Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ.ಸಹೋದರು ಕೊಳ್ಳೆ ಹೊಡೆದಿರುವ ನೈಸ್...

ಡಿ.ಕೆ.ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆ ಶೀಘ್ರವೇ ಬಹಿರಂಗ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ20 Aug 2023 6:01 PM IST
share
ಡಿ.ಕೆ.ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆ ಶೀಘ್ರವೇ ಬಹಿರಂಗ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಆ. 20: ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ?’ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರವಿವಾರ ರಾಮನಗರದಲ್ಲಿ ಮಾತನಾಡಿದ ಅವರು, ‘ನಾಳೆ ಅಥವಾ ನಾಡಿದ್ದು ನೈಸ್ ಅಕ್ರಮಗಳು, ಡಿ.ಕೆ.ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆಗಳನ್ನು ಬಹಿರಂಗ ಮಾಡುತ್ತೇನೆ. ನೈಸ್ ಭೂಮಿ ಸೇರಿ ಬೆಂಗಳೂರಿನ ಸುತ್ತಾ ರೈತರ ಭೂಮಿ ಲೂಟಿ ಮಾಡಿಕೊಂಡು ಬದುಕುತ್ತಿದ್ದಾನೆ. 2013ರಲ್ಲಿ ಎಂ.ಪಿ. ಆಗುವುದಕ್ಕೆ ಮುಂಚೆ ಇವನ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಹಿ ಹಾಕಿದ್ದು ಗೌಡರೇ: ‘ನೈಸ್ ಯೋಜನೆಗೆ ದೇವೇಗೌಡರೇ ಒಪ್ಪಂದ ಮಾಡಿಕೊಂಡಿದ್ದು. ಇಲ್ಲ ಎಂದು ನಾನೆಲ್ಲಿ ಹೇಳಿದೆ, ಅವರು ರಸ್ತೆ ಆಗಲಿ ಎಂದು ಒಪ್ಪಂದ ಮಾಡಿಕೊಂಡರು. ಬೆಂಗಳೂರು-ಮೈಸೂರು ಜನಕ್ಕೆ ಅನುಕೂಲವಾಗಲಿ ಎಂದು ಈ ಯೋಜನೆಗೆ ಅವರು ಒಪ್ಪಿಗೆ ನೀಡಿದರು. ಬೆಂಗಳೂರು-ಮೈಸೂರು ನಡುವೆ ನಾಲ್ಕುಪಥದ ಹೆದ್ದಾರಿ ಮಾಡಬೇಕೆಂದು ದೇವಗೌಡರು ತೀರ್ಮಾನ ಮಾಡಿದರು. ಹಣ ಇಲ್ಲ ಎನ್ನುವ ಕಾರಣಕ್ಕೆ ಹೆಗಡೆ ಕಾಲದಲ್ಲಿ ಆ ಯೋಜನೆ ಆಗಲಿಲ್ಲ. ಕೊನೆಗೆ ದೇವೇಗೌಡರು ಸಿಎಂ ಆದ ಮೇಲೆ ಈ ಯೋಜನೆಗೆ ಚಾಲನೆ ನೀಡಿದರು ಎಂದು ತಿಳಿಸಿದರು.

ಲೂಟಿಯಲ್ಲಿ ಸಹೋದರರ ಪಾಲು ಎಷ್ಟಿದೆ?: ದೇವೇಗೌಡರು ಮಾಡಿಕೊಂಡ ಒಪ್ಪಂದದಂತೆ ರಸ್ತೆ ಆಗಿದ್ದಿದ್ದರೆ ಏಷ್ಯಾ ಖಂಡದಲ್ಲಿಯೇ ಬೆಂಗಳೂರು-ಮೈಸೂರು ನಗರಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು. ವಾಣಿಜ್ಯ ಚಟುವಟಿಕೆಗಳು ಹೆಚ್ಚಿ ಜನರಿಗೆ ಜೀವನೋಪಾಯ ಸಿಗುತ್ತಿತ್ತು. ಆದರೆ, ಈ ಲೂಟಿಕೋರರು ಮಾಡಿದ್ದೇನು? ಬೆಂಗಳೂರು ಸುತ್ತಾಮುತ್ತ ರೈತರ ಭೂಮಿಯನ್ನು ಕೊಳ್ಳೆ ಹೊಡೆದರು’ ಎಂದು ಅವರು ಟೀಕಿಸಿದರು.

‘ನೈಸ್ ಕಂಪೆನಿ ಮಾಡಿರುವ ಲೂಟಿಯಲ್ಲಿ ಡಿ.ಕೆ.ಸಹೋದರರ ಪಾಲು ಎಷ್ಟಿದೆ? ಈ ಬಗ್ಗೆ ದಾಖಲೆಗಳನ್ನೇ ಹೊರಗಿಡುತ್ತೇನೆ. 2004ರಲ್ಲಿ ಇವರ ಅಣ್ಣ (ಡಿ.ಕೆ.ಸುರೇಶ್ ಅಣ್ಣ ಡಿ.ಕೆ.ಶಿವಕುಮಾರ್) ರಾಮನಗರ ಜಿಲ್ಲೆ ಉದ್ಧಾರ ಮಾಡುವುದಕ್ಕೆ ಮಂತ್ರಿ ಆಗಿದ್ದರೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ದುಡ್ಡು ಹೊಡೆಯೋದಕ್ಕೆ ಮಂತ್ರಿ ಆಗಿದ್ದರೋ? ಎಲ್ಲ ದಾಖಲೆಗಳನ್ನು ನಾಳೆ-ನಾಡಿದ್ದರಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದು ಪ್ರಕಟಿಸಿದರು.

ಮೆಡಿಕಲ್ ಕಾಲೇಜ್ ಕನಕಪುರಕ್ಕೆ ಯಾಕೆ?: ‘ರಾಮನಗರ ಜಿಲ್ಲೆ ಜನರಿಗೆ ನನ್ನಿಂದ ಕಿಂಚಿತ್ತೂ ಅನ್ಯಾಯ ಆಗಿಲ್ಲ. ಜಿಲ್ಲೆಯ ಜನರನ್ನು ನಾನು ತಂದೆ-ತಾಯಿ ಸ್ಥಾನದಲ್ಲಿಟ್ಟು ನೋಡುವವನು. ಸ್ವಷ್ಟವಾಗಿ ಹೇಳಬಯಸುತ್ತೇನೆ. ಕಳೆದ ಚುನಾವಣೆ ಫಲಿತಾಂಶದ ಬಗ್ಗೆ ನಾನು ಜನರಿಗೆ ದೋಷ ಕೊಡಲ್ಲ. ನಾನು ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಏನು ಎಂಬುದು ಆ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಕುಮಾರಸ್ವಾಮಿ ಉತ್ತರಿಸಿದರು.

ರಾಮನಗರಕ್ಕೆ ರಾಜೀವ್‍ಗಾಂಧಿ ವೈದ್ಯಕೀಯ ವಿವಿ ಕೊಟ್ಟವನು ನಾನು. ಆಮೇಲೆ ಪ್ರತ್ಯೇಕವಾಗಿ ಇವರ ಹಿಂಸೆ ತಾಳಲಾರದೆ 100 ಕೋಟಿ ರೂ.ಮೀಸಲಿಟ್ಟು ಕನಕಪುರಕ್ಕೆ ಮೆಡಿಕಲ್ ಕಾಲೇಜ್ ಮಂಜೂರು ಮಾಡಿದೆ. ಆಮೇಲೆ ಬಂದ ಬಿಜೆಪಿ ಸರಕಾರದವರು ಅದನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಈಗ ರಾಮನಗರದಲ್ಲಿ ಮಾಡಬೇಕಾದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗ್ತಾ ಇದ್ದಾರೆ, ಎಲ್ಲೋ ಮೂಲೆಗೆ. ಇದು ಇವರು ರಾಮನಗರಕ್ಕೆ ಕೊಡುತ್ತಿರುವ ಬಳುವಳಿ’ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X