Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ...

ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ10 Jan 2024 4:33 PM IST
share
ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅವರು ಮಾತನಾಡಿದ ಅವರು, ʼಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು.

ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ತೊಂದರೆಯಾಗಿಲ್ಲ

ಗ್ಯಾರಂಟಿ ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿಲ್ಲ ಎಂದರು.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಷಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಪ್ರಾರಂಭಿಸಲಾಗಿದೆ ಎಂದರು.

ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇವರಿಗೆ ಮರ್ಯಾದೆ ಇದೆಯೇ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15 ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1 ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ ಎಂದು ಪ್ರಶ್ನಿಸಿದರು.

2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು . 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X