Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡಿರುವ...

ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳಿಗೆ ರಾಜಕಾರಣಿಗಳ ಹೆಸರು ಇಡುವ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ12 March 2024 11:31 PM IST
share
ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳಿಗೆ ರಾಜಕಾರಣಿಗಳ ಹೆಸರು ಇಡುವ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಕಟ್ಟಡ ಹಾಗೂ ಸ್ಥಳಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರಗಳು ನಾಮಕರಣ ಮಾಡುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ದಾವಣಗೆರೆ ನಿವಾಸಿ ವಕೀಲ ಎ.ಸಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ದಾವಣಗೆರೆಯಲ್ಲಿ ಪಾರ್ಕ್, ಬಸ್ ನಿಲ್ದಾಣ, ಜಿ.ಪಂ ಸಭಾಂಗಣ ಮತ್ತಿತರ ಸರ್ಕಾರಿ ಕಟ್ಟಡಗಳಿಗೆ ಸ್ಥಳೀಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರನ್ನು ನಾಮಕರಣ ಮಾಡಿರುವುದನ್ನು ಅರ್ಜಿಯಲ್ಲಿ ವಿರೋಧ ವ್ಯಕ್ತಪಡಿಸಲಾಗಿದೆ. ಪ್ರತಿವಾದಿಗಳಾಗಿರುವ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾಧಿಕಾರಿ, ದಾವಣಗೆರೆ ನಗರ ಸಭೆ, ದಾವಣಗೆರೆ ಜಿಲ್ಲಾಪಂಚಾಯತಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ವಕೀಲರು‌ ವಾದ ಮಂಡಿಸಿ ಸರ್ಕಾರದ ಅನುದಾನಲ್ಲಿ ಕಟ್ಟಲಾದ ಸರ್ಕಾರಿ ಕಟ್ಟಡಗಳಿಗೆ ಜೀವಂತ ರಾಜಕಾರಣಿಗಳ ಹೆಸರು ಇಡಬಾರದು ಎಂದು 2012ರಲ್ಲಿ ಇದೇ ಹೈಕೋರ್ಟ್ ಆದೇಶವೊಂದನ್ನು ನೀಡಿದೆ. ಚನ್ನಗಿರಿ ಮಾಜಿ ಶಾಸಕ ಮಾಡಳು ವಿರೂಪಾಕ್ಷಪ್ಪ ಅವರ ಹೆಸರನ್ನು ತಾಲೂಕು ಕ್ರೀಡಾಂಗಣಕ್ಕೆ ಇಡಲಾಗಿತ್ತು. ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಆಟದ ಮೈದಾನಕ್ಕೆ ಸನ್ಮಾನ್ಯ ಮಾಡಾಳು ವಿರೂಪಾಕ್ಷಪ್ಪ ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆಗ ಹೈಕೋರ್ಟ್ ಆದೇಶದಂತೆ ಮಾಡಾಳು ವಿರೂಪಾಕ್ಷಪ್ಪ ಆಟದ ಮೈದಾನದ ಹೆಸರು ಬದಲಾಯಿಸಿ ತಾಲೂಕು ಆಟದ ಮೈದಾನ ಎಂದು ನಾಮಕರಣ ಮಾಡಲಾಗಿತ್ತು.

ಅದೇ ರೀತಿ ದಾವಣಗೆರೆಯಲ್ಲಿ ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ಅವರ ಹೆಸರಗಳನ್ನು ಇಡಲಾಗಿದೆ. ಇದನ್ನು ತೆರವುಗೊಳಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿದರು.ವಾದ ಆಲಿಸಿದ ಕೋರ್ಟ್ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

Tags

High Courtgovernment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X