Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ, ಸಂಘಪರಿವಾರದ ಸ್ವಾರ್ಥಕ್ಕೆ ಬಡವರ...

ಬಿಜೆಪಿ, ಸಂಘಪರಿವಾರದ ಸ್ವಾರ್ಥಕ್ಕೆ ಬಡವರ ಮಕ್ಕಳ ಬದುಕು ಬಲಿಯಾಗಿದೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ14 July 2026 2:45 PM IST
share
ಬಿಜೆಪಿ, ಸಂಘಪರಿವಾರದ ಸ್ವಾರ್ಥಕ್ಕೆ ಬಡವರ ಮಕ್ಕಳ ಬದುಕು ಬಲಿಯಾಗಿದೆ : ಪ್ರಿಯಾಂಕ್ ಖರ್ಗೆ
"ಬಿಜೆಪಿ-ಆರೆಸ್ಸೆಸ್‌ ನೀಡಿದ ಧರ್ಮ ರಕ್ಷಣೆ ನಶೆಯನ್ನು ತಲೆಗೇರಿಸಿಕೊಂಡವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ"

ಬೆಂಗಳೂರು: "ಬಿಜೆಪಿ ಮತ್ತು ಸಂಘಪರಿವಾರದ ಸ್ವಾರ್ಥ ಸಾಧನೆಗೆ ಬಡವರ ಮನೆಯ ಮಕ್ಕಳ ಜೀವಗಳಷ್ಟೇ ಅಲ್ಲ, ಬದುಕುಗಳೂ ಬಲಿಯಾಗಿವೆ" ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಧರ್ಮ ರಕ್ಷಣೆಯ ಹೆಸರಲ್ಲಿ ಸತ್ತವರದ್ದು ಒಂದು ಕತೆಯಾದರೆ ಬದುಕಿರುವ ಒಬ್ಬೊಬ್ಬರದ್ದೂ ಒಂದೊಂದು ಬಗೆಯ ಕರುಣಾಜನಕ ಕತೆಗಳು ಹೊರಬರುತ್ತಿವೆ. ವೇದಿಕೆ ಮೇಲೆ ಪ್ರಚೋದನೆಯ ಭಾಷಣ ಮಾಡಿದವರಿಗೆ ಐಷಾರಾಮಿ ಬದುಕು, ವೇದಿಕೆ ಕೆಳಗೆ ನಿಂತು ಶಿಳ್ಳೆ-ಚಪ್ಪಾಳೆ ಹಾಕಿದವರದ್ದು ಶೋಚನೀಯ ಬದುಕು" ಎಂದು ಹೇಳಿದ್ದಾರೆ.

"ಬಡ ಮತ್ತು ತಳ ಸಮುದಾಯದ ಯುವಕರು ಬದುಕು ಕಟ್ಟಿಕೊಳ್ಳುವ ಮತ್ತು ಜೀವನದ ದಾರಿ ಕಂಡುಕೊಳ್ಳುವ ವಯಸ್ಸಿನಲ್ಲಿ ಅವರನ್ನು ಪ್ರಚೋದನಾತ್ಮಕ ಭಾಷಣಗಳಿಂದ ದಿಕ್ಕು ತಪ್ಪಿಸಿ, ತ್ರಿಶೂಲ ದೀಕ್ಷೆ ನೀಡಿ, ಬೀದಿಗಿಳಿಸಿ ಅವರ ಜೀವನದೊಂದಿಗೆ ಚೆಲ್ಲಾಟವಾಡುವ ವೇದಿಕೆ ಭಾಷಣಕಾರರು ಒಂದು ದಿನವೂ ಈ ಬಡವರ ಮಕ್ಕಳ ಬದುಕಿನ ಸ್ಥಿತಿಗತಿಗಳ ಬಗ್ಗೆ ಕನಿಕರ ವ್ಯಕ್ತಪಡಿಸಿಲ್ಲ, ನೆರವು ನೀಡಿಲ್ಲ. ಈ ವೇದಿಕೆ ಭಾಷಣಕಾರರು ಒಂದು ದಿನವೂ ಬಂಧನಕ್ಕೆ ಒಳಪಟ್ಟಿಲ್ಲ, ಇವರ ಮನೆಯ ಮಕ್ಕಳು ಒಂದು ದಿನವೂ ಧರ್ಮ ರಕ್ಷಣೆಗೆ ಬೀದಿಗಿಳಿದಿಲ್ಲ. ಬಡವರ ಮಕ್ಕಳು ಕೇಸ್ ಹಾಕಿಸಿಕೊಂಡು ಕೋರ್ಟಿಗೆ ಅಲೆಯುವಾಗ ಕಾನೂನು ನೆರವು ನೀಡಿಲ್ಲ, ಆರ್ಥಿಕ ನೆರವಂತೂ ಇಲ್ಲವೇ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಬಿಜೆಪಿ ಹಾಗೂ RSS ನೀಡಿದ ಧರ್ಮ ರಕ್ಷಣೆ ನಶೆಯನ್ನು ತಲೆಗೇರಿಸಿಕೊಂಡವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ, ತಮ್ಮ ಬದುಕು ಕಳೆದುಕೊಂಡಿದ್ದಕ್ಕೆ ಮರುಗುತ್ತಿದ್ದಾರೆ. ತೀರಿ ಹೋದವರ ಕುಟುಂಬದವರೂ ಸಹ ತಮ್ಮ ಮಕ್ಕಳನ್ನು ಕಳೆದುಕೊಂಡ ನೋವಿನಲ್ಲಿ ಶೋಕಿಸುತ್ತಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

"ಈಗಿನ ತಳ ಸಮುದಾಯಗಳ ಯುವ ಸಮುದಾಯಕ್ಕೆ ಇವರೆಲ್ಲರ ನೋವಿನ ಮಾತುಗಳು ಸರಿ ದಾರಿಯನ್ನು ತೋರುವಂತಾಗಲಿ" ಎಂದು ಪ್ರಿಯಾಂಕ್ ಖರ್ಗೆ ತಮ್ಮ ಪೋಸ್ಟ್‌ನಲ್ಲಿ ಆಶಿಸಿದ್ದಾರೆ.

Tags

BJPSangh ParivarPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X