Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು...

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Oct 2025 1:54 PM IST
share
ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳ ಜಿಲ್ಲೆ ಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬುದಕ್ಕೆ ಉತ್ತರಿಸಿ, ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು. ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಬಲ್ಡೋಟಾ ಕಾರ್ಖಾನೆ :

ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X