Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ...

ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಬರ ವಿಚಾರದಲ್ಲಿ ರಾಜಕೀಯ ಮಾಡಿದರೆ ಅರ್ಥವಿಲ್ಲ

ವಾರ್ತಾಭಾರತಿವಾರ್ತಾಭಾರತಿ15 Sept 2026 2:33 PM IST
share
ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆ. 15: "ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕಿಡಿಕಾರಿದರು.

ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ವಂದೇ ಮಾತರಂ ವಿಚಾರವಾಗಿ ಬಿಜೆಪಿ ಹೋರಾಟಕ್ಕೆ ಕರೆ ನೀಡಿರುವ ಬಗ್ಗೆ ಕೇಳಿದಾಗ, "ಎಲ್ಲದರಲ್ಲೂ ತಪ್ಪು ಕಂಡುಹಿಡಿಯುವ ಪ್ರವೃತ್ತಿ ಬಿಜೆಪಿ ನಾಯಕರದ್ದು. ಒಬ್ಬ ಪೊಲೀಸ್ ಅಧಿಕಾರಿ ಏನು ತಪ್ಪು ಮಾತನಾಡಿದ್ದಾರೆ? ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ. ಅದಕ್ಕೆ ಬಿಜೆಪಿಯವರು ಮಹಾರಾಜರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಪಂಚಾಯಿತಿ ಮಟ್ಟದ ವಿಚಾರಕ್ಕೆ ವಿರೋಧ ಪಕ್ಷದ ನಾಯಕರು ಹೋಗಿದ್ದು, ಅವರು ಈ ಮಟ್ಟಕ್ಕೆ ಇಳಿದಿದ್ದು ಯಾಕೆ ಎಂದು ನನಗೆ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನ ಸಂವಿಧಾನಿಕ ಹುದ್ದೆ. ಅವರಿಂದ ಇನ್ನು ಉನ್ನತ ನಡೆ ನಿರೀಕ್ಷೆ ಮಾಡುತ್ತಿದ್ದೇನೆ" ಎಂದು ತಿಳಿಸಿದರು.

"ಅವರು ಹೇಳಿದರು ಎಂದು ಪ್ರಹ್ಲಾದ್ ಜೋಶಿಯಿಂದ ಹಿಡಿದು ಎಲ್ಲರೂ ಟ್ವೀಟ್ ಮಾಡಿದ್ದಾರೆ. ಸಮಾಜದಲ್ಲಿ ಕಾನೂನು ಪಾಲನೆ ಮಾಡಬೇಕಾಗಿರುವುದು ಯಾರು? ಬಿಜೆಪಿಯವರು ಜನರನ್ನ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದು, ಇನ್ನಾದರೂ ಇದನ್ನು ಬಿಡಲಿ. ಭಾರತಕ್ಕೆ ಕರ್ನಾಟಕದ ಮೂಲಕ ಗೌರವ ಸಿಗುತ್ತಿದ್ದು, ಇಲ್ಲಿ ಅಹಿತಕರ ಘಟನೆ ನಡೆದರೆ ತೊಂದರೆ ಆಗುವುದು ಭಾರತಕ್ಕೆ. ಪ್ರಧಾನ ಮಂತ್ರಿಗಳು ದೇಶದ ಬಗ್ಗೆ ಕಾಣುತ್ತಿರುವ ಕನಸಿಗೆ ಇಲ್ಲಿನ ಬಿಜೆಪಿ ನಾಯಕರು ಧಕ್ಕೆ ತರುವಂತೆ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಮಾಡುವುದನ್ನು ಮಾಡಿ, ಹೋರಾಟ ಮಾಡಿ. ಆದರೆ ಅಶಾಂತಿ ಮೂಡಿಸಿ, ರಾಜ್ಯಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ ಎಂದು ಮನವಿ ಮಾಡುವೆ" ಎಂದು ತಿಳಿಸಿದರು.

ಬರ ವಿಚಾರದಲ್ಲಿ ರಾಜಕೀಯ ಮಾಡಿದರೆ ಅರ್ಥವಿಲ್ಲ

ದಿನೇ ದಿನೇ ಮಳೆ ಕಡಿಮೆಯಾಗುತ್ತಿರುವ ಬಗ್ಗೆ ಕೇಳಿದಾಗ, "ಮಳೆ ಕ್ಷೀಣಿಸುತ್ತಿದೆ. ಶಾಸಕರು ಆತಂಕಪಡುವ ಅಗತ್ಯವಿಲ್ಲ. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಕೆಲವರು ರಾಜಕೀಯಕ್ಕೆ ಈ ಪರಿಸ್ಥಿತಿ ಬಳಸಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಪರಿಶೀಲನೆಗೆ ಬಂದಾಗ ವರದಿ ತಪ್ಪಾಗಿರಬಾರದು. ಕೆಲವು ಭಾಗದಲ್ಲಿ ಅಧ್ಯಯನ ಆಗಿದ್ದು, ಉಳಿದ ಕಡೆ ವರದಿ ಸಿದ್ಧವಾಗುತ್ತಿದೆ. ಒಂದು ವಾರ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಹೇಳಿತ್ತು, ಆದರೆ ಕೆಲ ಭಾಗದಲ್ಲಿ ಸ್ವಲ್ಪ ಮಳೆ ಆಗಿದ್ದು, ಹೇಳಿಕೊಳುವಂತೆ ಆಗಿಲ್ಲ. ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ. ಜನರನ್ನು ಮಾನಸಿಕವಾಗಿ ಸಿದ್ಧಪಡಿಸಿ, ಕುಡಿಯುವ ನೀರು ಪೂರೈಕೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ರೈತರ ಜೊತೆ ಚರ್ಚೆ ಮಾಡಿ ಇನ್ನಷ್ಟು ಘೋಷಣೆ ಮಾಡಲಾಗುವುದು" ಎಂದು ಹೇಳಿದರು.

Tags

BJPCM DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X