Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. “ಅನ್ನದಾತರ ಬಗ್ಗೆ ಎಚ್ಚರಿಕೆಯಿಂದ,...

“ಅನ್ನದಾತರ ಬಗ್ಗೆ ಎಚ್ಚರಿಕೆಯಿಂದ, ಗೌರವದಿಂದ ಮಾತನಾಡಬೇಕು”: ಸಿಎಂ ಸಿದ್ದರಾಮಯ್ಯ

“ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ”

ವಾರ್ತಾಭಾರತಿವಾರ್ತಾಭಾರತಿ26 Dec 2023 5:43 PM IST
share
“ಅನ್ನದಾತರ ಬಗ್ಗೆ ಎಚ್ಚರಿಕೆಯಿಂದ, ಗೌರವದಿಂದ ಮಾತನಾಡಬೇಕು”: ಸಿಎಂ ಸಿದ್ದರಾಮಯ್ಯ

ಬೆಂಗಳೂರು: "ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ, ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಫೇಸ್‌ ಬುಕ್‌ ನಲ್ಲಿ ಬರೆದುಕೊಂಡಿರುವ ಸಿಎಂ, "ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು" ಎಂದು ಕಿವಿಮಾತು ಹೇಳಿದ್ದಾರೆ.

“ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲ್ ರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ. ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಭಾರತೀಯ ಜನತಾ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ ಎಂದಿರುವ ಸಿಎಂ, ರಾಜ್ಯದಲ್ಲಿನ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೆ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.

ಅಲ್ಲದೇ ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಾಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ. ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ನೀಡುತ್ತಿದ್ದೇವೆ. ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ. ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಮ್ಮ ಸರಕಾರದ ರೈತಪರ ಕಾರ್ಯಕ್ರಮನ್ನು ತಿಳಿಸಿದರು.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ ಎಂದು ಅಸಮಾಧಾನ ಹೊರಹಾಕಿದರು.

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ವಾಗ್ದಾಳಿ ಮುಂದುವರಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X