Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿಸೆಂಬರ್ ನಂತರ ಸರಕಾರಿ ಆಸ್ಪತ್ರೆಗಳಲ್ಲಿ...

ಡಿಸೆಂಬರ್ ನಂತರ ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರದು: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ16 Sept 2023 6:12 PM IST
share
ಡಿಸೆಂಬರ್ ನಂತರ ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರದು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಸೆ. 16: ‘ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಸಮಸ್ಯೆ ಪರಿಹರಿಸಲಾಗುತ್ತಿದ್ದು, ಡಿಸೆಂಬರ್ ಬಳಿಕ ಯಾವುದೇ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶನಿವಾರ ಇಲ್ಲಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕರಿಸಿದ ತುರ್ತು ನಿಗಾ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ‘ಡಿಸೆಂಬರ್ ಬಳಿಕ ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ ಸಿಗುತ್ತಿಲ್ಲ ಎಂದು ಯಾರು ಹೇಳಬಾರದು. ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಔಷಧಿಗಳನ್ನ ಆಸ್ಪತ್ರೆಗಳಿಗೆ ಪೂರೈಸುವಂತೆ ರಾಜ್ಯ ಔಷಧಿ ಸರಬರಾಜು ಕಾರ್ಪೊರೇಷನ್ ತಾಕೀತು ಮಾಡಿದ್ದೇನೆ’ ಎಂದು ಹೇಳಿದರು.

‘ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಜೊತೆಗೆ ಉಚಿತ ಔಷಧಿಗಳು ಸಿಗುವಂತಾಗಬೇಕು. ಸರಿಯಾಗಿ ಔಷಧಿಗಳು ಸಿಕ್ಕಾಗ ಮಾತ್ರ ಸರಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸಲು ಸಾಧ್ಯ. ಹಾಗೆ ನೋಡಿದರೆ ಆಸ್ಪತ್ರೆಯ ಹೊರಗಡೆ ಜನ ಔಷಧಿ ಕೇಂದ್ರಗಳ ಅವಶ್ಯಕತೆಯೇ ಇಲ್ಲ. ಆಸ್ಪತ್ರೆಗಳಲ್ಲೇ ಔಷಧಿಗಳು ಸರಿಯಾಗಿ ದೊರೆತರೆ ಜನರು ಔಷಧಿ ಪಡೆಯಲು ತಿರುಗಾಡುವ ಅಗತ್ಯತೆಯೇ ಬರುವುದಿಲ್ಲ. ವೈದ್ಯರು ರೋಗಿಗಳಿಗೆ ಚೀಟಿ ಬರೆದುಕೊಡುವ ಪದ್ದತಿಯನ್ನ ಬದಲಿಸಬೇಕು ಎಂದರು.

10 ಕೋಟಿ ರೂ.ವೆಚ್ಚದಲ್ಲಿ ಕಾಯಕಲ್ಪ: ‘ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಕಾರ್ಯಕ್ರಮಗಳನ್ನ ಕೈಗೆತ್ತಿಕೊಳ್ಳಲಾಗುವುದು. ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆ ಉತ್ತಮ ಕಾರ್ಯ ನಿರ್ವಹಿಸಿದೆ. ಆಸ್ಪತ್ರೆಯ ಆಡಳಿತ ವಿಚಾರಗಳಲ್ಲಿ ಇದ್ದ ಸಮಸ್ಯೆ ಪರಿಹರಿಸಲಾಗಿದೆ. ನಾನು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿದ್ದೆ ಎಂದು ಹೇಳಿದರು.

ತುರ್ತು ನಿಗಾ ಘಟಕ: ‘ಕೆನರಾ ಬ್ಯಾಂಕ್ ಆಶ್ರಯದಲ್ಲಿ 4ಕೋಟಿ ರೂ.ವೆಚ್ಚದಲ್ಲಿ ಆಸ್ಪತ್ರೆಯ ತುರ್ತು ನಿಗಾ ಘಟಕವನ್ನ ನವೀಕರಣಗೊಳಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಈ ರೀತಿಯ ಕಾರ್ಯಗಳನ್ನ ನಡೆಸಲು ಹೆಚ್ಚು ದಾನಿಗಳು ಮುಂದಬರಬೇಕು. ಆರೋಗ್ಯ ಸೇವೆ ಜೀವಗಳನ್ನ ಉಳಿಸುವ ಮಹತ್ವದ ಕಾರ್ಯ. ಇಂತಹ ಪುಣ್ಯದ ಕೆಲಸಕ್ಕೆ ಕೈಜೋಡಿಸಿದಾಗ ದಾನಿಗಳಿಗೆ ತೃಪ್ತಿ ನೀಡಲಿದೆ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X