Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕವನ್ನು ʼಕುಡುಕರ ತೋಟʼವನ್ನಾಗಿ...

ಕರ್ನಾಟಕವನ್ನು ʼಕುಡುಕರ ತೋಟʼವನ್ನಾಗಿ ಮಾಡಲು ಹೊರಟ ಕಾಂಗ್ರೆಸ್‌ ಸರಕಾರ: ಎಚ್.ಡಿ.ಕುಮಾರಸ್ವಾಮಿ

ತಮ್ಮನ್ನ ತಾವೇ ಮಾರ್ಕೊಳ್ಳೋದಕ್ಕಿಂತ ಒಳ್ಳೆಯದೇ ಬಿಡಿ ಎಂದು ಕಾಲೆಳೆದ ನಟ ಪ್ರಕಾಶ್‌ ರಾಜ್

ವಾರ್ತಾಭಾರತಿವಾರ್ತಾಭಾರತಿ24 Sept 2023 9:10 PM IST
share
ಕರ್ನಾಟಕವನ್ನು ʼಕುಡುಕರ ತೋಟʼವನ್ನಾಗಿ ಮಾಡಲು ಹೊರಟ ಕಾಂಗ್ರೆಸ್‌ ಸರಕಾರ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಸೆ.24: ಮನೆಮನೆಗೂ ಮದ್ಯಭಾಗ್ಯ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಅಬಕಾರಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಹಳ್ಳಿಯಲ್ಲೂ ಮದ್ಯದ ಅಂಗಡಿ ತೆರೆಯುವುದು, ಸೂಪರ್ ಮಾರ್ಕೆಟ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಕಿಡಿಕಾರಿದ್ದಾರೆ.

ನಾರಿಯರಿಗೆ ‘ಶಕ್ತಿ' ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ' ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ' ಎಂದ ಸರಕಾರ ಅವರ ಬಾಳಜ್ಯೋತಿಯನ್ನೆ ನಂದಿಸುತ್ತಿದೆ. ‘ಅನ್ನಭಾಗ್ಯ' ಎಂದ ಸರಕಾರ, ಈಗ ‘ಮದ್ಯಭಾಗ್ಯ' ಎನ್ನುತ್ತಿದೆ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ; ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ. ಚುನಾವಣೆಗೆ ಮುನ್ನ ‘ಸರ್ವ ಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರಕಾರದ ಸಂಕಲ್ಪವಾಗಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ' ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ಅವರು ಲೇವಡಿ ಮಾಡಿದ್ದಾರೆ.

ಖೊಟ್ಟಿ ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ? ಎಂದು ಕುಮಾರಸ್ವಾಮಿ ಕಿಡಿಗಾರಿದ್ದಾರೆ.

3 ಸಾವಿರ ಜನಸಂಖ್ಯೆಯುಳ್ಳ ಪ್ರತೀ ಗ್ರಾಮ, ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ ಎಂದು ಅವರು ಹೇಳಿದ್ದಾರೆ.

ಕುಮಾರಸ್ವಾಮಿಗೆ ನಟ ಪ್ರಕಾಶ್‌ ರಾಜ್‌ ತಿರುಗೇಟು

ಕಾಂಗ್ರೆಸ್‌ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಕುಮಾರಸ್ವಾಮಿ ಅವರ ಟ್ವೀಟ್‌ ಗೆ ಪ್ರತಿಕ್ರಿಯಿಸಿರುವ ಬಹು ಭಾಷಾ ನಟ ಪ್ರಕಾಶ್‌ ರಾಜ್‌ ತಿರುಗೇಟು ನೀಡಿದ್ದಾರೆ.

ʼʼಚುನಾವಣೆಗೆ ಮುನ್ನ ‘ಸರ್ವ ಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರಕಾರದ ಸಂಕಲ್ಪವಾಗಿದೆʼʼ ಎಂಬ ಕುಮಾರಸ್ವಾಮಿ ಅವರ ಟ್ವೀಟ್‌ ಗೆ ಪ್ರತಿಕ್ರಿಯಿಸಿರುವ ಪ್ರಕಾಶ್‌ ರಾಜ್‌, ʼʼತಮ್ಮನ್ನ ತಾವೇ ಮಾರ್ಕೊಳ್ಳೋದಕ್ಕಿಂತ… ಒಳ್ಳೇದೆ ಬಿಡಿ. #justaskingʼʼ ಎಂದು ಕಾಲೆಳೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X