Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ...

232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ಹುದ್ದೆಗೆ ಭಡ್ತಿ : ಡಿಸಿಎಂ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ17 Jun 2026 8:03 PM IST
share
232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ಹುದ್ದೆಗೆ ಭಡ್ತಿ : ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ಗ್ರೇಡ್-2 ತಹಶೀಲ್ದಾರ್ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಭಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸರಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಭಡ್ತಿ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದು ಕೇವಲ ಆಡಳಿತಾತ್ಮಕ ಮೈಲುಗಲ್ಲಷ್ಟೇ ಅಲ್ಲ. ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವ ಸರಕಾರದ ದೃಢ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಕಳೆದ 5 ವರ್ಷಗಳಿಗೂ ಹೆಚ್ಚು ಕಾಲದಿಂದ ನಮ್ಮ ಅನೇಕ ಸಮರ್ಥ ಹಾಗೂ ಪ್ರತಿಭಾವಂತ ಅಧಿಕಾರಿಗಳು, ತಮ್ಮ ಕಠಿಣ ಶ್ರಮ ಮತ್ತು ಸೇವಾ ನಿಷ್ಠೆ ಯ ಹೊರತಾಗಿಯೂ ವೃತ್ತಿಜೀವನದಲ್ಲಿ ಪ್ರಗತಿ ಕಾಣದೆ ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು. ಇದೀಗ ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ಹುದ್ದೆಗೆ ಭಡ್ತಿ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, ‘ಸರಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಸದಾ ಗುರುತಿಸಿ ಪ್ರೋ ತ್ಸಾಹಿಸುತ್ತದೆ’ ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ ಮೂಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂಬ ನಂಬಿಕೆ ನನಗಿದೆ ಎಂದು ಅವರು ಹೇಳಿದ್ದಾರೆ.

ಬಲಿಷ್ಠ ಮತ್ತು ಸ್ಫೂರ್ತಿದಾಯಕ ಆಡಳಿತ ಯಂತ್ರವೆ ಪರಿಣಾಮಕಾರಿ ಆಡಳಿತದ ಬುನಾದಿ. ಕಂದಾಯ ಇಲಾಖೆಯು ಪ್ರತಿಯೊಬ್ಬ ನಾಗರಿಕನಿಗೂ ಪಾರದರ್ಶಕ, ಉತ್ತರದಾಯಿ ಹಾಗೂ ಕಾಳಜಿಯುಕ್ತ ಸೇವೆಯನ್ನು ಒದಗಿಸಬೇಕೆಂಬ ರಾಜ್ಯ ಸರಕಾರದ ಸಂಕಲ್ಪದ ಭಾಗವೆ ಈ ಮಹತ್ವದ ನಿರ್ಧಾರವಾಗಿದೆ. ಈ ಕಾರ್ಯವನ್ನು ಸುಗಮವಾಗಿ ಸಾಕಾರಗೊಳಿಸಿದ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರಂತರ ಪ್ರಯತ್ನಗಳಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಅವರು ತಿಳಿಸಿದ್ದಾರೆ.

ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಅವರೆಲ್ಲರ ಶ್ರಮ ಮತ್ತು ಸಹಕಾರವು ಮುಂಬರುವ ದಿನಗಳಲ್ಲಿ ಇಂತಹ ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲು ನಮಗೆ ಸ್ಫೂರ್ತಿದಾಯಕವಾಗಿದೆ. ವರ್ಷಗಳ ನಿರಂತರ ಪರಿಶ್ರಮ ಮತ್ತು ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿ ಇದೀಗ ಭಡ್ತಿ ಪಡೆದಿರುವ ಪ್ರತಿಯೊಬ್ಬ ಅಧಿಕಾರಿಗೂ ನನ್ನ ಆತ್ಮೀಯ ಅಭಿನಂದನೆಗಳು ಎಂದು ಪರಮೇಶ್ವರ್ ಹಾರೈಸಿದ್ದಾರೆ.

ಈ ಭಡ್ತಿಯು ತರುವ ಹೆಚ್ಚಿನ ಜವಾಬ್ದಾರಿಯೊಂದಿಗೆ, ನಾಡಿನ ಜನತೆಗೆ ಇನ್ನಷ್ಟು ದಕ್ಷತೆ, ಕಾಳಜಿ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಅವಕಾಶವನ್ನು ನೀವು ಸದುಪಯೋಗಪಡಿಸಿಕೊಳ್ಳುತ್ತೀರಿ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

ಕಂದಾಯ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯ ಗಮನಕ್ಕೆ ನಾನು ತರಬಯಸುವ ಪ್ರಮುಖ ವಿಚಾರವೆಂದರೆ-ಸರಕಾರವು ನಿಮ್ಮ ಸೇವಾ ಬದ್ಧತೆಯನ್ನು ಗುರುತಿಸುತ್ತದೆ, ನಿಮ್ಮ ಕಳಕಳಿಯನ್ನು ಆಲಿಸುತ್ತದೆ ಹಾಗೂ ನಿಮ್ಮ ಆಕಾಂಕ್ಷೆಗಳನ್ನು ಪರಿಗಣಿಸುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಸ್ವಯಂಸ್ಫೂರ್ತಿಯಿಂದ ಕಾರ್ಯನಿರ್ವಹಿಸುವ ಅಧಿಕಾರಿ ವರ್ಗವು ಯಾವುದೆ ಸರಕಾರಕ್ಕೆ ಅತಿ ದೊಡ್ಡ ಆಸ್ತಿ. ನ್ಯಾಯಯುತವಾದ, ಸಮಾನ ಅವಕಾಶಗಳಿರುವ ಹಾಗೂ ವೃತ್ತಿ ನೈಪುಣ್ಯತೆಗೆ ಒತ್ತು ನೀಡುವ ಆಡಳಿತ ಸಂಸ್ಕೃತಿಯನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕಂದಾಯ ಇಲಾಖೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ವೇಗ, ಪಾರದರ್ಶಕತೆ ಮತ್ತು ಜವಾಬ್ದಾರಿಯುತವಾಗಿ ಸೇವೆ ಒದಗಿಸುವ ‘ಜನಕೇಂದ್ರಿತ' ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ಭರವಸೆಯನ್ನು ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ನಮ್ಮ ಅಧಿಕಾರಿ ವರ್ಗದ ಸಬಲೀಕರಣದ ಮೂಲಕ ಪ್ರತಿಯೊಬ್ಬ ನಾಗರಿಕನ ಅಗತ್ಯಗಳಿಗೂ ಸ್ಪಂದಿಸುವ ಸರಕಾರದ ಕಾರ್ಯವಿಧಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳಲ್ಲಿ ವಿಶ್ವಾಸ ಹಾಗೂ ಜನಸಾಮಾನ್ಯರಲ್ಲಿ ಭರವಸೆ ಮೂಡಿಸುವ ಅತ್ಯುತ್ತಮ ಕಂದಾಯ ಆಡಳಿತವನ್ನು ನಾವೆಲ್ಲರೂ ಒಟ್ಟಾಗಿ ನಿರ್ಮಿಸೋಣ. ಉತ್ತರದಾಯಿ, ಪಾರದರ್ಶಕ, ಸಂವೇದನಾಶೀಲ ಮತ್ತು ಸರ್ವರಿಗೂ ಸುಲಭವಾಗಿ ಲಭ್ಯವಾಗುವ ಸೇವಾ ಮಾದರಿಯ ಮೂಲಕ ‘ನವ ಕರ್ನಾಟಕ'ವನ್ನು ಕಟ್ಟೋಣ ಎಂದು ಪರಮೇಶ್ವರ್ ಕರೆ ನೀಡಿದ್ದಾರೆ.

Tags

TehsildarsParameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X