ನಿಮ್ಮಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ: ಸಿಎಂಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು: ಗೋವಿಂದ ಕಾರಜೋಳ ನಮ್ಮ ಪಕ್ಷದ ಹಿರಿಯ ನಾಯಕರಿದ್ದು, ಡಿಸಿಎಂ ಆಗಿದ್ದವರು. ಪ್ರಸ್ತುತ ಸಂಸದರಾಗಿದ್ದು, ಭವಿಷ್ಯತ್ತಿನಲ್ಲಿ ಅವರು ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಅವಕಾಶಗಳ ಬಾಗಿಲು ಅವರಿಗಾಗಿ ತೆರೆದೇ ಇದೆ. ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಗೌರವ ಕೊಡುವುದನ್ನು ನಾವು ನಿಮ್ಮಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಗುರುವಾರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ಸಾಮಾಜಿಕ ನ್ಯಾಯ, ಮೀಸಲಾತಿ, ಸಂವಿಧಾನದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು ಮತ್ತು ನಿಮ್ಮ ಕಾಂಗ್ರೆಸ್ಸಿನ ಅಸಲಿ ಮುಖವಾಡ ಏನೆಂಬುದು ರಾಜ್ಯ ಹಾಗೂ ದೇಶದ ಜನತೆಗೆ ತಿಳಿಯಲಿ ಎಂಬ ಕಾರಣ ಅತ್ಯಂತ ಗೌರವದಿಂದ ನಿಮ್ಮ ಕಾಳಜಿ ನೈಜವೇ ಆಗಿದ್ದರೆ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿ ಎಂಬ ಸಲಹೆ ನೀಡಿದ್ದೆ, ಆ ಸಲಹೆಯನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸುವ ಬದಲು ಹತಾಶೆಯಿಂದ ಸಮರ್ಥನೀಯವಲ್ಲದ ಉತ್ತರ ನೀಡಿದ್ದೀರಿ ಎಂದು ಟೀಕಿಸಿದ್ದಾರೆ.
ಖರ್ಗೆಯವರಿಗೆ ಅವಕಾಶವಿದ್ದರೂ ಅವರ ಹಿರಿತನವನ್ನು ಬದಿಗೆ ಸರಿಸಿ ಮುಖ್ಯಮಂತ್ರಿ ಸ್ಥಾನ ನೀಡದೇ ವಂಚಿಸಿದ್ದು ಕಾಂಗ್ರೆಸ್ ಅಲ್ಲವೇ?. ಕರ್ನಾಟಕದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅರ್ಹ ನಾಯಕರು ಸಿಎಂ ಆಗುವ ಅವಕಾಶ ತಪ್ಪಿಸಿದವರು ಯಾರು? ಎಂಬ ಪ್ರಶ್ನೆಗೆ ಇತಿಹಾಸದ ಪುಟಗಳಲ್ಲಿ ಉತ್ತರ ಶಾಶ್ವತವಾಗಿ ಅಚ್ಚೊತ್ತಿದೆ. ನಿಮ್ಮ ‘ಅಹಿಂದ ಕಾಳಜಿ’ ಏನೆಂಬುದು ನಾಡಿನ ಎಲ್ಲ ಸಮುದಾಯಗಳಿಗೆ ಸ್ಪಷ್ಟವಾಗಿ ಗೊತ್ತಿದೆ, ಯಾವುದೇ ಕ್ಷಣದಲ್ಲಿ ಅದು ಸ್ಫೋಟಗೊಳ್ಳಲಿದೆ, ಅದಕ್ಕಾಗಿ ದಿನಗಣನೆ ಆರಂಭವಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಅಸಡ್ಡೆಗೊಳಗಾಗಿದ್ದ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿಯ ಪ್ರವೇಶ ದ್ವಾರದಲ್ಲೇ ಸ್ವಾಗತದೊಂದಿಗೆ ಪಕ್ಷದ ಸಂಘಟನೆಯ ಮಹತ್ವದ ಹುದ್ದೆ ನೀಡಲಾಯಿತು. ಪರಿಷತ್ತಿಗೆ ಕಳುಹಿಸಿ ಸಾಂವಿಧಾನಿಕ ಹುದ್ದೆಯಾದ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳ್ಳಿರಿಸಿ ಅವರ ಅರ್ಹತೆ ಹಾಗೂ ಸಾಮಥ್ರ್ಯಕ್ಕೆ ತಕ್ಕಂತೆ ಗೌರವಿಸಿದ್ದೇವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
. @siddaramaiah ನವರೇ,
— Vijayendra Yediyurappa (@BYVijayendra) July 17, 2025
ಸಾಮಾಜಿಕ ನ್ಯಾಯ, ಮೀಸಲಾತಿ, ಸಂವಿಧಾನದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು ಮತ್ತು ನಿಮ್ಮ ಕಾಂಗ್ರೆಸ್ಸಿನ ಅಸಲಿ ಮುಖವಾಡ ಏನೆಂಬುದು ರಾಜ್ಯದ ಹಾಗೂ ದೇಶದ ಜನತೆಗೆ ತಿಳಿಯಲಿ ಎಂಬ ಕಾರಣದಿಂದ ಅತ್ಯಂತ ಗೌರವದಿಂದ ನಿಮ್ಮ ಕಾಳಜಿ ನೈಜವೇ ಆಗಿದ್ದರೆ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಸ್ಥಾನದ… https://t.co/U00lheCGML







