Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ:...

ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Sept 2023 8:34 PM IST
share
ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ.4: ‘ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ನಗರದ ಹೋಟೆಲ್‍ನಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಕುರಿತು ನಡೆದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ ಎಂದರು.

ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ ಬೆಂಗಳೂರು ಟೆಕ್ ಸಮ್ಮಿಟ್ ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವ್ಯಾಖ್ಯಾನಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

80ರ ದಶಕದ ಅಂತ್ಯ ಹಾಗೂ 90ರ ದಶಕದಲ್ಲಿಯೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರಕಾರ ಐಟಿ, ಬಿಟಿಗೆ ಭದ್ರ ಬುನಾದಿಯನ್ನು ಹಾಕಿತ್ತು. ನೀತಿ ನಿರೂಪಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊತ್ತಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರಕಾರ 1992ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಐಟಿ ರಾಜಧಾನಿಯಾಗಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದೆ. ಬೆಂಗಳೂರು ಐಟಿ, ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲ ಸಾಮಥ್ರ್ಯವನ್ನು ಹೊಂದಿದ್ದು ನಮ್ಮ ಸರಕಾರ ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು ಅತ್ಯಂತ ಸೂಕ್ತವಾಗಿದೆ. ಐಒಟಿ, ಕೃತಕ ಬುದ್ದಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ. ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕøಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು, ವಿಮಾನನಿಲ್ದಾಣಕ್ಕೆ ಮೆಟ್ರೋ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ದೇವನಹಳ್ಳಿ ಪ್ರದೇಶದಲ್ಲಿ ತೈವಾನ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಫಾಕ್ಕ್ಸಾನ್ ಸದ್ಯದಲ್ಲಿಯೇ ತನ್ನ ಉತ್ಪಾದನಾ ಘಟಕವನ್ನು ತೆರೆಯುವುದಾಗಿ ಘೋಷಿಸಿದೆ. ಆನೇಕಲ್, ದೊಡ್ಡಬಳ್ಳಾಪುರ ಮತ್ತಿತತರ ನಗರಗಳು ಹೂಡಿಕೆಯ ವಿಸ್ತರಣೆಗೆ ಅವಕಾಶಗಳನ್ನು ಹೊಂದಿದ್ದು ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ಪ್ರಯೋಜನಕಾರಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಈಗಾಗಲೇ ವಿವಿಧ ಸಂಸ್ಥೆಗಳು ಆಸಕ್ತಿ ಹೊಂದಿವೆ. ಇದಕ್ಕಾಗಿ ಈಗಾಗಲೇ ಇರುವ ಹೆದ್ದಾರಿಗಳ ಸುಧಾರಣೆ ಹಾಗೂ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X