Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಯಕದಲ್ಲಿ ಮೇಲು - ಕೀಳು ಎಂಬುದಿಲ್ಲ,...

ಕಾಯಕದಲ್ಲಿ ಮೇಲು - ಕೀಳು ಎಂಬುದಿಲ್ಲ, ಎಲ್ಲ ಕಾಯಕವೂ ಸಮಾನ ಘನತೆ ಹೊಂದಿದೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Jan 2024 1:38 PM IST
share
ಕಾಯಕದಲ್ಲಿ ಮೇಲು - ಕೀಳು ಎಂಬುದಿಲ್ಲ, ಎಲ್ಲ ಕಾಯಕವೂ ಸಮಾನ ಘನತೆ ಹೊಂದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಯಕದಲ್ಲಿ ಮೇಲು - ಕೀಳು ಎಂಬುದಿಲ್ಲ, ಎಲ್ಲ ಕಾಯಕವೂ ಸಮಾನ ಘನತೆ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ʼನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆʼ ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಈ ಕಾರಣಕ್ಕೇ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು "ಸರ್ವ ಜನಾಂಗದ ಶಾಂತಿಯ ತೋಟ" ಎಂದು ಕರೆದಿದ್ದಾರೆ ಎಂದು ವಿವರಿಸಿದರು.

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲೀಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮಾನವೀಯ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ ಎಂದರು.

ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ. ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಅದನ್ನು ಪಾಲಿಸಿ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X