗಿ ನೀಟ್ ಎಂಬ ವ್ಯವಸ್ಥೆಯೇ ರದ್ದಾಗಲಿ, ನಮಗೆ ಸಿಇಟಿ ಪರೀಕ್ಷೆಯೇ ಸಾಕು ಎಂದು ಆಗ್ರಹಿಸಿದ್ದಾರೆ.

Tags

TA Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X