Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯತ್ನಾಳ್ ಬಳಿ ಇರುವ ದಾಖಲೆಗಳನ್ನು ನ್ಯಾ....

ಯತ್ನಾಳ್ ಬಳಿ ಇರುವ ದಾಖಲೆಗಳನ್ನು ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಒಪ್ಪಿಸಲಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Dec 2023 6:56 PM IST
share
ಯತ್ನಾಳ್ ಬಳಿ ಇರುವ ದಾಖಲೆಗಳನ್ನು ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಒಪ್ಪಿಸಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ವೇಳೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಸಿಎಂ, "ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ" ಎಂದು ಹೇಳಿದರು.

ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ ಎಂದು ಪ್ರಶ್ನಿಸಿದ್ದಾರೆ.

"ಯತ್ನಾಳ್ ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು" ಎಂದು ಮನವಿ ಮಾಡಿದರು.

ಬಿಜೆಪಿ ಶಾಸಕ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲಎಂದು ಹೇಳಿದ್ದಾರೆ.

ತನ್ನನ್ನು ದೇಶದ "ಚೌಕಿದಾರ" ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು "ನ ಖಾವೂಂಗಾ ನಾ ಖಾನೆ ದೂಂಗಾ" ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X