Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಆ‌ರ್‌ʼಎಸ್ ನ ಬೀಗ ನಮ್ಮ ಕೈಯಲ್ಲಿ...

ಕೆಆ‌ರ್‌ʼಎಸ್ ನ ಬೀಗ ನಮ್ಮ ಕೈಯಲ್ಲಿ ಇಲ್ಲ; ಅದು ಕೇಂದ್ರ ಸರಕಾರದ ಕೈಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ʼʼಈ ಕಾನೂನು ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೆ?ʼʼ

ವಾರ್ತಾಭಾರತಿವಾರ್ತಾಭಾರತಿ16 Aug 2023 8:50 PM IST
share
ಕೆಆ‌ರ್‌ʼಎಸ್ ನ ಬೀಗ ನಮ್ಮ ಕೈಯಲ್ಲಿ ಇಲ್ಲ; ಅದು ಕೇಂದ್ರ ಸರಕಾರದ ಕೈಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.16: ಕೆಆರ್‍ಎಸ್ ಅಣೆಕಟ್ಟಿನ ಬೀಗ ನಮ್ಮ ಕೈಯಲ್ಲಿ ಇಲ್ಲ. ಅದು ಕೇಂದ್ರ ಸರಕಾರದ ಕೈಯಲ್ಲಿದೆ. ಈ ಕಾನೂನು ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೆ? ರಾಜಕಾರಣ ಯಾವ ವಿಚಾರದಲ್ಲಿ ಮಾಡಬೇಕೊ ಅದರಲ್ಲಿ ಮಾಡಬೇಕು, ಎಲ್ಲ ವಿಚಾರದಲ್ಲೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ನಗರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿಕ್ಷಣ ಕ್ಷೇತ್ರಕ್ಕೆ ಸಿಎಸ್‍ಆರ್ ಅನುದಾನ ಸದ್ಬಳಕೆ ಕುರಿತ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸರಕಾರ ರಾಜ್ಯದ ರೈತರ ಹಿತ ಮರೆತು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರ ಟೀಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮಿಳುನಾಡಿಗೆ ನೀರು ಬಿಡುವವರು ನಾವಲ್ಲ. ಅದರ ಅಧಿಕಾರ ಕೇಂದ್ರ ಸರಕಾರದ ಬಳಿ ಇದೆ. ಈ ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ? ಎಂದು ತಿರುಗೇಟು ನೀಡಿದರು.

ರಾಜ್ಯದ ರೈತರ ಹಿತ ಕಾಪಾಡುವುದಕ್ಕೆ ನಮ್ಮ ಸರಕಾರ ಬದ್ಧವಾಗಿದೆ. ಈ ಕಾರಣಕ್ಕೆ ಈಗಾಗಲೇ ನಾನು ಸಚಿವನಾದ ಬಳಿಕ 2 ಬಾರಿ ಬೆಳೆಗಳಿಗೆ ನೀರು ಹರಿಸಲು ಅನುಮತಿ ನೀಡಿದ್ದೇನೆ. ತಮಿಳುನಾಡಿನವರು 27 ಟಿಎಂಸಿ ನೀರು ಕೇಳಿದ್ದಾರೆ, ಅವರು ಕೇಳಿದಷ್ಟು ನೀರು ಕೊಟ್ಟಿಲ್ಲ. ನಾವು ನಮಗೆ ಇಚ್ಛೆ ಬಂದಂತೆ ವರ್ತಿಸಿದರೆ ಕೋರ್ಟ್ ಕೇಳಬೇಕಲ್ಲ ಎಂದು ಶಿವಕುಮಾರ್ ಹೇಳಿದರು.

ತಮಿಳುನಾಡು ಇತ್ತೀಚೆಗೆ ನಡೆದ ಕಾವೇರಿ ಟ್ರಿಬ್ಯುನಲ್ ಸಭೆಯನ್ನು ಬಹಿಷ್ಕರಿಸಿ ಹೋಗಿದ್ದಾರೆ. ಹೀಗೆ ಸಂಘರ್ಷ ಮಾಡಿಕೊಂಡು ಇರಲು ಆಗುತ್ತದೆಯೇ? ಸರಕಾರ ನಡೆಸುವವರು ಎಲ್ಲ ರೀತಿಯಲ್ಲೂ ಆಲೋಚನೆ ಮಾಡಬೇಕು. ನಾವು ಕಾನೂನು ತಜ್ಞರ ಸಲಹೆ ಕೇಳಿ ಅದರ ಅನುಗುಣವಾಗಿ ಹೆಜ್ಜೆ ಇಡಬೇಕಿದೆ. ಇಲ್ಲದಿದ್ದರೆ ಇನ್ನಷ್ಟು ದೊಡ್ಡ ನಷ್ಟವನ್ನು ನಾವು ಅನುಭವಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ರೈತರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆ ಮಾಡುತ್ತಿರುವವರು ನಮ್ಮ ರೈತರೇ, ಪ್ರತಿಭಟನೆ ಅವರ ಹಕ್ಕು. ಆದರೆ ಸುಪ್ರಿಂ ಕೋರ್ಟ್ ನಮ್ಮ ಮಾತು ಕೇಳಬೇಕಲ್ಲ. ರೈತರಿಗೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹಿಂದೆಯೂ ಅನೇಕ ಬಾರಿ ಕಾನೂನು ಹೋರಾಟ ನಡೆದಿದೆ ಎಂದರು.

ಕಳೆದ 30-40 ವರ್ಷಗಳಲ್ಲಿ ಈ ವರ್ಷ ಕಡಿಮೆ ಪ್ರಮಾಣದ ಮಳೆ ಬಿದ್ದಿದೆ. ಇಂತಹ ಸಂಕಷ್ಟದ ಕಾಲದಲ್ಲೂ ನಾವು ನಮ್ಮ ರಾಜ್ಯದ ರೈತರ ಪರವಾಗಿಯೂ ಇದ್ದೇವೆ ಹಾಗೂ ಕಾನೂನಿಗೂ ಗೌರವ ನೀಡುತ್ತಿದ್ದೇವೆ ಎನ್ನುವ ಕಾರಣಕ್ಕೆ ನೀರು ಬಿಡುಗಡೆ ಮಾಡಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ನಾನು 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ: ಸಿಎಸ್‍ಆರ್ ಹಣದ ಮೂಲಕ ನೂತನ ಶಾಲೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ಸದ್ಬಳಕೆ ಹೇಗೆ ಮಾಡಬೇಕು ಎಂಬುದಾಗಿ ಸರಕಾರ ಯೋಜನೆ ರೂಪಿಸುತ್ತಿದೆ. ನನ್ನದೂ 3 ಶಿಕ್ಷಣ ಸಂಸ್ಥೆಗಳಿದ್ದು ಪಂಚಾಯಿತಿ ಮಟ್ಟದಲ್ಲಿ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದು ಶಿವಕುಮಾರ್ ಘೋಷಿಸಿದರು.

ಸಿಎಸ್‍ಆರ್ ಹಣವು ಕೇವಲ ನಗರೀಕರಣಕ್ಕೆ ಮಾತ್ರ ಬಳಕೆಯಾಗುತ್ತಿದೆ, ಇದನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎಂಬುದು ನಮ್ಮ ಆಶಯ, ಪ್ರತಿ ಪಂಚಾಯಿತಿಯಲ್ಲಿ 3 ಶಾಲೆಗಳನ್ನು ಹೊಸದಾಗಿ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಕನಸಾಗಿದೆ. ಅದಕ್ಕೆ ಹಣದ ಸದ್ಬಳಕೆ ಕುರಿತು ಸಭೆ ನಡೆಸಲಾಯಿತು ಎಂದು ಅವರು ಮಾಹಿತಿ ನೀಡಿದರು.

ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವರ ಶಾಲೆಯ ಅಧ್ಯಾಪಕರನ್ನೆ ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸಿ ಪಾಠ ಮಾಡಬೇಕು. ಅಂತರ್‍ರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನಮ್ಮ ಕರ್ನಾಟಕದ ಪ್ರತಿ ಗ್ರಾಮೀಣ ಮಕ್ಕಳಿಗೂ ದೊರೆಯಬೇಕು ಎಂಬುದು ನಮ್ಮ ಸರಕಾರದ ಮಹತ್ವದ ಯೋಚನೆ ಮತ್ತು ಯೋಜನೆ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X