Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಳೆ ಬಂದ್ ಗೆ ಅವಕಾಶವಿಲ್ಲ,...

ನಾಳೆ ಬಂದ್ ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Sept 2023 3:43 PM IST
share
ನಾಳೆ ಬಂದ್ ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ.28: "ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

"ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ, ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ" ಎಂದು ಜನರಲ್ಲಿ ಅವರು ಮನವಿ ಮಾಡಿದರು.

ನಾಳೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

"ನಾಳೆ(ಸೆ.29) ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್ ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದರು.

"ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್ಸ್ ನೀರು ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ಸ್ ನೀರು ಹೋಗುತ್ತಿರಬಹುದು" ಎಂದು ತಿಳಿಸಿದರು.

"ಹಿರಿಯ ಕೃಷಿ ತಜ್ಞರು, ನೀರಾವರಿ ತಂತ್ರಜ್ಞರ ಸಭೆ ಕರೆದಿದ್ದು ಅಲ್ಲಿ ಚರ್ಚೆ ಮಾಡಲಾಗುವುದು. ಯಾರು ಭಾಗವಹಿಸುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಆಗುವುದಿಲ್ಲ" ಎಂದು ಹೇಳಿದರು.

ನಾಳಿನ ಬೆಳವಣಿಗೆ ನೋಡಿಕೊಂಡು ನ್ಯಾಯಾಲಯಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, "ಈಗಾಗಲೇ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ತಾಂತ್ರಿಕ ಸಮಿತಿಯವರು 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸು ಮಾಡಿದ್ದಾರೆ. ನಾಳೆ ಪ್ರಾಧಿಕಾರದವರು ಏನು ಸೂಚನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು" ಎಂದು ತಿಳಿಸಿದರು.

ಎಂಎಲ್ಸಿ, ಲೋಕಸಭಾ ಚುನಾವಣೆಗೆ ತಯಾರಿ

"ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲು ಸಲಹೆ ಪಡೆಯಲಾಗುತ್ತಿದೆ. ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲಾ ಭಾಗದ ನಾಯಕರುಗಳ ಜತೆ ಎಂಎಲ್ಸಿ ಚುನಾವಣೆ ಬಗ್ಗೆ ಚರ್ಚೆ ನಡಸಲಾಗುತ್ತಿದೆ" ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಭೇಟಿಯಾಗಿದ್ದರು ಎನ್ನುವ ಪ್ರಶ್ನೆಗೆ, "ಮೈತ್ರಿ ವಿಚಾರವಾಗಿ ಬಹಳಷ್ಟು ಜನರಿಗೆ ಸಿಟ್ಟಿದೆ. ಸಿಎಂ ಹಾಗೂ ನಾನು ಶುಕ್ರವಾರ ಈ ವಿಚಾರವಾಗಿ ಮಾತನಾಡುತ್ತೇವೆ" ಎಂದರು.

ಹರಿಪ್ರಸಾದ್ ಹಾಗೂ ಮುನಿಯಪ್ಪ ಭೇಟಿ ಬಗ್ಗೆ ಕೇಳಿದಾಗ, "ಬಿ.ಕೆ.ಹರಿಪ್ರಸಾದ್ ಮತ್ತು ಮುನಿಯಪ್ಪ ಲೋಕಸಭೆ ಚುನಾವಣೆಯ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದರು. ಇದೇ ವೇಳೆ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಿ ಎಂದು ಮುನಿಯಪ್ಪ ಸಲಹೆ ನೀಡಿದರು" ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X