Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಂ.ಬಿ.ಪಾಟೀಲ್ ನೇತೃತ್ವದ ಉನ್ನತ ಮಟ್ಟದ...

ಎಂ.ಬಿ.ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಭೇಟಿ ಫಲಶ್ರುತಿ; ಆರ್ಥಿಕ ನಿರೀಕ್ಷೆ ಹೆಚ್ಚಿಸಿದ ಜಪಾನ್ ಕಂಪೆನಿಗಳ ಜೊತೆಗಿನ ಸರಕಾರದ ಬಾಂಧವ್ಯ

ವಾರ್ತಾಭಾರತಿವಾರ್ತಾಭಾರತಿ28 Jun 2024 11:46 PM IST
share
ಎಂ.ಬಿ.ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಭೇಟಿ ಫಲಶ್ರುತಿ; ಆರ್ಥಿಕ ನಿರೀಕ್ಷೆ ಹೆಚ್ಚಿಸಿದ ಜಪಾನ್ ಕಂಪೆನಿಗಳ ಜೊತೆಗಿನ ಸರಕಾರದ ಬಾಂಧವ್ಯ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗವು ತನ್ನ ಜಪಾನ್ ಭೇಟಿಯ ಐದನೆ ದಿನ ಪಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೋರೇಷನ್, ಶಿಮಡ್ಜು ಕಾರ್ಪೋರೇಷನ್, ಒಸಾಕಾ ಗ್ಯಾಸ್, ಜಾಯಿನ್ ಮತ್ತು ಸುಮಿತೊಮೊ ಕಾರ್ಪೋರೇಷನ್ ಕಂಪೆನಿಗಳ ಪ್ರಮುಖರನ್ನು ಭೇಟಿಯಾಗಿ ಫಲಪ್ರದ ಸಮಾಲೋಚನೆ ನಡೆಸಿತು.

ಆವಿಷ್ಕಾರ ಮುನ್ನಡೆ, ಸುಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆಗೆ ಕರ್ನಾಟಕ ರಾಜ್ಯವು ಸರ್ವ ರೀತಿಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರುವುದನ್ನು ಈ ಸರಣಿ ಸಭೆಗಳಲ್ಲಿ ಜಪಾನಿನ ಬಹುರಾಷ್ಟ್ರೀಯ ಕಂಪೆನಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಬ್ಯಾಟರಿ ತಯಾರಿಕೆ ಹಾಗೂ ನವೀಕರಿಸಬಹುದಾದ ಇಂಧನ ಉತ್ಪನ್ನಗಳನ್ನು ತಯಾರಿಸುವ ಪಾನಾಸೋನಿಕ್ ಎನರ್ಜಿಯು ಬ್ಯಾಟರಿ ಬಿಡಿಭಾಗ ಪೂರೈಕೆ ಹೆಚ್ಚಿಸಲು ಬೆಂಗಳೂರಿನ ನವೋದ್ಯಮಗಳಾದ ನೊಪೊ ಮತ್ತು ಲಾಗ್-9 ಜೊತೆ ಪಾಲುದಾರಿಕೆ ಮಾಡಿಕೊಳ್ಳಲು ಸರಕಾರವು ಅಗತ್ಯ ನೆರವು ಒದಗಿಸಲಿದೆ ಎಂದು ಪಾಟೀಲ್, ಕಂಪೆನಿಯ ನಿರ್ದೇಶಕ ನಕಾನಿಶಿ ಮತ್ತು ಜನರಲ್ ಮ್ಯಾನೇಜರ್ ನರುಸೆ ಅವರಿಗೆ ಭರವಸೆ ನೀಡಿದರು.

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‍ಸಿ)ಯಂತಹ ಸಂಶೋಧನಾ ಸಂಸ್ಥೆಗಳ ಜೊತೆಗಿನ ಸಹಯೋಗದ ಸಾಧ್ಯತೆಗಳನ್ನೂ ಚರ್ಚಿಸಲಾಯಿತು. ವಿದ್ಯುತ್ ಚಾಲಿತ ಮೋಟರ್ಸ್ ಮತ್ತು ಸಂಬಂಧಿತ ಬಿಡಿಭಾಗಗಳನ್ನು ತಯಾರಿಸುವ ನಿಡೆಕ್ ಕಾರ್ಪೋರೇಷನ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಲು ಒಲವು ವ್ಯಕ್ತಪಡಿಸಿದೆ. ಕಂಪೆನಿಯು 456 ಕೋಟಿ ರೂ.(55 ದಶಲಕ್ಷ ಡಾಲರ್) ವೆಚ್ಚದಲ್ಲಿ ಹುಬ್ಬಳ್ಳಿಯಲ್ಲಿ 2025ರ ವೇಳೆಗೆ ವಿದ್ಯುತ್‍ಚಾಲಿತ ವಾಹನ ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಬದ್ಧತೆ ತೋರಿದೆ. ನಿಡೆಕ್ ಸಮೂಹದ ಕಂಪೆನಿಗಳಿಗೆ ಸಾಫ್ಟ್‍ವೇರ್ ಒದಗಿಸುವ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (ಆರ್ ಆಂಡ್ ಡಿ) ಸ್ಥಾಪಿಸಲು ರಾಜ್ಯದಲ್ಲಿ ಅಗತ್ಯವಾದ ನೆರವು ಕಲ್ಪಿಸಲಾಗುವುದು ಎಂದು ಪಾಟೀಲ್ ಭರವಸೆ ನೀಡಿದರು.

ಒಸಾಕಾ ಗ್ಯಾಸ್ ಕಂಪೆನಿಯು ಭಾರತದಲ್ಲಿ ಈಗಾಗಲೇ 1,992 ಕೋಟಿ ರೂ. ಹೂಡಿಕೆ ಮಾಡಿದ್ದು, ಮುಂದಿನ 5 ವರ್ಷಗಳಲ್ಲಿ 4,980 ಕೋಟಿ ರೂ.ಬಂಡವಾಳ ಹೂಡಿಕೆ ಮಾಡಲಿದೆ. ರಾಜ್ಯದಲ್ಲಿ ಕಂಪೆನಿಯ ಗೃಹ ಮತ್ತು ಕೈಗಾರಿಕಾ ಬಳಕೆಯ ಅನಿಲ ಉತ್ಪಾದನಾ ಘಟಕಗಳ ವಿಸ್ತರಣೆಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ನಿಯೋಗವು ತಿಳಿಸಿದೆ.

ಶಿಮಡ್ಜು ಕಾರ್ಪೋರೇಷನ್ ನ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಕತ್ಸುಅಕಿ ಕೈಟೊ ಅವರ ಜೊತೆಗೆ ನಿಯೋಗವು ಸಮಾಲೋಚನೆ ನಡೆಸಿತು. ರಾಜ್ಯದಲ್ಲಿ ತನ್ನ ವಹಿವಾಟು ಹಾಗೂ ಸಂಶೋಧನೆ ಹಾಗೂ ಅಭಿವೃದ್ಧಿ (ಆರ್ ಆಂಡ್ ಡಿ) ಚಟುವಟಿಕೆ ವಿಸ್ತರಿಸಲು ಕಂಪೆನಿಯು ಆಸಕ್ತಿ ಹೊಂದಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಮತ್ತು ಸುಧಾರಿತ ವೈದ್ಯಕೀಯ ತಂತ್ರಜ್ಞಾನದ ವಿಸ್ತರಣಾ ಯೋಜನೆಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸರಕಾರದ ಪರವಾಗಿ ಭರವಸೆ ನೀಡಲಾಗಿದೆ.

ಜಪಾನಿನ ಕಂಪೆನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಜಾಯಿನ್ ಪ್ರತಿನಿಧಿಗಳು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಸಚಿವ ಎಂ.ಬಿ.ಪಾಟೀಲ್, ನಿಡೆಕ್ ಕಾರ್ಪೋರೇಷನ್ ನ ಸಿಇಒ ಮಿತ್ಸುಯಾ ಕಿಶಿಡಾ, ಕಾರ್ಯ ನಿರ್ವಾಹಕ ಉಪಾಧ್ಯಕ್ಷ ತತ್ಸುಯಾ ನಿಶಿಮೊತೊ ಅವರನ್ನು ಜಪಾನಿನ ಒಸಾಕಾದಲ್ಲಿ ಭೇಟಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X