Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಧುನಿಕ ಯುಗದಲ್ಲೂ ಅಸ್ಪಶ್ಯತೆ ಆಚರಣೆಗೆ...

ಆಧುನಿಕ ಯುಗದಲ್ಲೂ ಅಸ್ಪಶ್ಯತೆ ಆಚರಣೆಗೆ ಹೈಕೋರ್ಟ್ ಅಸಮಾಧಾನ

ಜಾತಿ ನಿಂದನೆ ಪ್ರಕರಣದ ರದ್ದತಿಗೆ ನಕಾರ

ವಾರ್ತಾಭಾರತಿವಾರ್ತಾಭಾರತಿ24 Nov 2023 8:34 PM IST
share
ಆಧುನಿಕ ಯುಗದಲ್ಲೂ ಅಸ್ಪಶ್ಯತೆ ಆಚರಣೆಗೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಆಧುನಿಕ ಯುಗದಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪಶ್ಯತೆ ಆಚರಣೆ ಮಾಡುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸಾರ್ವಜನಿಕ ಸ್ಥಳದಂತಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿತು.

ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿ ಪಾಂಡುರಂಗ ಭಟ್ ಸೇರಿದಂತೆ ಇತರೆ ಏಳು ಮಂದಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ದೇವಾಲಯ ಏಕತೆ ಮತ್ತು ಎಲ್ಲರೂ ಒಳಗೊಳ್ಳುವಿಕೆಯ ಸಂಕೇತ. ಅಸ್ಪಶ್ಯತೆ ಆಚರಣೆ ಸಾಂವಿಧಾನಬಾಹಿರ ಎಂದು ತಿಳಿಸಿದ್ದೂ, ಗ್ರಾಮೀಣ ಭಾಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ದೇವಾಲಯ ಪ್ರವೇಶ ಮತ್ತು ಪೂಜೆಗೆ ನಿರಾಕರಿಸಿ ಅಡ್ಡಿಪಡಿಸುವ ಪ್ರಕ್ರಿಯೆ ಮುಂದುವರೆದಿರುವುದು ದುರುದೃಷ್ಟಕರ ಎಂದು ಪೀಠ ತಿಳಿಸಿದೆ.

ಪ್ರಕರಣದಲ್ಲಿ ದೂರುದಾರರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣದಿಂದ ಅರ್ಜಿದಾರರು ದೇವಾಲಯಕ್ಕೆ ಪ್ರವೇಶಕ್ಕೆ ನಿರಾಕರಿಸಿರುವ ವರ್ತನೆ ಪ್ರತಿಗಾಮಿ ನಡೆ. ಈ ರೀತಿಯ ಬೆಳವಣಿಗೆ ನಡೆಯುತ್ತಿರುವುದು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತದೆ. ಈ ರೀತಿಯ ತಾರತಮ್ಯ ತಕ್ಷಣ ನಿಲ್ಲುವಂತಾಗಬೇಕು ಎಂದು ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣವೇನು?: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ವಿನಾಯಕ ನಗರ ಕ್ಯಾಂಪ್‍ನ ಕುಟುಂಬಸ್ಥರು 2016ರ ಸೆ.17ರಂದು ಗಡಿಚೌಡೇಶ್ವರಿ ದೇವಸ್ಥಾನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಇವರಿಗೆ ಜಾತಿ ಹೆಸರನ್ನು ಉಲ್ಲೇಖಿಸಿ ದೇವಾಲಯ ಪ್ರವೇಶಕ್ಕೆ ಅಡ್ಡಿಪಡಿಸಲಾಗಿತ್ತು.

ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿದ್ದರು. ಈ ಸಂಬಂಧ ಸಾವಿತ್ರಮ್ಮ ದಾವಣಗೆರೆ ಜಿಲ್ಲೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ(ದೌರ್ಜನ್ಯ ತಡೆ)ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆಯಡಿಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ಆ ಬಳಿಕ ಪ್ರಕರಣ ರದ್ದು ಕೋರಿ ವಿನಾಯಕ ಕ್ಯಾಂಪ್ ಬಳಿಯ ಸ್ವರೂಪ್ ಆಶ್ರಮದ ಪಾಂಡುರಂಗ ಭಟ್, ಕುಮಾರಿ ಉಶಾ, ಕುಮಾರಿ ಶಾರದಾ, ವಿಲಾಸ್ ಲಾಡವ, ವೆಂಕಟನಾರಾಯಣಾ, ಚಿದಾನಂದ, ರವಿ ಮತ್ತು ಉಮಾ ಎಂಬುವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಹೈಕೋರ್ಟ್ 2022ರಲ್ಲಿ ವಜಾಗೊಳಿಸಿ ಆದೇಶಿಸಿತ್ತು. ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗಳು ದೂರಿನಲ್ಲಿ ತಿಳಿಸಿರುವಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಿಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಅಂಶಗಳಿಲ್ಲ. ಅಲ್ಲದೆ, ದೂರುದಾರರು ಹಾಗೂ ಅರ್ಜಿದಾರರ ನಡುವೆ ಗಲಾಟೆ ನಡೆದಿರುವುದು ದೇವಾಲಯದ ಗೋಡೆಯ ಬಳಿಯಲ್ಲಿ ಅದು ಸಾರ್ವಜನಿಕ ಸ್ಥಳವಾಗುವುದಿಲ್ಲ. ಹೀಗಾಗಿ, ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸಬೇಕು ಎಂದು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X