Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್...

ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆ ಶೂನ್ಯ : ಬಿ.ವೈ.ವಿಜಯೇಂದ್ರ

"ನುಡಿದಂತೆ ನಡೆಯುವ ಸರಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ20 May 2024 3:22 PM IST
share
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆ ಶೂನ್ಯ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ. ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳುಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬರಗಾಲದ ವಿಚಾರದಲ್ಲಿ ಸರಕಾರದ ನಡವಳಿಕೆ ಅಕ್ಷಮ್ಯ ಅಪರಾಧ

ಗ್ಯಾರಂಟಿಯನ್ನೇ ಅಭಿವೃದ್ಧಿ ಎಂದು ಬಿಂಬಿಸಲಾಗುತ್ತಿದೆ. ಬರಗಾಲದ ವಿಚಾರದಲ್ಲಿ ಸರಕಾರದ ನಡವಳಿಕೆ ಅಕ್ಷಮ್ಯ ಅಪರಾಧ. ಕೇಂದ್ರ ಸರಕಾರದಿಂದ ಅನುದಾನ ಬಂದಿಲ್ಲ ಎಂದು ಹೋರಾಟ ಮಾಡಿದರು. ಆದರೆ, ಚುನಾಯಿತ ಸರಕಾರದ ಜವಾಬ್ದಾರಿ, ಮುಖ್ಯಮಂತ್ರಿಗಳ ಹೊಣೆಯನ್ನು ನಿಭಾಯಿಸುತ್ತಿದ್ದಾರೆ ಎಂದು ರೈತರಿಗೆ ಯಾವತ್ತೂ ಅನಿಸಿಲ್ಲ ಎಂದು ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 692ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರಕಾರವು ಕೃಷಿ ಸಾಲ, ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಗಂಭೀರವಾದ ಅಥವಾ ಜವಾಬ್ದಾರಿಯುತ ಸರಕಾರವಾಗಿ ನಡೆದುಕೊಳ್ಳದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಬಗೆಗಿನ ಸರಕಾರದ ಅಸಡ್ಡೆಯ ಧೋರಣೆ ಗೋಚರಿಸಿದೆ. ಸರಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆಯೇ? ತನ್ನ ಹೊಣೆ ನಿಭಾಯಿಸಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರದ ಜೊತೆ ಸಂಘರ್ಷದ ಹಾದಿ

ಕೇಂದ್ರ ಸರಕಾರದ ಜೊತೆ ಸಂಘರ್ಷದ ಹಾದಿಯನ್ನು ತೆಗೆದುಕೊಂಡಿರುವುದೇ ಈ ಸರಕಾರದ ಸಾಧನೆ ಎಂದು ವಿಜಯೇಂದ್ರ ಅವರು ಟೀಕಿಸಿದರು. ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರವು ಕೇಂದ್ರ ಸರಕಾರದ ವಿರುದ್ಧ ಟೀಕೆ ಮಾಡುವುದು, ಗೂಬೆ ಕೂರಿಸುವುದನ್ನು, ಎಲ್ಲ ವಿಚಾರದಲ್ಲೂ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು ಕೇಂದ್ರ ಸರಕಾರದತ್ತ ಬೆಟ್ಟು ಮಾಡುವುದನ್ನು ಯಶಸ್ವಿಯಾಗಿ ಮಾಡುತ್ತಾ ಬಂದಿದೆ ಎಂದು ಆಕ್ಷೇಪಿಸಿದರು.

ಕೊಲೆಗಡುಕರ ಸರಕಾರ

ಕರ್ನಾಟಕ ಎಂದರೆ ಕೊಲೆಗಡುಕರ ಸರಕಾರ ಎಂದು ದೇಶದೆಲ್ಲೆಡೆ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲೂ ಮಾತು ಕೇಳುತ್ತಿದೆ. ಕೊಲೆ ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರಕಾರ ನಿಷ್ಕ್ರಿಯವಾಗಿದೆ. ಲವ್ ಜಿಹಾದ್ ಪ್ರಕರಣದಲ್ಲಿ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದೆ. ಕೊಲೆಗಡುಕರಿಗೆ ಶಕ್ತಿ ಕೊಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆಯೇ? ಎಂಬ ಪ್ರಶ್ನೆಯನ್ನು ಕೇಳುವಂತಾಗಿದೆ. ಮಹಿಳಾ ಸುರಕ್ಷತೆ ಬಗ್ಗೆ ಯಕ್ಷಪ್ರಶ್ನೆ ಮೂಡಿದೆ. ಅಭಿವೃದ್ಧಿ ಇಲ್ಲ. ರೈತರ ವಿಚಾರದಲ್ಲಿ ಕಾಳಜಿ ಇಲ್ಲದಂತಾಗಿದೆ. ಲವ್ ಜಿಹಾದ್ ಹೆಚ್ಚಳ, ಹಿಂದೂ ಕಾರ್ಯಕರ್ತರ ಹತ್ಯೆಯೂ ದಿನೇದಿನೇ ಹೆಚ್ಚಾಗುತ್ತಿದ್ದರೂ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X