Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಜೆಡಿಎಸ್-ಬಿಜೆಪಿ ಮೈತ್ರಿ’ ಮಾತುಕತೆ...

‘ಜೆಡಿಎಸ್-ಬಿಜೆಪಿ ಮೈತ್ರಿ’ ಮಾತುಕತೆ ಆರಂಭಿಕ ಹಂತದಲ್ಲಿದೆ; ಕಾದು ನೋಡಿ...: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 Sept 2023 6:33 PM IST
share
‘ಜೆಡಿಎಸ್-ಬಿಜೆಪಿ ಮೈತ್ರಿ’ ಮಾತುಕತೆ ಆರಂಭಿಕ ಹಂತದಲ್ಲಿದೆ; ಕಾದು ನೋಡಿ...: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಸೆ. 9: ‘ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ವಿಚಾರಗಳು ಪ್ರಾರಂಭಿಕ ಹಂತದಲ್ಲಿದ್ದು, ಈವರೆಗೂ ಲೋಕಸಭಾ ಕ್ಷೇತ್ರ ಹಂಚಿಕೆ ಬಗ್ಗೆ ಯಾವುದೇ ರೀತಿಯ ಚರ್ಚೆಯೂ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೈತ್ರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿಗೆ ಒಪ್ಪಿಗೆ ಸೂಚಿದ್ದಾರಾ?’ ಎಂದು ಪ್ರಶ್ನೆಗೆ ಕಾದು ನೋಡಿ ಎಂದಷ್ಟೇ ಉತ್ತರಿಸಿದರು. ‘ಮಾಜಿ ಸಿಎಂ ಯಡಿಯೂರಪ್ಪ ಮೈತ್ರಿ ಬಗ್ಗೆ ಮಾತನಾಡಿದ್ದು, ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ’ ಎಂದು ವಿವರಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ, ಈ ಸರಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರಕಾರದ ವಿರುದ್ಧ ಸಂಘಟಿತವಾಗಿ ಹೋರಾಟ ನಡೆಸಬೇಕಿದೆ ಎಂದು ಅವರು ತಿಳಿಸಿದರು.

ಮೈತ್ರಿಯ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ. ರಾಜ್ಯದ ಹಿತದೃಷ್ಟಿಯಿಂದ ಈ ರೀತಿಯ ಕೆಲವು ತೀರ್ಮಾನವಾಗುತ್ತದೆ. ಕೆಲದಿನ ಕಾದು ನೋಡಿ ಎಂದ ಅವರು, ಕೆಲವರು ಸಿದ್ದಾಂತಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮುಂದೆ ಮಾತಡೋಣ. ಇನ್ನು ಮೈತ್ರಿ ವಿಷಯಕ್ಕೆ ಬಂದರೆ, ಅದಕ್ಕೆ ಇನ್ನೂ ಸಮಯ ಇದೆ. ಇನ್ನು ಹಲವಾರು ವಿಚಾರಗಳ ಬಗ್ಗೆ ಚರ್ಚೆ ಆಗಬೇಕಿದೆ. ಇಲ್ಲಿ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದಲ್ಲ. ವಿಶ್ವಾಸ, ಗೌರವ ಮುಖ್ಯ ಎಂದು ಅವರು ಹೇಳಿದರು.

ದಿನೇಶ್ ಗುಂಡೂರಾವ್ ವಿರುದ್ಧ ಕಿಡಿ: ‘ಕಾಂಗ್ರೆಸ್ ಪಕ್ಷದ ಯಾರೋ ಒಬ್ಬರು ನಾಯಕರು, ‘ನಾಯಿ ಹಸಿದಿತ್ತು, ಅನ್ನ ಹಳಸಿತ್ತು’ ಎಂದು ಹೇಳಿದ್ದಾರೆ. 2018ರಲ್ಲಿ ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು ನಮ್ಮ ಮನೆಗೆ ಬಂದಿದ್ದವರು ಯಾರು? ಎಂದು ಸಚಿವ ದಿನೇಶ್ ಗುಂಡೂರಾವ್‍ಗೆ ತಿರುಗೇಟು ನೀಡಿದರು.

‘ರಾಜ್ಯದ ಸ್ಥಿತಿಯನ್ನು ನೋಡುತ್ತಿದ್ದೇನೆ. ಅಮಲಿನಲ್ಲಿ ನಾವು ಏನೋ ಮಾಡಿಬಿಟ್ಟಿದ್ದೇವೆ, ಜೆಡಿಎಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದೇವೆ, ಅಲ್ಲಿಂದ ಇಲ್ಲಿಂದ ಕರೆದುಕೊಂಡು ಬರುತ್ತಿದ್ದೇವೆ ಎಂದು ಬೀಗುತ್ತಿದ್ದಾರೆ. ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ನಾಳಿನ ಸಭೆಗೆ 10 ಸಾವಿರ ಕಾರ್ಯಕರ್ತರು: ಈ ಬೆಳವಣಿಗೆಗಳ ನಡುವೆ ಪಕ್ಷದ ಸಂಘಟನೆಗೆ ಒತ್ತು ನೀಡಿದ್ದು, ಈಗಾಗಲೇ ಮುಖಂಡರ ಸಭೆ ನಡೆಸಿದ್ದೇವೆ. ನಾಳೆ(ಸೆ.10) ಮಹತ್ವದ ಸಭೆ ಕರೆಯಲಾಗಿದೆ. ಲೋಕಸಭೆ ಚುನಾವಣೆಗೆ ಮುನ್ನ ಇಂತಹ ಸಭೆ ನಡೆಯಬೇಕು ಎಂದು ದೇವೇಗೌಡರು ಬಯಸಿದ್ದರು. ಅದರಂತೆ ಸಭೆ ನಡೆಯುತ್ತಿದೆ. 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುತ್ತಾರೆ. ಆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಸುತ್ತೇವೆ. ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಕಾಂಗ್ರೆಸ್‍ಗೆ ಡೆಸ್ಪರೇಟ್ ಆಗಿದೆ: ರಾಜಕಾರಣದಲ್ಲಿ ನಿರಾಶೆ, ಹತಾಶೆ ಎನ್ನುವುದು ಬರಲ್ಲ. ಡೆಸ್ಪರೇಟ್ ಅನ್ನುವ ಪದ ರಾಜಕಾರಣದಲ್ಲಿ ಬರಲ್ಲ. ರಾಜಕಾರಣದ ಡಿಕ್ಷನರಿಯಲ್ಲೇ ಆ ಪದ ಇಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ ಡೆಸ್ಪರೇಟ್ ಆಗುತ್ತದೆ. ಹೊರನೋಟಕ್ಕೆ ಅವರು ಏನು ಬೇಕಾದರೂ ಹೇಳಬಹುದು. ಆದರೆ, ಒಳಗಡೆ ಏನಿದೆ ಅನ್ನುವುದು ನನಗೂ ಗೊತ್ತಿದೆ. ಅವರ ಶಕ್ತಿ ಏನಿದೆ ಅನ್ನುವುದು ಗೊತ್ತಿದೆ. ರಾಜಕಾರಣದಲ್ಲಿ ಸದಾಕಾಲ ಒಂದೇ ರೀತಿ ಇರಲ್ಲ. ರಾಜಕಾರಣದ ಚಕ್ರ ಉರುಳುತ್ತಿರುತ್ತದೆ. ಅವರು ಏನು ಸಾಧನೆ ಮಾಡಿದ್ದಾರೆಂದು ಜನ ಸೀಟು ಕೊಡುತ್ತಾರೆ. ಲೂಟಿ ಮಾಡಿದ್ದಾರೆ, ಆ ಹಣದಲ್ಲಿ ಜನರನ್ನು ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ, ಅದು ಸಾಧ್ಯವಿಲ್ಲ’

-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X