ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ: ಬೆಂಗಳೂರಿನ ಮಧುಸೂದನ್ ಮೃತ್ಯು

PC : PTI
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಬೆಂಗಳೂರಿನ ಮತ್ತೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತರನ್ನು ರಾಮಮೂರ್ತಿ ನಗರದ ಮಧುಸೂದನ್ ಎಂದು ತಿಳಿದು ಬಂದಿದೆ. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಎರಡು ದಿನದ ಹಿಂದಷ್ಟೇ ಮಧುಸೂದನ್ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು.
ರಾಜ್ಯದಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದವರ ಪೈಕಿ ಮೂವರು ಮೃತಪಟ್ಟಿದ್ದಾರೆ.
Next Story





