Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಷತ್‍ನಲ್ಲಿ ‘ವಾರ್ತಾಭಾರತಿ’ ವರದಿ...

ಪರಿಷತ್‍ನಲ್ಲಿ ‘ವಾರ್ತಾಭಾರತಿ’ ವರದಿ ಉಲ್ಲೇಖ; ಸರಕಾರದ ಗಮನ ಸೆಳೆದ ಸದಸ್ಯ ತಿಪ್ಪಣ್ಣಪ್ಪ ಕಮಕನೂರ

ವಾರ್ತಾಭಾರತಿವಾರ್ತಾಭಾರತಿ18 Aug 2026 8:23 PM IST
share
ಪರಿಷತ್‍ನಲ್ಲಿ ‘ವಾರ್ತಾಭಾರತಿ’ ವರದಿ ಉಲ್ಲೇಖ; ಸರಕಾರದ ಗಮನ ಸೆಳೆದ ಸದಸ್ಯ ತಿಪ್ಪಣ್ಣಪ್ಪ ಕಮಕನೂರ

ಬೆಂಗಳೂರು : ‘ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಹಾಗೂ ಅತ್ಯಾಚಾರ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಮುಂದುವರಿದಿದ್ದು, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸರಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಆಡಳಿತ ಪಕ್ಷದ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ‘ವಾರ್ತಾಭಾರತಿ’ ಪತ್ರಿಕೆಯಲ್ಲಿನ ವಿಶೇಷ ವರದಿಯನ್ನು ಉಲ್ಲೇಖಿಸಿ ಸರಕಾರದ ಗಮನ ಸೆಳೆದಿದ್ದಾರೆ.

ಮಂಗಳವಾರ ಪರಿಷತ್ ಶೂನ್ಯವೇಳೆಯಲ್ಲಿ ‘ವಾರ್ತಾಭಾರತಿ’ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಗಂಭೀರ ವಿಚಾರವಾಗಿದೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಆಗ್ರಹಿಸಿದರು.

ದಲಿತರ ಮೇಲಿನ ದೌರ್ಜನ್ಯ ತಡೆಗೆ ಜಾರಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಾಯ್ದೆಯಡಿ ದಾಖಲಾಗುವ ದೂರುಗಳ ತನಿಖೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸರಕಾರದಿಂದ ದೊರೆಯಬೇಕಾದ ಪರಿಹಾರ, ಕಾನೂನು ನೆರವು ಹಾಗೂ ರಕ್ಷಣೆಯನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಪ್ರಕರಣಗಳ ತನಿಖೆ ಮತ್ತು ವಿಚಾರಣೆಯಲ್ಲಿ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕಾಗಿದೆ ಎಂದು ಅವರು ಹೇಳಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಸಂಬಂಧಪಟ್ಟ ಸಮಿತಿಗಳ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಪ್ರಕರಣಗಳ ತನಿಖೆ, ನ್ಯಾಯಾಲಯದ ವಿಚಾರಣೆ, ಸಂತ್ರಸ್ತರಿಗೆ ಪರಿಹಾರ ಹಾಗೂ ಕಾನೂನು ನೆರವು ಸೇರಿದಂತೆ ಪ್ರತಿಯೊಂದು ಹಂತದ ಪ್ರಗತಿಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದರು.

Tags

Thippanappa KamakanuraMonsoon session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X