Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ 1000 ಸ್ಮಾರಕಗಳ ದತ್ತು ನೀಡಲು...

ರಾಜ್ಯದ 1000 ಸ್ಮಾರಕಗಳ ದತ್ತು ನೀಡಲು ಚಿಂತನೆ: ಸಚಿವ ಎಚ್.ಕೆ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ7 Nov 2023 2:18 PM IST
share
ರಾಜ್ಯದ 1000 ಸ್ಮಾರಕಗಳ ದತ್ತು ನೀಡಲು ಚಿಂತನೆ: ಸಚಿವ ಎಚ್.ಕೆ. ಪಾಟೀಲ್

ಕಲಬುರಗಿ: ರಾಜ್ಯದ ಒಟ್ಟು 1000 ಸ್ಮಾರಕಗಳ ದತ್ತು ಕೊಡುವ ಉದ್ದೇಶವಿದ್ದು ಇದು ಎರಡು ವರ್ಷದಲ್ಲಿ ಈಡೇರಿಸುವ ಆಸೆ ಇದೆ. ಈ ಎಲ್ಲ ಸ್ಮಾರಕಗಳ ರಕ್ಷಣೆಯ ಬಗ್ಗೆ ಪುಸ್ತಕಗಳ ಪ್ರಕಟನೆ ಸೇರಿದಂತೆ ಜನರಿಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ‌ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ನಮ್ಮ ಸ್ಮಾರಕದರ್ಶನ ಹಾಗೂ ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡುತ್ತಿದ್ದರು.

ಇತಿಹಾಸಕಾರರು ನಾಗಾವಿ ನಾಡಿನ ಗತವೈಭವ ಸಾರುವ ನಾಗಾವಿ ಘಟಿಕಸ್ಥಾನದ ಕುರಿತು ವಿವರಿಸುವಾಗ ನನಗೆ ಹಂಡೆ ಹಾಲು ಕುಡಿದಷ್ಟೇ ಸಂತಸವಾಯಿತು. ಕನ್ನಡದ ಮೊಟ್ಟ ಮೊದಲ ವಿಶ್ವವಿದ್ಯಾಲಯ ನಾಗಾವಿ ವಿ ವಿ ಎಂದು ತಿಳಿದು ಖುಷಿ ಪಟ್ಟೆ. ಎಲ್ಲರೂ ನಳಂದ ವಿವಿ ಮೊಟ್ಟಮೊದಲ ವಿವಿ ಎಂದು ಹೇಳುತ್ತಾರೆ. ಆದರೆ ಕನ್ನಡದ ಮೊಟ್ಟಮೊದಲ ವಿವಿ ನಾಗಾವಿ ವಿವಿ ಇಲ್ಲಿ ಕಾನೂನು, ಗಣಿತ, ವೇದ, ಮನು ಸಾಹಿತ್ಯ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತಿತ್ತು. ಸುಮಾರು 1800 ವರ್ಷಗಳ ಹಿಂದೆ ವಿವಿ ಕೆಲಸ ಮಾಡುತ್ತಿತ್ತು ಎನ್ನುವುದೇ ಹಿರಿಮೆ ಎಂದು ಹೊಗಳಿದರು.

ಈ ನಾಡಿನ ಬಗ್ಗೆ ನಮಗೆಲ್ಲ ಅಭಿಮಾನ ಇರಬೇಕು ಎಂದು ಹೇಳಿದ ಸಚಿವ ಪಾಟೀಲ್ ಇದು ನಮ್ಮ ಸಂಸ್ಕೃತಿ, ಪರಂಪರೆ ಇದ್ದು ನಾವೆಲ್ಲ ಇದರ ವಾರಸುದಾರರು. ಹಾಗಾಗಿ ಈ ಸ್ಮಾರಕಗಳನ್ನು ನಾವೆಲ್ಲ ಹೆಮ್ಮೆಯಿಂದ ರಕ್ಷಿಸಬೇಕು. ಇವುಗಳ ರಕ್ಷಣೆಗೆ ಈಗಾಗಲೇ ಹಲವರು ಕೈಜೋಡಿಸಿದ್ದಾರೆ. ಇದು ಖುಷಿಯ ಸಂಗತಿಯಾಗಿದೆ ಎಂದರು.

ನಾಗಾವಿ ವಿವಿ ಪುನರುಜ್ಜೀವನ ಗೊಳ್ಳಬೇಕು ಇದಕ್ಕೆ ಬೇಕಾಗುವ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದ ಎಂದು ಸಚಿವ ಪ್ರಿಯಾಂಕ್ ಅವರಿಗೆ ಭರವಸೆ ನೀಡಿದ ಸಚಿವ ಪಾಟೀಲ್ ಮತ್ತೆ ಈ ವಿವಿಯನ್ನು ನಾವು ಕಟ್ಟಬೇಕು. ನಾಗಾವಿ ಹೆಸರನ್ನು ಯಾವುದೇ ವಿವಿಗೆ ಇಡುವ ಮೂಲಕ ಸಿಮಿತಗೊಳಿಸುವುದು ಬೇಡ ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮುನ್ನ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕರ್ನಾಟಕ ಹಲವಾರು ವೈವಿದ್ಯತೆಗಳಿಂದ‌ ಕೂಡಿದೆ. ಪ್ರತಿ ೧೫೦ ಕಿಮಿಗಳಿಗೆ ಭಾಷೆ, ಆಚಾರ ವಿಚಾರ ಸಂಸ್ಕೃತಿ ಬದಲಾಗುತ್ತದೆ. ಹಾಗಾಗಿ ನಮ್ಮ ರಾಜ್ಯವನ್ನು ಒಂದು ರಾಜ್ಯ ಹಲವು ಜಗತ್ತುಗಳು ಎಂದೇ ಕರೆಯಲಾಗುತ್ತದೆ ಎಂದರು.

ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ ಹಾಗೂ ಸ್ಮಾರಕಗಳನ್ನು ಜನರಿಗೆ ತಿಳಿಸಬೇಕಿದೆ ಎಂದು ಅಭಿಪ್ರಾಯಪಟ್ಟ ಅವರು, ಹುಲಿ ಸಂರಕ್ಷತ ಅರಣ್ಯ, ಅಪರೂಪದ ಸ್ಮಾರಕಗಳು ಸೇರಿದಂತೆ ಹಲವಾರು ಪ್ರಾಣಿಗಳ-ಪಕ್ಷಿಗಳ ರಕ್ಷಿತಾರಣ್ಯ ಇದೆ. ಈ ಎಲ್ಲವೂ ನಮ್ಮ ಸಂಸ್ಕೃತಿಯ ಭಾಗವಾಗಿವೆ. ಈ ಎಲ್ಲವೂಗಳನ್ನು ಸಂರಕ್ಷಣೆ ಮಾಡುವ ಹೊಣೆಗಾರಿಕೆ ಎಲ್ಲರಿಗೂ ಇದೆ. ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಇತ್ತೀಚಿಗೆ ನಡೆದ ಮಾತುಕತೆಯಲ್ಲಿ ಇಲ್ಲಿನ ಓರಿಯಂಟಿಲ್‌ ಸಿಮೆಂಟ್ ಕಂಪನಿಯೊಂದು ನಾಗಾವಿ ಯಲ್ಲಮ್ಮ ದೇವಾಲಯದ‌ ಅಭಿವೃದ್ದಿಗೆ ಮುಂದೆ ಬಂದಿದೆ. ಸಧ್ಯದಲ್ಲೇ ಆ ಕೆಲಸ ನಡೆಯಲಿದೆ. ಹಾಗಾಗಿ, ತಮ್ಮ ಸಲಹೆ, ಸಹಕಾರ ಇರಬೇಕು ಎಂದು ಸಚಿವ ಎಚ್ ಕೆ ಪಾಟೀಲ್ ಅವರಿಗೆ ಮನವಿ ಮಾಡಿದರು.

ವೇದಿಕೆಯ ಮೇಲೆ ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಎಸ್ ಪಿ ಶ್ರೀನಿವಾಸಲು ಅಡ್ಡೂರು‌ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X