ನಟ ಗಣೇಶ್ ಗೆ ತಾತ್ಕಾಲಿಕ ಶೆಡ್ ನಿರ್ಮಿಸಲು ನೀಡಿದ್ದ ಅನುಮತಿ ರದ್ದು: ಸಚಿವ ಈಶ್ವರ ಬಿ. ಖಂಡ್ರೆ

ಬೆಂಗಳೂರು, ಸೆ.5: ಚಲನಚಿತ್ರ ನಟ ಗಣೇಶ್ ಅವರಿಗೆ ಬಂಡೀಪುರ ಅರಣ್ಯದ ಸಮೀಪ ಗುಂಡ್ಲುಪೇಟೆ ತಾಲೂಕಿನ ಜಕ್ಕಳ್ಳಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಿಸಲು ಕ್ರಮಬದ್ಧವಾಗಿ, ನಿಯಮಬದ್ಧವಾಗಿ ಅರಣ್ಯ ಇಲಾಖೆ ಅನುಮತಿ ನೀಡಿತ್ತು. ಆದರೆ ಅವರು ಶಾಶ್ವತ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಅನುಮತಿ ರದ್ದು ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ನಂತರ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗಣೇಶ್ ಅವರ ಜಮೀನು ಇದೆ. ಅವರು ಮನೆ ನಿರ್ಮಿಸುತ್ತಿರುವ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿದೆ.
Next Story