Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿನ...

ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿನ ಅನುಮತಿ ರದ್ದು ಎತ್ತಿಹಿಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Jan 2024 8:45 PM IST
share
ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿನ ಅನುಮತಿ ರದ್ದು ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜಿಗೆ 2022-23ನೇ ಸಾಲಿನ ಎಂಬಿಬಿಎಸ್ ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.

ಅಲ್ಲದೆ, 2021-22ನೇ ಸಾಲಿನಲ್ಲಿ ಕಾಲೇಜಿಗೆ ಪ್ರವೇಶ ಪಡೆದು ಎಂಬಿಬಿಎಸ್ ಕೋರ್ಸ್ ಮುಂದುವರೆಸುತ್ತಿದ್ದ 150 ಮಂದಿ ವಿದ್ಯಾರ್ಥಿಗಳನ್ನು ರಾಜ್ಯದ ಇತರೆ ಕಾಲೇಜುಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದ ಎನ್‍ಎಂಸಿ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕಾಲೇಜಿಗೆ ಅನುಮತಿ ಮುಂದುವರೆಸುವುದು ಮತ್ತು ವಿದ್ಯಾರ್ಥಿಗಳನ್ನು ಮತ್ತೊಂದು ಕಾಲೇಜಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದ ಎನ್‍ಎಂಸಿ ಹಾಗೂ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕಾಲೇಜು ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಎನ್‍ಎಂಸಿ ಸಿಬ್ಬಂದಿ 2022ರ ಸೆ.5 ಮತ್ತು 6ರಂದು ಕಾಲೇಜಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತ್ತು. ಈ ಸಂದರ್ಭದಲ್ಲಿ ಶೇ.71ರಷ್ಟು ಬೋಧಕ ಸಿಬ್ಬಂದಿ ಕೊರತೆ, ಶೇ.79ರಷ್ಟು ನಿವಾಸಿ ವೈದ್ಯರ (ರೆಸಿಡೆಂಟ್) ಕೊರತೆ, ಶೇ.30ರಷ್ಟು ಮಾತ್ರ ಹೊರ ರೋಗಿಗಳ ಹಾಜರಾತಿ ಇತ್ತು. ಶೇ.10ರಷ್ಟು ಮಾತ್ರ ಒಳರೋಗಿಗಳಿದ್ದರು. ಈ ಎಲ್ಲ ಮಾಹಿತಿಯ ಆಧಾರದಲ್ಲಿ ಎನ್‍ಎಂಸಿ ಕಾಲೇಜಿನ ಅನುಮತಿ ನವೀಕರಿಸಲು ನಿರಾಕರಿಸಿತ್ತು.

ವಿಚಾರಣೆ ವೇಳೆ ಕಾಲೇಜಿನ ಪರ ವಕೀಲರು, ಸೆ.5ರಂದು ಓಣಂ ಹಬ್ಬ ಇತ್ತು. ಈ ಸಂದರ್ಭದಲ್ಲಿ ಎನ್‍ಎಂಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ವೈದ್ಯಕೀಯ ಕಾಲೇಜುಗಳ ಸ್ಥಾಪನೆ ನಿಯಂತ್ರಣ 1999ರ ನಿಯಮ 8(3)(1)ದ ಪ್ರಕಾರ ಹಬ್ಬಗಳ ದಿನದ ಎರಡು ದಿನಗಳ ಮುನ್ನ ಹಾಗೂ ಬಳಿಕ ತಪಾಸಣೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ, ಎನ್‍ಎಂಸಿ ನಿರ್ಧಾರವನ್ನು ರದ್ದುಪಡಿಸಬೇಕು ಎಂದು ಕೋರಿದರು.

ಈ ವಾದವನ್ನು ಪುರಸ್ಕರಿಸಲು ನ್ಯಾಯಪೀಠ ನಿರಾಕರಿಸಿತು. ಅಲ್ಲದೆ, 2022ರ ಸಾಲಿನಲ್ಲಿ ಓಣಂ ಹಬ್ಬ ಸೆ.8ರಂದು ಇತ್ತು. ಆದರೆ, ಕರ್ನಾಟಕದಲ್ಲಿ ಈ ಹಬ್ಬಕ್ಕೆ ಕೇಂದ್ರ ಅಥವಾ ರಾಜ್ಯ ಸರಕಾರ ಯಾವುದೇ ರಜಾ ದಿನವನ್ನಾಗಿ ಘೋಷಣೆ ಮಾಡಿರಲಿಲ್ಲ ಎಂದು ತಿಳಿಸಿರುವ ನ್ಯಾಯಪೀಠ ಕಾಲೇಜಿನ ವಾದವನ್ನು ತಿರಸ್ಕರಿಸಿದೆ.

ಜೊತೆಗೆ, ಕಾಲೇಜಿಗೆ ಅನುಮತಿ ನಿರಾಕರಿಸುವುದಕ್ಕೂ ಮುನ್ನ ಕಾಲೇಜಿಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದಿಂದ ಬೇರೊಂದು ಕಾಲೇಜಿಗೆ ಸ್ಥಳಾಂತರ ನಿರ್ಧಾರ ಮಾಡಲಾಗಿದೆ. ಇದರಲ್ಲಿ ಯಾವುದೇ ದೋಷ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X