Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ...

ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ16 Aug 2024 4:48 PM IST
share
ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ : ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು : ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವ ಸಂಬಂಧ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವ ಅವರು, ಇತ್ತೀಚೆಗೆ ಕೇಂದ್ರ ಸರಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ.

ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಘಡ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.

ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ.

ಹಾಗಾಗಿ, ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಢಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವಾಗಿದ್ದು, ಕೂಡಲೇ ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

Tags

Minister Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X