ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಅವಿನಾಶ್- ಮೃತ ಯುವಕ
ಶ್ರವಣಬೆಳಗೊಳ (ಹಾಸನ): ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಬಳಿ ಗುರುವಾರ ವರದಿಯಾಗಿದೆ.
ಹಾಸನ ಜಿಲ್ಲೆಯ ಶ್ರವಣಬೆಳಗೊಳ ಹೋಬಳಿ ಜಿನ್ನಾಥಪುರ ಗ್ರಾಮದ ಅವಿನಾಶ್ (25 ವರ್ಷ) ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ.
ನಾಗಮಂಗಲ ತಾಲೂಕಿನ ಕಂಬದಹಳ್ಳಿ ಬಳಿ ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಅವಿನಾಶ್ ಸ್ಥಳದಲ್ಲೇ ಮೃತಪಟ್ಟರೆ, ಅಭಿಷೇಕ್ (20 ವರ್ಷ) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್ ಬಿ.ಜಿ.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





