ಕಾವೇರಿ ಕೊಳ್ಳದ ರೈತರ ರಕ್ಷಣೆಗೆ ಕ್ರಮ ಕೈಗೊಳ್ಳಿ: ವಿಜಯೇಂದ್ರ

Photo: x.com/NewsArenaIndia
ಕಾವೇರಿ ನೀರಿನ ಆದೇಶ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ
ಮಂಡ್ಯ: ಬಿಜೆಪಿ ರೈತ ಸಂಘಟನೆಗಳ ಜೊತೆಗೂಡಿ ಕೆ.ಆರ್.ಎಸ್.ನಲ್ಲಿ ಇಂದು ಪ್ರತಿಭಟನಾ ಹೋರಾಟ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಾವೇರಿ ನದಿ ನೀರು ಬಿಡುವಂತೆ ನಿನ್ನೆ ನೀಡಿದ ಆದೇಶದ ವಿರುದ್ಧ ಮುಖ್ಯಮಂತ್ರಿಗಳು ಮತ್ತು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕೆಂದು ಒತ್ತಾಯಿಸಿದರು. ಕಾವೇರಿ ಕೊಳ್ಳದ ರೈತರ ರಕ್ಷಣೆಗೆ ಅವರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕುಡಿಯುವ ನೀರಿಗೆ ಹಾಹಾಕಾರ ಇದ್ದು, ರೈತರ ಬೆಳೆಗೆ ನೀರು ಬಿಡಲಾಗುತ್ತಿಲ್ಲ. ಮತ್ತೆ ಮತ್ತೆ ತಮಿಳುನಾಡಿಗೆ ನೀರು ಬಿಡುವುದು ಸಮಂಜಸವಲ್ಲ. ಮುಖ್ಯಮಂತ್ರಿಗಳು ತಮ್ಮ ಕರ್ತವ್ಯವನ್ನು ತಿಳಿದು ರೈತರ ರಕ್ಷಣೆಗೆ ಬರಬೇಕೆಂದು ತಿಳಿಸಿದರು.
Next Story




