Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ...

ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ʼಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕುʼ

ವಾರ್ತಾಭಾರತಿವಾರ್ತಾಭಾರತಿ29 Nov 2023 7:13 PM IST
share
ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ: ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಢ್ಯವನ್ನು ತಿರಸ್ಕರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಜಿಲ್ಲೆಯ ಕಾಗಿನೆಲೆ ಕನಕಗುರುಪೀಠದಲ್ಲಿ ಆಯೋಜಿಸಿದ್ದ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾವು ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು. ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮ ಉದ್ದೇಶ ಆಗಿತ್ತು ಎಂದು ಅವರು ನೆನಪು ಮಾಡಿಕೊಂಡರು.

ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, ‘ಇವ ನಮ್ಮವ ಇವ ನಮ್ಮವ’ ಎಂದಿದ್ದು. ಕುವೆಂಪು ಅವರು, ‘ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು’ ಎಂದರು, ಅಂಬೇಡ್ಕರ್ ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು, ಅಂಬೇಡ್ಕರ್, ಕುವೆಂಪು, ಸೂಫಿಗಳ ಆಶಯಗಳೆಲ್ಲಾ ಒಂದೇ ಆಗಿತ್ತು. ಆದುದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಮಲ್ಲೇಶಪ್ಪ ಹೊರಪೇಟೆ ಅವರ ‘ಕನಕನ ಹೆಜ್ಜೆ’ ಮಕ್ಕಳ ಕಾದಂಬರಿಯನ್ನು ಸಿಎಂ ಲೋಕಾರ್ಪಣೆ ಮಾಡಿದರು. ನಿರಂಜನಾನಂದಪುರಿ ಸ್ವಾಮಿ, ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿ, ಹಜರತ್ ಬೀಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡಿಸ್ ಯೇಸ ಸಾನ್ನಿಧ್ಯ ವಹಿಸಿದ್ದರು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉಪಸಭಾಪತಿ ರುದ್ರಪ್ಪ ಲಮಾಣಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X