Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕೃತಕ ಬುದ್ಧಿಮತ್ತೆ’ಗೆ ತಕ್ಕಂತೆ...

‘ಕೃತಕ ಬುದ್ಧಿಮತ್ತೆ’ಗೆ ತಕ್ಕಂತೆ ಶಿಕ್ಷಕರು ಬದಲಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ5 Sept 2025 9:31 PM IST
share
‘ಕೃತಕ ಬುದ್ಧಿಮತ್ತೆ’ಗೆ ತಕ್ಕಂತೆ ಶಿಕ್ಷಕರು ಬದಲಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಶಿಕ್ಷಕರು ಹೊಸ ವಿಚಾರಗಳತ್ತ ಗಮನಹರಿಸಬೇಕು. ಕೃತಕ ಬುದ್ಧಿಮತ್ತೆ(ಎಐ) ಈಗ ಎಲ್ಲವನ್ನು ನಿಯಂತ್ರಿಸುತ್ತಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಶಿಕ್ಷಕರು ತಯಾರಿ ಮಾಡಿಕೊಳ್ಳಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ‘ಸಮಾಜಕ್ಕೆ ನಾಲ್ಕು ಉತ್ತಮ ಪ್ರಜೆಗಳನ್ನು ತಯಾರು ಮಾಡಿದ ಆತ್ಮತೃಪ್ತಿ ನಿಮ್ಮಲ್ಲಿ ಇರಲಿ. ಗುರು, ಗುರಿ ನೀಡುತ್ತಾನೆ. ಗುರಿ ತಲುಪಬೇಕಾದರೆ ಗುರು ಇರಬೇಕು’ ಎಂದು ಹೇಳಿದರು.

ಗಮನ ಹರಿಸಿ: ‘ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ತಿಂಗಳ ಒಳಗಾಗಿ ಅರ್ಜಿ ಕರೆಯಲಾಗುವುದು. ನಂತರ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಸಂಸದ ಜಿ.ಸಿ. ಚಂದ್ರಶೇಖರ್‍ಗೆ ಇದರ ಜವಾಬ್ದಾರಿ ನೀಡಲಾಗಿದೆ. ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇತ್ತೀಚೆಗೆ ಪುಟ್ಟಣ್ಣ ಸೇರಿದಂತೆ ಅನೇಕರು ಗೆದ್ದಿದ್ದಾರೆ ಎಂದು ಶಿವಕುಮಾರ್ ನುಡಿದರು.

‘ಮೊಬೈಲ್ ಬಂದ ಮೇಲೆ ಉಪಯೋಗ ಎಷ್ಟಿದೇಯೋ ಕೆಟ್ಟ ಪರಿಣಾಮಗಳು ಅಷ್ಟೇ ಇವೆ. ಉತ್ತರ ಭಾರತಕ್ಕೆ ಹೋಲಿಸಿಕೊಂಡರೆ ನಮ್ಮಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆ ಇದೆ. ಬೆಂಗಳೂರಿನಲ್ಲಿ ಸುಮಾರು 25 ಲಕ್ಷ ಐಟಿ ಉದ್ಯೋಗಿಗಳಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ 23 ಲಕ್ಷ ಇದ್ದಾರೆ. ಟಾಟಾ ಸಂಸ್ಥೆ, ಎಚ್‍ಎಂಟಿ, ಬಿಇಎಲ್, ಬಿಇಎಂಎಲ್, ಇಸ್ರೋ ಹೀಗೆ ಅನೇಕ ಬೌದ್ದಿಕ ಸಂಸ್ಥೆಗಳು ಬೆಂಗಳೂರಿನಲ್ಲಿ ಪ್ರಾರಂಭವಾಗಿದ್ದು ನಮ್ಮ ಹೆಗ್ಗಳಿಕೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ಪ್ರಪಂಚ ಭಾರತವನ್ನು ಕರ್ನಾಟಕ-ಬೆಂಗಳೂರಿನ ಮೂಲಕ ನೋಡುತ್ತಿದೆ. ಇದಕ್ಕೆ ಶಿಕ್ಷಕರೇ ಮೂಲ ಕಾರಣ. ಶಿಕ್ಷಣದಿಂದಲೇ ಪ್ರಗತಿ, ಹೀಗಾಗಿ ನಮ್ಮ ಪ್ರಗತಿಗೆ ಶಿಕ್ಷಕರ ಪಾಲು ಹೆಚ್ಚಿದೆ. ನಮ್ಮ ಹಿರಿಯರು ಶಿಕ್ಷಣದ ಮೂಲಕ ನಮಗೆ ಕೊಟ್ಟಿರುವ ಕೊಡುಗೆ ಮಹತ್ವದ್ದಾಗಿದೆ. ಕರ್ನಾಟಕವು ಹೆಚ್ಚು ಎಂಜಿನಿಯರ್, ವೈದ್ಯರು, ನರ್ಸ್‍ಗಳನ್ನು ದೇಶಕ್ಕೆ ಕೊಡುಗೆ ನೀಡುತ್ತಿದೆ. ನೆಹರೂ ಕಾಲದಲ್ಲೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರೆಯಿತು ಎಂದು ಸ್ಮರಿಸಿದರು.

ಶಾಲೆಗಳ ನಿರ್ಮಾಣಕ್ಕೆ ತೀರ್ಮಾನ:

ಮುಂದಿನ ಸಂಪುಟದಲ್ಲಿ ಸಿಎಸ್‍ಆರ್ ಅನುದಾನದಿಂದ ಶಾಲೆಗಳ ನಿರ್ಮಾಣದ ಬಗ್ಗೆ ಮಹತ್ವದ ತೀರ್ಮಾನ ಮಾಡಲಾಗುವುದು. ಯಾರು ಶಾಲೆ ನಿರ್ಮಾಣ ಮಾಡುತ್ತಾರೋ ಅವರ ಕಂಪೆನಿಯ ಹೆಸರನ್ನೇ ಇಟ್ಟುಕೊಳ್ಳಬಹುದೆಂದು ಹೇಳಿದ್ದೇವೆ. ಆದರೆ, ಅತ್ಯುತ್ತಮ ಕಟ್ಟಡ ನಿರ್ಮಾಣ ಮಾಡಬೇಕು ಹಾಗೂ ನಗರ ಮಾದರಿಯಲ್ಲಿ ಸಿಬಿಎಸ್‍ಇ ಶಿಕ್ಷಣ ದೊರೆಯಬೇಕು ಎಂಬುದು ನಮ್ಮ ಆಶಯ. ಈಗಾಗಲೇ ಒಂದಷ್ಟು ಶಾಲೆಗಳು ಪ್ರಾರಂಭವಾಗಿವೆ. ಸುಮಾರು 2ಸಾವಿರ ಶಾಲೆ ನಿರ್ಮಾಣ ನಮ್ಮ ಗುರಿ ಎಂದು ನುಡಿದರು.

ಇತ್ತೀಚೆಗೆ ಪತ್ರಿಕೆಯಲ್ಲಿ ಒಂದು ವರದಿ ಓದಿದೆ. ಸರಕಾರಿ ಶಾಲೆಗಳನ್ನು ತೊರೆದು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದಾರೆಂದು. ಅದಕ್ಕೆ ನಾವು ಸಿಎಸ್‍ಆರ್ ಹಣದ ತೊಡಗಿಸುವಿಕೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ರಾಜ್ಯದಲ್ಲಿ 7,800ಕೋಟಿ ರೂ.ಗಳಷ್ಟು ಸಿಎಸ್‍ಆರ್ ಹಣ ಲಭ್ಯವಿದೆ ಎಂದು ವರದಿಗಳು ಹೇಳುತ್ತವೆ. ಒಂದಷ್ಟು ಜನ ಉದ್ಯಮಿಗಳು ಇನ್ನೂ ಮನಸು ಮಾಡಿಲ್ಲ. ನನ್ನ ಕ್ಷೇತ್ರದಲ್ಲಿ ಕೆಪಿಎಸ್ ಶಾಲೆಗಳ ವಿಚಾರದಲ್ಲಿ ಅತ್ಯುತ್ತಮ ಕೆಲಸವಾಗಿದೆ. ನನ್ನ ಕ್ಷೇತ್ರದಲ್ಲಿ ಟೊಯೋಟಾ ಕಂಪೆನಿಯವರು ತಲಾ 10 ಕೋಟಿ ರೂ.ವೆಚ್ಚದಲ್ಲಿ 7 ಕೆಪಿಎಸ್ ಶಾಲೆ ನಿರ್ಮಾಣ ಮಾಡುತ್ತಿದ್ದಾರೆ ಎಂದರು.

ಉತ್ತಮ ಶಿಕ್ಷಣ ಆಯಾಯ ಊರಿನಲ್ಲಿಯೇ ದೊರೆಯಬೇಕು. ಇಲ್ಲದಿದ್ದರೆ ವಲಸೆ ತಡೆಯಲು ಆಗುವುದಿಲ್ಲ. ನನ್ನನ್ನು ಶಿಕ್ಷಣಕ್ಕಾಗಿ ಬೆಂಗಳೂರಿಗೆ ನಮ್ಮ ತಂದೆ-ತಾಯಿ ಕಳುಹಿಸಿದರು. ನಾನು ಮರಳಿ ಊರಿಗೆ ಹೋಗಲೇ ಇಲ್ಲ. ಅದಕ್ಕೆ ಗ್ರಾಮೀಣ ಭಾಗದಲ್ಲಿ ಮೂರು ಪಂಚಾಯತಿಗಳು ಸೇರಿದಂತೆ ಒಂದು ಕೆಪಿಎಸ್ ಶಾಲೆ ನಿರ್ಮಾಣ ಮಾಡಲಾಗುತ್ತದೆ. ನಾನು ನಮ್ಮ ಊರಿನಲ್ಲಿ ಮೂರು ಶಾಲೆಗಳನ್ನು ದತ್ತು

ಶಿಕ್ಷಣ ಪ್ರೇಮಿ: ನಾನು ರಾಜಕಾರಣಿ ಇರಬಹುದು, ಜೊತೆಗೆ ಶಿಕ್ಷಣ ಪ್ರೇಮಿ. ನಾನು ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸಲಿಲ್ಲ. ಓದುವಾಗಲೇ ರಾಜಕೀಯದ ಕಡೆಗೆ ಆಕರ್ಷಿತನಾದೆ. ನಾನು ಚುನಾವಣೆಯಲ್ಲಿ ಗೆದ್ದು ವಿಧಾನಸಭೆಗೆ ಬಂಗಾರಪ್ಪ, ಕೆ.ಎಚ್.ರಂಗನಾಥ, ಮೊಯಿಲಿ, ರಾಮಕೃಷ್ಣ ಹೆಗಡೆ ಅವರುಗಳ ಭಾಷಣ, ವಿಚಾರಧಾರೆ ನೋಡಿದ ನಂತರ ನಾನು ಶಿಕ್ಷಣಕ್ಕೆ ಆದ್ಯತೆ ನೀಡಲಿಲ್ಲ ಎಂದು ಅರಿವಾಯಿತು ಎಂದರು.

ಎನ್‍ಪಿಎಸ್ ಶಾಲೆಯ ಮುಖ್ಯಸ್ಥರಾಗಿದ್ದ ಗೋಪಾಲಕೃಷ್ಣ ಅವರು ನನ್ನನ್ನು ಶಾಲೆಯಿಂದ ತೆಗೆದುಹಾಕಿದರು. ನಂತರ ಅವರ ಸಹಾಯದಲ್ಲೇ ಕೆಲವು ಶಾಲೆ ಆರಂಭಿಸಿದ್ದೇನೆ. ನಮ್ಮ ಊರಿನಲ್ಲಿ ಶಿಕ್ಷಣಕ್ಕಾಗಿಯೇ ಹತ್ತಾರು ಎಕರೆ ಜಮೀನನ್ನು ದಾನ ಮಾಡಿದ್ದೇನೆ. ನಮ್ಮ ಕಾಲದಲ್ಲಿ ಕಲಿಸುತ್ತಿದ್ದ ರೀತಿ ಈಗ ಇಲ್ಲ. ಎನ್‍ಪಿಎಸ್ ಶಾಲೆಯ ಗೋಪಾಲಕೃಷ್ಣ ಎರಡು ಕಿವಿಗಳ ಮಧ್ಯೆ ಸಣ್ಣ ಕಲ್ಲನ್ನು ಇಟ್ಟು ಕಿವಿ ಹಿಂಡುತ್ತಿದ್ದರು. ಮೊಣಕಾಲಿನ ಮೇಲೆ ನಿಲ್ಲಿಸುತ್ತಿದ್ದರು. ಆದರೆ ಈಗ ಹೊಡೆಯುವಂತೆಯೂ ಇಲ್ಲ, ಬೈಯ್ಯುವಂತೆಯೂ ಇಲ್ಲ ಎಂದು ತಮ್ಮ ವಿದ್ಯಾರ್ಥಿ ಜೀವನದ ಕ್ಷಣಗಳನ್ನು ಮೆಲುಕು ಹಾಕಿದರು.

ಈ ದೇಶಕ್ಕೆ ನಾಲ್ಕು ಆಧಾರ ಸ್ತಂಭ. ಕೃಷಿಕ, ಸೈನಿಕ, ಕೃಷಿಕ, ಶಿಕ್ಷಕ. ನಮ್ಮ ಕಾಲದಲ್ಲಿ ಕಷ್ಟಪಟ್ಟು ಓದಿಸಿ ಬರೆಸುತ್ತಿದ್ದರು. ನಂತರ ಕ್ಯಾಲ್ಕುಲೇಟರ್, ಕಂಪ್ಯೂಟರ್ ಆವಿಷ್ಕಾರವಾಯಿತು. ಈಗ ಮೊಬೈಲ್ ಬಂದ ಪರಿಣಾಮ ಮಕ್ಕಳೇ ಶಿಕ್ಷಕರ ತಪ್ಪು ಹುಡುಕುವಂತಾಗಿದೆ. ಈಗ ಕಾಲ ಕೃತಕ ಬುದ್ದಿಮತ್ತೆ ಕಡೆ ಸಾಗುತ್ತಿದ್ದು ಮತ್ತೊಂದು ಹಂತ ತಲುಪಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X