ರಾಯಚೂರು | ಕಲ್ಲೂರು ದೇವಸ್ಥಾನದಲ್ಲಿ ಚಿನ್ನಾಭರಣ ಕಳವು; ಪೊಲೀಸರಿಂದ ತನಿಖೆ

ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ದೇವರ ಚಿನ್ನದ ಕಿರಿಟಾ ಸೇರಿದಂತೆ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ ಹಾಗೂ ಸಿಪಿಐ ಶಶಿಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





