Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಸರಕಾರ ಭರವಸೆ ಈಡೇರಿಸಿಲ್ಲ,...

ಕಾಂಗ್ರೆಸ್ ಸರಕಾರ ಭರವಸೆ ಈಡೇರಿಸಿಲ್ಲ, ದ್ವೇಷ ಭಾಷಣ ಮುಂದುವರೆದಿದೆ : ತೀಸ್ತಾ ಸೆಟಲ್ವಾಡ್

ವಾರ್ತಾಭಾರತಿವಾರ್ತಾಭಾರತಿ26 May 2026 6:30 PM IST
share
ಕಾಂಗ್ರೆಸ್ ಸರಕಾರ ಭರವಸೆ ಈಡೇರಿಸಿಲ್ಲ, ದ್ವೇಷ ಭಾಷಣ ಮುಂದುವರೆದಿದೆ : ತೀಸ್ತಾ ಸೆಟಲ್ವಾಡ್
‘ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ’ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮ

ಬೆಂಗಳೂರು : ಚುನಾವಣೆ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಇದುವರೆಗೂ ಈಡೇರಿಕೆ ಮಾಡಿಲ್ಲ. ಜತೆಗೆ, ದ್ವೇಷ ಭಾಷಣಕ್ಕೆ ಕುಮ್ಮಕ್ಕು ನೀಡುವ ಕಾರ್ಯಕ್ರಮಗಳು ಎಂದಿನಂತೆ ಮುಂದುವರೆದಿರುವುದು ಅಚ್ಚರಿ ತಂದಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಾ.ಎಚ್.ಎಸ್.ದೊರೆಸ್ವಾಮಿ ಸ್ವಾರಕ ಪ್ರತಿಷ್ಠಾನ, ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ, ಗೌರಿ ಮೀಡಿಯಾ ಟ್ರಸ್ಟ್ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದೊಂದಿಗೆ ಆಯೋಜಿಸಿದ್ದ ‘ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ’ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತಾಂತರ ನಿಷೇಧ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ಹಿಂಪಡೆಯಲಾಗುವುದು ಎಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಆದರೆ, ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ಈ ಎರಡು ವಿವಾದಿತ ಕಾಯ್ದೆಗಳನ್ನು ಹಿಂಪಡೆಯುವಲ್ಲಿ ವಿಫಲವಾಗಿದೆ. ಇನ್ನೊಂದೆಡೆ, ಫೆಲೆಸ್ತೀನ್ ಪರ ಪ್ರತಿಭಟನೆ, ಸಮಾವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಆದರೆ, ದ್ವೇಷ ಭಾಷಣ ಮುಂದುವರೆಸುವ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿರುವುದು ಕಾಂಗ್ರೆಸ್ಸಿನ ಆಳ್ವಿಕೆಗಳ ಬಗ್ಗೆ ನಮಗೆ ಅಚ್ಚರಿಯಾಗುತ್ತಿದೆ ಎಂದರು.

ರಾಜ್ಯದಲ್ಲಿ ಪ್ರಗತಿಪರ ಸಂಘಟನೆಗಳು ಅನೇಕ ಹೋರಾಟಗಳ ಮೂಲಕ ಜನರಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿವೆ. ಭೂಮಿ ಹೋರಾಟ ಸಮಿತಿಗಳು ಜನರ ಬದುಕು ಕಟ್ಟಿಕೊಳ್ಳುವಂತೆ ಮಾಡಿದೆ.ಇಂತಹ ಪ್ರಗತಿಗೆ ಎಚ್.ಎಸ್.ದೊರೆಸ್ವಾಮಿ ಅವರ ಶ್ರಮ, ಮಾರ್ಗದರ್ಶನ ಇದೆ. ಅವರು ನಮ್ಮೊಂದಿಗೆ ದೈಹಿಕವಾಗಿ ಇಲ್ಲ. ಆದರೆ, ಅವರ ಸಲಹೆ, ಮಾತುಗಳು ಸದಾ ಜೀವಂತವಾಗಿ ಇರಲಿದೆ ಎಂದು ತೀಸ್ತಾ ಸೆಟಲ್ವಾಡ್ ನುಡಿದರು.

ಸ್ವಾತಂತ್ರ್ಯ ಬಂದಾಗ ಎಚ್.ಎಸ್. ದೊರೆಸ್ವಾಮಿ ಅವರಿಗೆ 25 ವರ್ಷ ವಯಸ್ಸು. ಸ್ವಾತಂತ್ರ್ಯ ನಂತರವೂ ನೂರು ವರ್ಷ ವಯಸ್ಸನ್ನೂ ಪೂರೈಸಿದಾಗಲೂ ಅವರು ಹೋರಾಡುತ್ತಲೇ ಜೀವಿಸಿದರು. ಅವರು ಗಾಂಧಿವಾದಿಯೂ ಆಗಿದ್ದರು, ಕಮ್ಯುನಿಸ್ಟರೂ ಆಗಿದ್ದರು ಎಂದ ಅವರು, ದೊರೆಸ್ವಾಮಿ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ತೀವ್ರ ಸ್ವರೂಪದ ಹೋರಾಟಗಳನ್ನೂ ಮಾಡಿದ್ದರು ಎಂದು ಅವರು ಸ್ಮರಿಸಿದರು.

ದೊರೆಸ್ವಾಮಿ ಅವರು ತಮ್ಮ ಇಳಿವಯಸ್ಸಿನಲ್ಲೂ ಕರ್ನಾಟಕದಲ್ಲಿ ನಡೆದ ಭೂ ವಂಚಿತರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕನಿಷ್ಟ ಒಂದು ಲಕ್ಷ ಹೆಕ್ಟೇರ್ ಭೂಮಿ ಬಡವರಿಗೆ ಹಂಚಿಕೆಯಾಗಬೇಕು ಎಂಬುದು ಅವರ ಆಗ್ರಹವಾಗಿತ್ತು. ಸರಕಾರಿ ಜಾಗವು ಜನರ ಜಾಗ ಎಂಬ ನಿಲುವು ಅವರದಾಗಿತ್ತು. ಇದೀಗ ಎಸ್.ಎಸ್ ದೊರೆಸ್ವಾಮಿ ಅವರ ಸ್ಮರಣೆಯಲ್ಲಿ ಸ್ಮಾರಕ ಭವನ ಆಗಬೇಕು. ಅದು ಎಲ್ಲ ಪ್ರಜಾತಾಂತ್ರಿಕ ಚಟುವಟಿಕೆಗಳ ಕೇಂದ್ರವಾಗಿರಬೇಕು ಎಂದು ಅವರು ಒತ್ತಾಯಿಸಿದರು.

ಎಚ್.ಎಸ್.ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ ಮಾತನಾಡಿ, ಇಲ್ಲಿರುವ ಪ್ರತಿಯೊಬ್ಬರು ವಿವಿಧ ಕಾಲಘಟ್ಟ, ಘಟನೆಗಳಲ್ಲಿ ದೊರೆಸ್ವಾಮಿ ಅವರಿಗೆ ಜೊತೆಯಾದವರು. ದೊರೆಸ್ವಾಮಿ ರೈತ, ಕಾರ್ಮಿಕ ಸೇರಿದಂತೆ ಎಲ್ಲಾ ಹೋರಾಟಗಳಲ್ಲಿ ಭಾಗಿಯಾದವರು. ಅವರ ಬಗ್ಗೆ ಒಬ್ಬೊಬ್ಬರು ಒಂದೊಂದು ಗಂಟೆ ಮಾತನಾಡಬಹುದು, ಅವರು ಚಿಂತಕರು, ಲೇಖಕರು, ಹೋರಾಟಗಾರು ಸೇರಿದಂತೆ ಎಲ್ಲ ಆಯಾಮದವರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ ಕುಲಪತಿ ಪ್ರೊ.ಬಿ.ರಮೇಶ್‌ ಸ್ವಾಗತಿಸಿದರು. ಗುಜರಾತಿನ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ವಿವಿಯ ಕುಲಸಚಿವ(ಆಡಳಿತ) ನವೀನ್ ಜೋಸೆಫ್, ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ನಗರಗೆರೆ ರಮೇಶ್, ಸಿರಿಮನೆ ನಾಗರಾಜ್, ಜೆ.ಎಂ.ವೀರಸಂಗಯ್ಯ ಸೇರಿದಂತೆ ಪ್ರಮುಖರಿದ್ದರು.

Tags

Teesta Setalvad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X