Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ...

ಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ | ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ : ತೇಜಸ್ವಿ ಸೂರ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ17 Jan 2026 3:55 PM IST
share
ಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ | ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ : ತೇಜಸ್ವಿ ಸೂರ್ಯ ಎಚ್ಚರಿಕೆ
"ಫೆಬ್ರವರಿಯಲ್ಲಿ ಮತ್ತೆ ಬಿಎಂಆರ್‌ಸಿಎಲ್‌ 5% ದರ ಏರಿಕೆಗೆ ಮುಂದಾಗಿರುವುದು ಅಕ್ಷಮ್ಯ"

ಬೆಂಗಳೂರು : ಬೆಂಗಳೂರು ಮೆಟ್ರೋ ಇಂದು ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಆಗಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಮೆಟ್ರೋ ಬಳಸಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದೆಹಲಿ, ಚೆನ್ನೈ, ಕೊಚ್ಚಿ ಮೆಟ್ರೋಗಳಲ್ಲಿ 10 ಕಿಲೋಮೀಟರ್ ಪ್ರಯಾಣಕ್ಕೆ ಇರುವ ದರವನ್ನು ಬೆಂಗಳೂರಿನ ಮೆಟ್ರೋದೊಂದಿಗೆ ಹೋಲಿಸಿದರೆ ಇಲ್ಲಿ ದರ ದ್ವಿಗುಣವಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದರು.

ಸಂಸದರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡಿದ ಅವರ, ಮುಂಬರುವ ಫೆಬ್ರವರಿಯಲ್ಲಿ ಇದೀಗ ಮತ್ತೆ ಬಿಎಂಆರ್‌ಸಿಎಲ್‌ 5% ದರ ಏರಿಕೆಗೆ ಮುಂದಾಗಿರುವುದು ಅಕ್ಷಮ್ಯ. ರಾಜ್ಯ ಸರಕಾರ ಹಾಗೂ ಬಿಎಂಆರ್‌ಸಿಎಲ್‌ ಜನರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿವೆ. ಇದರ ಜೊತೆಗೆ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ ಕಳೆದ ನಾಲ್ಕು ವರ್ಷಗಳಿಂದ ತೀವ್ರವಾಗಿ ವಿಳಂಬವಾಗಿದ್ದು, ಇದಕ್ಕೂ ಬಿಎಂಆರ್‌ಸಿಎಲ್‌ ಹೊಣೆಗಾರಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಹಿಂದೆ ದರ ನಿಗದಿ ಸಮಿತಿ ತೀರ್ಮಾನಿಸಿದ್ದ ನಿರ್ಧಾರವೇ ತಪ್ಪಾಗಿದೆ ಎಂದು ನಾವು ಸ್ಪಷ್ಟವಾಗಿ ಕಿವಿ ಹಿಂಡುವ ಕೆಲಸ ಮಾಡಿದ್ದೆವು. ಆದರೆ ಬಿಎಂಆರ್‌ಸಿಎಲ್‌ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಈಗಲಾದರೂ ಈ ತಪ್ಪು ನಿರ್ಧಾರವನ್ನು ಸರಿಪಡಿಸಬೇಕು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ನಾನು ಸ್ಪಷ್ಟವಾಗಿ ಹೇಳುತ್ತೇನೆ – ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಬಿಟ್ಟು ಜನರ ಪರವಾಗಿ ನಿಲ್ಲಬೇಕು. ಮೆಟ್ರೋ ದರ ನಿಗದಿ ಮಾಡುವ ದರ ನಿಗದಿ ಸಮಿತಿ ಪುನರ್ ರಚನೆ ಮಾಡುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ತಕ್ಷಣ ಪತ್ರ ಬರೆಯಬೇಕು. ಈ ವಿಚಾರದಲ್ಲಿ ಬೆಂಗಳೂರಿನ ಎಲ್ಲಾ ಸಂಸದರ ಸಂಪೂರ್ಣ ಸಹಕಾರ ಇರುತ್ತದೆ” ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಮತ್ತೆ ಮೆಟ್ರೋ ದರ ಏರಿಕೆ ಮಾಡಲು ಬಿಎಂಆರ್‌ಸಿಎಲ್‌ ಮುಂದಾದರೆ, ಬಿಜೆಪಿ ವತಿಯಿಂದ ಪ್ರತಿಯೊಂದು ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗುತ್ತದೆ. ದರ ಹೆಚ್ಚಿಸಿ ಜನರಿಂದ ದರೋಡೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರಕಾರ ದರ ಏರಿಕೆ ಮಾಡಿ, ಅದರ ಹೊಣೆಗಾರಿಕೆಯನ್ನು ಕೇಂದ್ರ ಸರಕಾರದ ಮೇಲೆ ತಳ್ಳುವ ಕೆಲಸವನ್ನು ಬಿಡಬೇಕು. ಜನ ವಿರೋಧಿ, ಅವೈಜ್ಞಾನಿಕ ಮೆಟ್ರೋ ದರ ಏರಿಕೆಯನ್ನು ನಾವು ಯಾವ ಕಾರಣಕ್ಕೂ ಒಪ್ಪುವುದಿಲ್ಲ ಎಂದಿದ್ದಾರೆ.

Tags

Tejasvi Surya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X