Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ...

ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನದಲ್ಲಿ ಮೂಡಿದ ಕನ್ನಡ

ವಾರ್ತಾಭಾರತಿವಾರ್ತಾಭಾರತಿ18 Dec 2023 7:34 PM IST
share
ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನದಲ್ಲಿ ಮೂಡಿದ ಕನ್ನಡ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿದ್ದಾರೆ.

ಕೆಂಪೇಗೌಡ ಅಂತರ್ ರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ ಭಾಷೆಯಲ್ಲಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು, ನಿಲ್ದಾಣದ ಲಾಂಛನ ಆಂಗ್ಲ ಭಾಷೆಯಲ್ಲಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ದೂರಿದ್ದರು.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು ಇಲ್ಲಿನ ಭಾಷೆ ಸಂಸ್ಕೃತಿಯನ್ನು ಗೌರವಿಸುವುದು ಪ್ರಾಥಮಿಕ ಜವಾಬ್ದಾರಿ. ಕೂಡಲೇ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಕಾರ್ಯದರ್ಶಿ ಪತ್ರಕ್ಕೆ ತಲುಪುತ್ತಿದ್ದಂತೆ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ತಮ್ಮ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಬಳಸಿದ್ದಾರೆ.

ಈ ಬಗ್ಗೆ ಪ್ರಾಧಿಕಾರಕ್ಕೆ ಪತ್ರವನ್ನು ಬರೆದಿರುವ ವಿಮಾನ ನಿಲ್ದಾಣದ ಅಧಿಕಾರಿ ದಿನೇಶ್ ಕುಮಾರ್, ‘ಕನ್ನಡ ಭಾಷೆ ಬೆಳವಣಿಗೆ, ಇಲ್ಲಿನ ಸಂಸ್ಕೃತಿ ಉಳಿವಿಕೆಗೆ ನಾವು ಇಲಾಖೆಯ ಜತೆ ಕೆಲಸ ಮಾಡಲಿದ್ದೇವೆ. ಮುಂದಿನ ನಮ್ಮ ಯಾವುದೇ ಕಾರ್ಯಕ್ರಮ ಹಾಗೂ ಪತ್ರ ವ್ಯವಹಾರದಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಬಳಕೆ ಮಾಡಲಾಗುವುದು. ಅಲ್ಲದೆ, ನಿಲ್ದಾಣದಲ್ಲಿ ಪ್ರತಿಯೊಂದು ಸೂಚನಾ ಫಲಕಗಳನ್ನು ಕನ್ನಡದಲ್ಲಿ ಬಳಸಲಾಗುವುದು, ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡವನ್ನು ಬಳಕೆ ಮಾಡುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳಿಗೆ ನೆಲ, ಜಲ, ವಿದ್ಯುತ್ ಸೌಲಭ್ಯಗಳನ್ನು ರಾಜ್ಯ ಸರಕಾರ ನೀಡುತ್ತಿದ್ದು, ಸ್ಥಳೀಯ ಭಾಷೆಯ ಬೆಳವಣಿಗೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಭಾಷೆ, ನೆಲ, ಜಲದ ರಕ್ಷಣೆಗೆ ಸರಕಾರ ಬದ್ಧ. ವಿಮಾನ ನಿಲ್ದಾಣದಲ್ಲಿ ಕನ್ನಡ ಬಳಕೆ ಮಾಡಿದ ನಿಲ್ದಾಣದ ಅಧಿಕಾರಿಗಳ ನಡೆ ಎಲ್ಲರಿಗೂ ಮಾದರಿಯಾಗಬೇಕು’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X