Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ...

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಸರಕಾರಿ ಹಂತದಲ್ಲಿ ಚರ್ಚೆಯಾಗಿಲ್ಲ: ಸಚಿವ ಡಾ.ಜಿ.ಪರಮೇಶ್ವರ

ವಾರ್ತಾಭಾರತಿವಾರ್ತಾಭಾರತಿ14 Aug 2024 1:16 PM IST
share
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಸರಕಾರಿ ಹಂತದಲ್ಲಿ ಚರ್ಚೆಯಾಗಿಲ್ಲ: ಸಚಿವ ಡಾ.ಜಿ.ಪರಮೇಶ್ವರ

ಬೆಂಗಳೂರು, ಆ.14: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರಕಾರದ ಹಂತದಲ್ಲಿ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಪಕ್ಷದ ಮುಖಂಡರು ದಿಲ್ಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿವೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮೂಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನು ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಕ್ಯಾಬಿನೆಟ್ ತೀರ್ಮಾನಿಸಿ ರಾಜ್ಯಪಾಲರಿಗೆ ಸಲಹೆ ಮಾಡಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು

ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ. ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದರು.

ಭೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ. ಎಲ್ಲವನ್ನು ತಾರ್ಕಿಕ ಅಂತ್ಯಕ್ಕೆ ತರಬೇಕು ಎಂದು ಹೇಳಿದರು.

Tags

Dr.G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X