Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮಿಳುನಾಡು ಕಾಂಗ್ರೆಸ್ ಶಾಸಕರು...

ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ9 May 2026 12:10 PM IST
share
ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ತಮಿಳುನಾಡಿನ ಶಾಸಕರು ಈಗಲ್ ಟನ್ ರೆಸಾರ್ಟ್ ಗೆ ಬಂದಿದ್ದಾರೆಯೇ ಎಂದು ಕೇಳಿದಾಗ, "ಯಾವ ಶಾಸಕರೂ ಈಗಲ್ ಟನ್ ರೆಸಾರ್ಟ್ ಗೆ ಬಂದಿಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಇದ್ದಿದ್ದರೆ ನಾನು ಹೇಳುತ್ತಿದ್ದೆ. ನವೀಕರಣ ಹಿನ್ನೆಲೆಯಲ್ಲಿ ಈಗಲ್ ಟನ್ ರೆಸಾರ್ಟ್ ಮುಚ್ಚಲಾಗಿದೆ. ಕೆಲವರು ಹೈದರಾಬಾದ್ ಗೆ ಹೋಗಿದ್ದಾರೆ ಎಂದರೆ ಮತ್ತೆ ಕೆಲವರು ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಪಕ್ಷದ ಹೈಕಮಾಂಡ್ ನಾಯಕರು ಏನಾದರೂ ನಿರ್ದೇಶನ ನೀಡಿದರೆ ನಾನು ಅದನ್ನು ಪಾಲಿಸುವೆ. ಆದರೆ ಈವರೆಗೆ ಹೈಕಮಾಂಡ್ ನಾಯಕರು ನನ್ನ ಜೊತೆ ಏನೂ ಮಾತನಾಡಿಲ್ಲ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ತಮಿಳುನಾಡಿನಲ್ಲಿ ಪ್ರಣಾಳಿಕೆ ಬಿಡುಗಡೆ ಹಾಗೂ ಪ್ರಚಾರಕ್ಕೆ ಹೋಗಿದ್ದೆ. ಅದಾದ ನಂತರ ನನಗೆ ಯಾವುದೇ ಮಾಹಿತಿ ಇಲ್ಲ" ಎಂದರು.

ತಮಿಳುನಾಡಿನಲ್ಲಿ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಬದಲಾಗುತ್ತಿದೆಯಲ್ಲ ಎಂದಾಗ, "ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ" ಎಂದರು.

ಯಡಿಯೂರಪ್ಪ ಅವರಿಗೆ ಆರೋಗ್ಯ, ಆಯಸ್ಸು ಹೆಚ್ಚಾಗಲಿ :

ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದ ಬಗ್ಗೆ ಕೇಳಿದಾಗ, "ಅವರು ರಾಜ್ಯದ ಸೇವೆ ಮಾಡಿದ್ದಾರೆ. ಅವರ ಜನ್ಮದಿನವಿದ್ದರೆ ಅವರಿಗೆ ಒಳ್ಳೆಯದಾಗಲಿ. ಅವರ ಪಕ್ಷದವರು ಪಕ್ಷ ಸಂಘಟನೆ ಹಾಗೂ ಅವರಿಗೆ ಗೌರವ ನೀಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಆಶಿಸುತ್ತೇನೆ. ಭಗವಂತ ಅವರಿಗೆ ಹೆಚ್ಚಿನ ಆಯಸ್ಸು ನೀಡಲಿ. ರಾಜಕೀಯವಾಗಿ ಅವರ ವಿಚಾರಧಾರೆ ಬೇರೆ, ನಮ್ಮ ವಿಚಾರಧಾರೆ ಬೇರೆ" ಎಂದು ತಿಳಿಸಿದರು.

ಪುದುಚೆರಿ ಪ್ರವಾಸದ ಬಗ್ಗೆ ಕೇಳಿದಾಗ, "ನಾನು ಬಹಳ ದಿನಗಳಿಂದ ದೇವಾಲಯಕ್ಕೆ ಹೋಗಿರಲಿಲ್ಲ. ಹೀಗಾಗಿ ಶನೇಶ್ವರ ದೇವಾಲಯಕ್ಕೆ ಹೋಗುತ್ತಿದ್ದೇನೆ" ಎಂದು ತಿಳಿಸಿದರು.

ಕೇರಳಂ ಸಿಎಂ ಆಯ್ಕೆ ವಿಚಾರವಾಗಿ ಕೇಳಿದಾಗ, "ನಮ್ಮ ಎಲ್ಲಾ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಅದು ಎಲ್ಲಾ ಪಕ್ಷಗಳಲ್ಲೂ ನಡೆಯುವ ಪ್ರಕ್ರಿಯೆ" ಎಂದು ತಿಳಿಸಿದರು.

ನನಗಾಗಿ ಐಪಿಎಲ್ ಟಿಕೆಟ್ ಕೇಳಿಲ್ಲ:

"ಆರ್.ಅಶೋಕ್ ಅವರು ಶಾಸಕರಾದ ಕಾಶಪ್ಪನವರು ಐಪಿಎಲ್ ಟಿಕೆಟ್ ಕೇಳಿದ್ದರು. ಈಗ ಅದನ್ನು ನನ್ನ ಮೇಲೆಯೇ ಹಾಕಿಕೊಂಡಿದ್ದೇನೆ. ಗುಜರಾತಿನವರಿಗೆ ಟಿಕೆಟ್ ಗಳು ಹೆಚ್ಚಾಗಿ ಬೇಕಾಗಿತ್ತು, ವ್ಯಾಪಾರ ಜಾಸ್ತಿ ಆಗಬೇಕಿತ್ತು. ಅದಕ್ಕೆ ಈ ರೀತಿ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ನಾವು ಕೇಳಿದ್ದ 300 ಟಿಕೆಟ್ ದೊಡ್ಡದಾಯ್ತಾ? ಬೇರೆ ರಾಜ್ಯಗಳಲ್ಲಿ 60% ಟಿಕೆಟ್ ಅನ್ನು ರಾಜ್ಯ ಸರ್ಕಾರಗಳಿಗೆ ಕೊಡುತ್ತಿದ್ದಾರೆ. ನಾನು ಕರ್ನಾಟಕದ ಪ್ರತಿನಿಧಿಯಾಗಿ ಶಾಸಕರು ಏನು ಹೇಳುತ್ತಾರೋ ಅದನ್ನು ಮಾಡಿದ್ದೇನೆ. ಎಲ್ಲಾ ಪಕ್ಷದವರು ಸೇರಿ ಬೇಡಿಕೆ ಇಟ್ಟರಲ್ಲವೇ? ದಳದವರಿಗೆ ಬೇಡವಾದರೆ ತಮ್ಮ ಪಕ್ಷದ ಶಾಸಕರಿಗೆ ಟಿಕೆಟ್ ಬೇಡ ಎಂದು ವಾಪಸ್ ನೀಡಲಿ. ನಾನು ನನಗಾಗಿ ಟಿಕೆಟ್ ಕೇಳಿದ್ದೀನಾ? ನಮ್ಮ ಜನಪ್ರತಿನಿಧಿಗಳು ಮನವಿ ಮಾಡಿದ್ದಕ್ಕೆ ಕೇಳಿದೆ. ಈ ಹಿಂದೆ ಶಾಸಕರಿಗೆ 2 ಟಿಕೆಟ್ ನೀಡುತ್ತಿದ್ದರು. ಈಗ ಮೂರು ಟಿಕೆಟ್ ನೀಡಿ ಎಂದು ಹೇಳಿರುವೆ" ಎಂದು ಸ್ಪಷ್ಟಪಡಿಸಿದರು.

Tags

Tamil NaduCongressBengaluruD.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X