Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾರವಾರದಲ್ಲಿ ಜಿಲ್ಲಾಧಿಕಾರಿ ಕಾರಿಗೆ...

ಕಾರವಾರದಲ್ಲಿ ಜಿಲ್ಲಾಧಿಕಾರಿ ಕಾರಿಗೆ ಡೀಸೆಲ್ ಹಾಕಿಸಲು ಹಣವಿಲ್ಲ, ಹಾವೇರಿಯಲ್ಲಿ ಬಿಸಿಯೂಟಕ್ಕೆ ಅಕ್ಕಿ ಇಲ್ಲ: ಸಿ.ಟಿ.ರವಿ ಆರೋಪ

ʼʼರಾಜ್ಯದ ಪರಿಸ್ಥಿತಿಗೆ ಕನ್ನಡಿ ಹಿಡಿಯಲು ಶ್ವೇತಪತ್ರವೇ ಅಗತ್ಯವಿಲ್ಲʼʼ

ವಾರ್ತಾಭಾರತಿವಾರ್ತಾಭಾರತಿ22 Aug 2023 7:03 PM IST
share
ಕಾರವಾರದಲ್ಲಿ ಜಿಲ್ಲಾಧಿಕಾರಿ ಕಾರಿಗೆ ಡೀಸೆಲ್ ಹಾಕಿಸಲು ಹಣವಿಲ್ಲ, ಹಾವೇರಿಯಲ್ಲಿ ಬಿಸಿಯೂಟಕ್ಕೆ ಅಕ್ಕಿ ಇಲ್ಲ: ಸಿ.ಟಿ.ರವಿ ಆರೋಪ

ಮಂಡ್ಯ, ಆ.22: ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೂರೇ ತಿಂಗಳಲ್ಲಿ ರಾಜ್ಯ ಅದ್ವಾನವಾಗಿ ಬಿಟ್ಟಿದ್ದು, ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿಯಲು ಶ್ವೇತಪತ್ರದ ಅವಶ್ಯಕತೇನೆ ಬೇಕಿಲ್ಲ ಎಂದು ಮಾಜಿ ಶಾಸಕ ಸಿ.ಟಿ.ರವಿ ಟೀಕಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಕಾರಿಗೆ ಡೀಸೆಲ್ ಹಾಕಿಸಲು ಹಣವಿಲ್ಲ, ಹಾವೇರಿಯಲ್ಲಿ ಬಿಸಿಯೂಟ ಅಕ್ಕಿ ಇಲ್ಲ, ಅಂಗನವಾಡಿಗೆ ಕೊಳಕು ಮೊಟ್ಟೆ, ಕೆಎಸ್ಸಾರ್ಟಿಸಿ ಸಿಬ್ಬಂದಿಗೆ ಸಂಬಳವೇ ಇಲ್ಲ ಎಂದು ಅವರು ಆರೋಪಿಸಿದರು.

‘ಗ್ಯಾರಂಟಿ’ ಆಸೆ ತೋರಿಸಿ ಪರಿಸ್ಥಿತಿ ಲಾಭ ಪಡೆದು ಅಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದಿದೆ. ಉಚಿತವಾಗಿ ವಿದ್ಯುತ್ ಕೊಡುವುದಾಗಿ ಹೇಳುತ್ತಾರೆ. ಆದರೆ, ಅನಿಯಮಿತ ವಿದ್ಯುತ್ ಕಡಿತವಾಗುತ್ತಿದೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ರಾಜ್ಯ ಕತ್ತೆಲೆಯಲ್ಲಿ ಮಲಗಿದೆ ಎಂದು ಅವರು ಆಪಾದಿಸಿದರು.

ತಮಿಳುನಾಡಿಗೆ ನೀರು ಹರಿಯಬಿಟ್ಟು ಮಾಡಿದ ಪಾಪಕ್ಕೆ ಎಲ್ಲರ ಕೈಯಲ್ಲೂ ಅಧಿಕೃತ ಮುದ್ರೆ ಒತ್ತಿಸಿಕೊಳ್ಳಲು ಸರ್ವಪಕ್ಷ ಸಭೆ ಕರೆದಿದ್ದಾರೆ. ಮುಂಚೆಯೇ ಪರಿಸ್ಥಿತಿ ಅವಲೋಕಿಸಿ ಅಥವಾ ಯಾರನ್ನಾದರೂ ಕೇಳಿ ನೀರು ಬಿಟ್ರಾ? ಸರ್ವಪಕ್ಷ ಯಾವ ಉದ್ದೇಶಕ್ಕೆ ಕರೆದಿದ್ದೀರಿ? ಎಂದು ಅವರು ವಾಗ್ದಾಳಿ ನಡೆಸಿದರು.

‘ಇಂಡಿಯಾ’ ಒಕ್ಕೂಟದಲ್ಲಿರುವ ಸ್ಟಾಲಿನ್ ಅವರನ್ನು ಸಂತೃಪ್ತಿಗೊಳಿಸಲು ಅವರು ಕೇಳುವುದಕ್ಕೆ ಮುಂಚೆಯೇ ತಮಿಳನಾಡಿಗೆ ನೀರು ಬಿಡಲಾಗಿದೆ. ರಾಜ್ಯದ ರೈತರ ಬದುಕಿಗೆ ಕೊಳ್ಳಿ ಹಿಡಲಾಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಅವರು ಕಿಡಿಕಾರಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಹಾಗು ಇತರೆ ಮುಖಂಡರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

“ಅವರ ಕಾಲ್ಗುಣವೋ ಎನೋ, ಕಾಂಗ್ರೆಸ್‍ನವರು ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬರಗಾಲವೇ. ಇದು ನಮ್ಮ ದುರ್ದೈವ. ಅವರು ಬಂದಾಗ ಡ್ಯಾಂ ಭರ್ತಿ ಆಗಿದೆ ಅನ್ನುವುದು ಕಡಿಮೆ. ದೇವರು ದಿಂಡ್ರು ಮೇಲೆ ನಂಬಿಕೆ ಇದ್ರೆ ದೇವರಾದ್ರೂ ಕೃಪೆ ತೋರ್ತಾನೆ. ಆದರೆ, ಮುಂಚೇನೆ ಇವ್ಕೆ ದೇವ್ರು ದಿಂಡ್ರು ಅಂದ್ರೆ ಆಗಲ್ಲ. ದೇವರು ಎಲ್ಲಿ ಕೃಪೆ ತೋರ್ತಾನೆ? ಜನ ಮೆಚ್ಚಿಸಲು ಎಲೆಕ್ಷನ್ ಟೈಂನಲ್ಲಿ ಕೈಮುಗೀತಾರೆ ಅಷ್ಟೆ.”

-ಸಿ.ಟಿ.ರವಿ. ಮಾಜಿ ಶಾಸಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X